AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್-ಸುಕುಮಾರ್ ಸಿನಿಮಾ ಮಾಡೋ ಸುದ್ದಿ ಶುದ್ಧ ಸುಳ್ಳು; ಇಲ್ಲಿದೆ ಸಾಕ್ಷಿ

ಇತ್ತೀಚೆಗೆ ಸುಕುಮಾರ್ ಮತ್ತು ಶಾರುಖ್ ಖಾನ್ ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎಂಬ ವದಂತಿಗಳು ಹಬ್ಬಿವೆ. ಆದರೆ, ಈ ಸುದ್ದಿಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಸುಕುಮಾರ್ ಅವರು ಪ್ರಸ್ತುತ ರಾಮ್ ಚರಣ್ ಜೊತೆ ಚಿತ್ರ ನಿರ್ಮಾಣದಲ್ಲಿ ನಿರತರಾಗಿದ್ದಾರೆ. ಸದ್ಯಕ್ಕೆ ಸುಕುಮಾರ್ ಅವರು ಹಿಂದಿ ಚಿತ್ರಗಳಲ್ಲಿ ಆಸಕ್ತಿ ಹೊಂದಿಲ್ಲ ಎಂಬುದು ಸ್ಪಷ್ಟವಾಗಿದೆ.

ಶಾರುಖ್ ಖಾನ್-ಸುಕುಮಾರ್ ಸಿನಿಮಾ ಮಾಡೋ ಸುದ್ದಿ ಶುದ್ಧ ಸುಳ್ಳು; ಇಲ್ಲಿದೆ ಸಾಕ್ಷಿ
ಶಾರುಖ್​-ಸುಕುಮಾರ್
TV9 Web
| Edited By: |

Updated on: Mar 20, 2025 | 7:33 AM

Share

ನಿರ್ದೇಶಕ ಸುಕುಮಾರ್ ಹಾಗೂ ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಜೋರಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವರದಿಗಳು ಕೂಡ ಹರಿದಾಡುತ್ತಾ ಇವೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಕೆಲವು ವರದಿಗಳ ಪ್ರಕಾರ ಇದು ಸುಳ್ಳು ಎಂದು ಹೇಳಲಾಗುತ್ತಿದೆ. ಇದಕ್ಕೆ ಸರಿಯಾದ ಸಾಕ್ಷಿಗಳನ್ನು ಒದಗಿಸೋ ಕೆಲಸವನ್ನು ಫ್ಯಾನ್ಸ್ ಮಾಡಿದ್ದಾರೆ. ಆ  ಬಗ್ಗೆ ಈ ಲೇಖನದಲ್ಲಿ ವಿವರ ಇದೆ.

ಶಾರುಖ್ ಖಾನ್ ಅವರು ಈ ಮೊದಲು ದಕ್ಷಿಣದ ನಿರ್ದೇಶಕ ಅಟ್ಲಿ ಜೊತೆ ಸಿನಿಮಾ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆ ಮಾಡಿದೆ. ಈ ಚಿತ್ರದ ಬಳಿಕ ಶಾರುಖ್ ಖಾನ್ ಅವರಿಗೆ ದಕ್ಷಿಣದ ನಿರ್ದೇಶಕರ ಬಗ್ಗೆ ನಂಬಿಕೆ ಬಂದಿದೆ. ಈ ಕಾರಣಕ್ಕೆ ಈಗ ‘ಪುಷ್ಪ 2’ ಚಿತ್ರ ಹಿಟ್ ಆಗುತ್ತಿದ್ದಂತೆ ಕೆಲವರು ಶಾರುಖ್ ಹಾಗೂ ಸುಕುಮಾರ್ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹಬ್ಬಿಸಿದರು.

ಇಷ್ಟಕ್ಕೆ ನಿಂತಿಲ್ಲ. ಸುಕುಮಾರ್ ಅವರು ಸಿನಿಮಾ ವಿಚಾರದ ಚರ್ಚೆಗಾಗಿ ಮುಂಬೈಗೆ ಹಾರಿದ್ದರು ಎಂದೆಲ್ಲ ವರದಿ ಆಗಿದೆ. ಆದರೆ, ಈ ವರದಿಯಲ್ಲಿ ಯಾವುದೇ ಹುರುಳಿಲ್ಲ. ಇತ್ತೀಚೆಗೆ ಸುಕುಮಾರ್ ಅವರು ಮುಂಬೈಗೆ ತೆರಳಿದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ಒಂದೊಮ್ಮೆ ಹೋಗಿದ್ದರೆ ಅಲ್ಲಿನ ಪಾಪರಾಜಿಗಳು ಅವರನ್ನು ಸುತ್ತಿಕೊಳ್ಳುತ್ತಿದ್ದರು.

ಇದನ್ನೂ ಓದಿ
Image
ಪ್ರಶಾಂತ್ ನೀಲ್ ನಿರ್ದೇಶನದ ಹಿಟ್ ಚಿತ್ರ ರೀ-ರಿಲೀಸ್; ದಾಖಲೆ ಗಳಿಕೆ
Image
ತನ್ನದೇ ಹೆಸರನ್ನು ತಪ್ಪಾಗಿ ಕರೆದುಕೊಂಡು ರಣಬೀರ್; ಆಮಿರ್ ರಿಯಾಕ್ಷನ್ ನೋಡಿ
Image
ರಾಮ್ ಚರಣ್ ಮುಂದಿನ ಚಿತ್ರದಲ್ಲಿ ನಟಿಸಲಿದ್ದಾರೆ ಎಂಎಸ್ ಧೋನಿ?
Image
ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಸದ್ಯದ ಪರಿಸ್ಥಿತಿಯಲ್ಲಿ ಸುಕುಮಾರ್ ಅವರಿಗೆ ಯಾವುದೇ ಹಿಂದಿ ಸಿನಿಮಾಗಳನ್ನು ನಿರ್ದೇಶನ ಮಾಡುವ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ. ಅವರು ತೆಲುಗು ಚಿತ್ರಗಳನ್ನೇ ಮಾಡಿ ಅದನ್ನು ಪ್ಯಾನ್ ಒಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡುವ ಕೆಲಸ ಮಾಡುತ್ತಾ ಇದ್ದಾರೆ.

ಇದನ್ನೂ ಓದಿ: ಕೇಳಿದರೂ ಮಗಳಿಗೆ ಕೊಡಲಿಲ್ಲ ‘ಪುಷ್ಪ’ ಸಿನಿಮಾದಲ್ಲಿ ಪಾತ್ರ: ಸುಕುಮಾರ್ ಹೇಳಿದ್ದೇನು?

ಸದ್ಯ ರಾಮ್ ಚರಣ್ ಜೊತೆ ಸುಕುಮಾರ್ ಸಿನಿಮಾ ಮಾಡಬೇಕಿದೆ. ‘ಪುಷ್ಪ 2’ ಬಳಿಕ ಅವರು ಬ್ರೇಕ್ ಪಡೆದುಕೊಂಡಿದ್ದಾರೆ. ತಮ್ಮ ಬ್ಯಾನರ್ ಮೂಲಕ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇವುಗಳ ಸ್ಕ್ರಿಪ್ಟ್​ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.  2026ರ ವೇಳೆಗೆ ರಾಮ್ ಚರಣ್ ಹಾಗೂ ಸುಕುಮಾರ್ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ