AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಬಗ್ಗೆ ಹಬ್ಬಿದ ಎಲ್ಲಾ ವದಂತಿಗೆ ಸ್ಪಷ್ಟನೆ ನೀಡಿದ ನಟ ಸನ್ನಿ ಡಿಯೋಲ್

ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ ಆಗಸ್ಟ್ 11ರಂದು ರಿಲೀಸ್ ಆಯಿತು. ಈ ಚಿತ್ರ ಎರಡು ವಾರ ಕಳೆಯುವುದರೊಳಗೆ ಸುಮಾರು 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಯಾವ ಸ್ಟಾರ್ ಹೀರೋಗೂ ಕಡಿಮೆ ಇಲ್ಲ ಅನ್ನೋದನ್ನು ಅವರು ಸಾಬೀತು ಮಾಡಿದ್ದಾರೆ.

ತಮ್ಮ ಬಗ್ಗೆ ಹಬ್ಬಿದ ಎಲ್ಲಾ ವದಂತಿಗೆ ಸ್ಪಷ್ಟನೆ ನೀಡಿದ ನಟ ಸನ್ನಿ ಡಿಯೋಲ್
ಗದರ್ 2
ರಾಜೇಶ್ ದುಗ್ಗುಮನೆ
|

Updated on: Aug 22, 2023 | 6:30 AM

Share

ಒಂದು ಸಿನಿಮಾ ಹಿಟ್ ಆದ ಬಳಿಕ ಚಿತ್ರದಲ್ಲಿ ನಟಿಸಿದ ಎಲ್ಲಾ ಕಲಾವಿದರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗುತ್ತದೆ. ಇದರ ಜೊತೆಗೆ ಒಂದಷ್ಟು ವದಂತಿಗಳು ಕೂಡ ಹುಟ್ಟಿಕೊಳ್ಳುತ್ತವೆ. ಈಗ ಸನ್ನಿ ಡಿಯೋಲ್ (Sunny Deol) ಅವರಿಗೂ ಹಾಗೇಯೇ ಆಗಿದೆ. ‘ಗದರ್ 2’ ಸಿನಿಮಾದಿಂದ ಅವರ ಖ್ಯಾತಿ ಹೆಚ್ಚಾಗಿದೆ. ಜೊತೆಗೆ ಒಂದಷ್ಟು ವದಂತಿಗಳು ಹುಟ್ಟಿಕೊಂಡಿವೆ. ‘ಸನ್ನಿ ಡಿಯೋಲ್​ಗೆ ಹಲವು ಆಫರ್​ಗಳು ಬರುತ್ತಿವೆ. ಆದರೆ, ಇವೆಲ್ಲ ಬದಿಗಿಟ್ಟು ಬಾರ್ಡರ್ ಸೀಕ್ವೆಲ್​ನಲ್ಲಿ ಅವರು ನಟಿಸುತ್ತಿದ್ದಾರೆ’ ಎಂದು ವರದಿ ಆಗಿತ್ತು. ಈ ಬಗ್ಗೆ ಸನ್ನಿ ಡಿಯೋಲ್ ಸ್ಪಷ್ಟನೆ ನೀಡಿದ್ದಾರೆ.

ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ ಆಗಸ್ಟ್ 11ರಂದು ರಿಲೀಸ್ ಆಯಿತು. ಈ ಚಿತ್ರ ಎರಡು ವಾರ ಕಳೆಯುವುದರೊಳಗೆ ಸುಮಾರು 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಯಾವ ಸ್ಟಾರ್ ಹೀರೋಗೂ ಕಡಿಮೆ ಇಲ್ಲ ಅನ್ನೋದನ್ನು ಅವರು ಸಾಬೀತು ಮಾಡಿದ್ದಾರೆ. ಆ್ಯಕ್ಷನ್ ಪ್ರಿಯರಿಗೆ ಸಿನಿಮಾ ಇಷ್ಟವಾಗಿದೆ. ಈಗ ಸನ್ನಿ ತಮ್ಮ ಬಗ್ಗೆ ಹುಟ್ಟಿಕೊಂಡ ಸುಳ್ಳು ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಕೆಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ ಎಂದು ಹಲವು ಕಡೆಗಳಲ್ಲಿ ವರದಿ ಆಗಿದೆ. ಆದರೆ ನನ್ನ ಗಮನ ಸದ್ಯ ‘ಗದರ್ 2’ ಚಿತ್ರದ ಮೇಲೆ ಮಾತ್ರ ಇದೆ. ನಿಮ್ಮ ಪ್ರೀತಿಯನ್ನು ಸ್ವೀಕರಿಸುವುದರಲ್ಲಿ ಬ್ಯುಸಿ ಇದ್ದೇನೆ. ನಾನು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ನಾನು ಒಂದು ವಿಶೇಷ ವಿಷಯವನ್ನು ಶೀಘ್ರವೇ ಘೋಷಿಸುವೆ. ಅಲ್ಲಿಯವರೆಗೆ ನೀವು ಪ್ರೀತಿ ತೋರಿಸುತ್ತಿರಿ’ ಎಂದಿದ್ದಾರೆ ಸನ್ನಿ ಡಿಯೋಲ್.

ಇದನ್ನೂ ಓದಿ: ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು

ಸನ್ನಿ ಡಿಯೋಲ್ ಅವರ ಮುಂಬೈನ ಜುಹುದಲ್ಲಿರುವ ಬಂಗಲೆ ಹರಾಜಿಗೆ ಬಂದಿದೆ. ಮಾಡಿರುವ 56 ಕೋಟಿ ರೂಪಾಯಿ ಸಾಲವನ್ನು ತೀರಿಸದ ಕಾರಣ ಈ ಮನೆ ಹರಾಜಿಗೆ ಇಡಲು ಬ್ಯಾಂಕ್ ಆಫ್ ಬರೋಡಾ ಮುಂದಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ಸದ್ಯ ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಸನ್ನಿ ಡಿಯೋಲ್ ಅವರ ಈ ಬಂಗಲೆ ಸಾಕಷ್ಟು ಐಷಾರಾಮಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು