ಶೂಟಿಂಗ್ ವೇಳೆ ಸುನೀಲ್ ಶೆಟ್ಟಿಗೆ ಗಾಯ; ಎಕ್ಸ್ ರೇ ಮಷಿನ್ ಜತೆ ಓಡೋಡಿ ಬಂದ ವೈದ್ಯರು

ಸುನೀಲ್ ಶೆಟ್ಟಿ ಅವರು ‘ಹಂಟರ್’ ವೆಬ್ ಸರಣಿಯ ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ಸಮಯದಲ್ಲಿ ಗಾಯಗೊಂಡಿದ್ದಾರೆ. ಪಕ್ಕೆಲುಬಿಗೆ ಗಾಯ ಆಗಿರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಅವರು ಒಂದಷ್ಟು ದಿನ ವಿಶ್ರಾಂತಿ ಪಡೆಯಬೇಕಾಗಿದೆ. ಹಾಗಾಗಿ ಶೂಟಿಂಗ್‌ಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದ್ದಾರೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಶೂಟಿಂಗ್ ವೇಳೆ ಸುನೀಲ್ ಶೆಟ್ಟಿಗೆ ಗಾಯ; ಎಕ್ಸ್ ರೇ ಮಷಿನ್ ಜತೆ ಓಡೋಡಿ ಬಂದ ವೈದ್ಯರು
ಸುನೀಲ್ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Nov 07, 2024 | 4:05 PM

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಅಭಿಮಾನಿಗಳಿಗೆ ಇದು ಬ್ಯಾಡ್ ನ್ಯೂಸ್​. ಆ್ಯಕ್ಷನ್​ ಸಿನಿಮಾಗಳ ಮೂಲಕ ಹೆಸರುವಾಸಿ ಆಗಿರುವ ಅವರು ಸಾಹಸ ಸನ್ನಿವೇಶದ ಶೂಟಿಂಗ್​ ವೇಳೆ ಪೆಟ್ಟು ಮಾಡಿಕೊಂಡಿದ್ದಾರೆ. ರೋಚಕವಾದ ಫೈಟಿಂಗ್​ ದೃಶ್ಯದ ಶೂಟಿಂಗ್ ಮಾಡುತ್ತಿದ್ದಾಗ ಹಲವು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ಸುನೀಲ್ ಶೆಟ್ಟಿ ಅವರ ಪಕ್ಕೆಲುಬಿಗೆ ಗಾಯ ಆಗಿದೆ. ಕೂಡಲೇ ಶೂಟಿಂಗ್ ಸ್ಥಳಕ್ಕೆ ವೈದ್ಯರನ್ನು ಕರೆಸಲಾಗಿದೆ. ಗಾಯದ ತೀವ್ರತೆ ಎಷ್ಟಿದೆ ಎಂಬುದನ್ನು ತಿಳಿಯಲು ಚಿತ್ರೀಕರಣದ ಸ್ಥಳದಲ್ಲೇ ಎಕ್ಸ್​ ರೇ ಕೂಡ ಮಾಡಲಾಗಿದೆ.

ಸುನೀಲ್ ಶೆಟ್ಟಿ ಅವರು ‘ಹಂಟರ್​’ ವೆಬ್ ಸರಣಿಯಲ್ಲಿ ನಟಿಸುತ್ತಿದ್ದಾರೆ. ಮುಂಬೈನಲ್ಲಿ ಸೆಟ್​ ಹಾಕಿ ಇದರ ಚಿತ್ರೀಕರಣ ಮಾಡಲಾಗುತ್ತಿದೆ. ಆ್ಯಕ್ಷನ್​ ಸನ್ನಿವೇಶಗಳ ಸಮಯದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ‘ಹಂಟರ್​’ ತಂಡ ಕೂಡ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಂಡಿತ್ತು. ಆದರೂ ಕೂಡ ಆಕಸ್ಮಿಕವಾಗಿ ಸುನೀಲ್ ಶೆಟ್ಟಿ ಅವರಿಗೆ ಗಾಯವಾಗಿದೆ.

ಈಗ ಸುನೀಲ್ ಶೆಟ್ಟಿ ಅವರಿಗೆ 63 ವರ್ಷ ವಯಸ್ಸು. ಹಾಗಾಗಿ ಗಾಯದ ಬಗ್ಗೆ ಅವರು ನಿರ್ಲಕ್ಷ್ಯ ಮಾಡುವಂತಿಲ್ಲ. ‘ಹಂಟರ್​’ ಶೂಟಿಂಗ್ ವೇಳೆ ಅವರಿಗೆ ಪೆಟ್ಟಾಗುತ್ತಿದ್ದಂತಯೇ ವೈದ್ಯರು ಎಕ್ಸ್​ ರೇ ಮಷಿನ್ ಹಿಡಿದುಕೊಂಡು ಚಿತ್ರೀಕರಣದ ಸ್ಥಳಕ್ಕೆ ಓಡೋಡಿ ಬಂದರು ಎಂದು ವರದಿ ಆಗಿದೆ. ಅವರ ಹೆಲ್ತ್​ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಸುನೀಲ್ ಶೆಟ್ಟಿ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಸುನೀಲ್ ಶೆಟ್ಟಿ ಒಟ್ಟೂ ಆಸ್ತಿ ಎಷ್ಟು? ಈ ನಟನ ಸಂಪಾದನೆಗೆ ಇದೆ ಹಲವು ಮಾರ್ಗ

ವರದಿಗಳ ಪ್ರಕಾರ, ಸುನೀಲ್ ಶೆಟ್ಟಿ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಒಂದಷ್ಟು ದಿನಗಳ ಕಾಲ ಶೂಟಿಂಗ್​ಗೆ ಬ್ರೇಕ್​ ನೀಡಲು ಸುನೀಲ್ ಶೆಟ್ಟಿ ನಿರ್ಧರಿಸಿದ್ದಾರೆ. ಸಿನಿಮಾದಲ್ಲಿ ಮಿಂಚಿದ ಹಲವು ಸ್ಟಾರ್​ ಕಲಾವಿದರು ವೆಬ್ ಸರಣಿಯಲ್ಲೂ ಹೆಸರು ಮಾಡಿದ್ದಾರೆ. ಆ ಸಾಲಿಗೆ ಸುನೀಲ್ ಶೆಟ್ಟಿ ಕೂಡ ಸೇರ್ಪಡೆ ಆಗುತ್ತಿದ್ದಾರೆ. ಈ ಮೊದಲು ಅವರು ‘ಧಾರಾವಿ ಬ್ಯಾಂಕ್’ ವೆಬ್ ಸಿರೀಸ್​ನಲ್ಲಿ ನಟಿಸಿದ್ದರು. ಈಗ ಅವರು ‘ಹಂಟರ್​’ ವೆಬ್ ಸರಣಿಯಲ್ಲಿ ಪೊಲೀಸ್ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್