410 ಕೋಟಿ ರೂಪಾಯಿ ದಾಟಿದರೂ ನಿಂತಿಲ್ಲ ‘ಗದರ್​ 2’ ಅಬ್ಬರ: ಸನ್ನಿ ಡಿಯೋಲ್​ಗೆ ಖುಷಿಯೋ ಖುಷಿ

ಮಲ್ಟಿಪ್ಲೆಕ್ಸ್​ಗಳಲ್ಲಿ ‘ಗದರ್​ 2’ ಚಿತ್ರ ಚೆನ್ನಾಗಿ ಪ್ರದರ್ಶನ ಕಂಡಿದೆ. ಅದಕ್ಕಿಂತಲೂ ಉತ್ತಮವಾಗಿ ಸಿಂಗಲ್​ ಸ್ಕ್ರೀನ್​ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಅಬ್ಬರಿಸಿದೆ. ತುಂಬ ಮಾಸ್​ ಆಗಿ ಮೂಡಿಬಂದಿರುವ ಈ ಚಿತ್ರವನ್ನು ಆ್ಯಕ್ಷನ್​ ಪ್ರಿಯರು ಇಷ್ಟಪಟ್ಟಿದ್ದಾರೆ. ಮತ್ತೆ ಮತ್ತೆ ಚಿತ್ರಮಂದಿರಕ್ಕೆ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ.

410 ಕೋಟಿ ರೂಪಾಯಿ ದಾಟಿದರೂ ನಿಂತಿಲ್ಲ ‘ಗದರ್​ 2’ ಅಬ್ಬರ: ಸನ್ನಿ ಡಿಯೋಲ್​ಗೆ ಖುಷಿಯೋ ಖುಷಿ
ಗದರ್ 2
Follow us
ಮದನ್​ ಕುಮಾರ್​
|

Updated on: Aug 24, 2023 | 4:53 PM

ಕಳೆದ 2 ವಾರದಿಂದಲೂ ‘ಗದರ್​ 2’ ಸಿನಿಮಾ (Gadar 2 Movie) ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಮಾಡಿದ ಮೋಡಿಯೇ ಇದಕ್ಕೆಲ್ಲ ಕಾರಣ. ಸನ್ನಿ ಡಿಯೋಲ್​ (Sunny Deol), ಅಮೀಷಾ ಪಟೇಲ್​ ನಟನೆಯ ಈ ಸಿನಿಮಾಗೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದಾರೆ. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಒಂದಷ್ಟು ದಿನಗಳ ಕಾಲ ಸೈಲೆಂಟ್​ ಆಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಈ ಸಿನಿಮಾದಿಂದ ಹೊಸ ಚೈತನ್ಯ ಸಿಕ್ಕಂತೆ ಆಗಿದೆ. ಬಿಡುಗಡೆಯಾಗಿ 13 ದಿನಗಳು ಕಳೆದಿದ್ದರೂ ಕೂಡ ‘ಗದರ್​ 2’ ಸಿನಿಮಾದ ಕ್ರೇಜ್​ ಹಾಗೆಯೇ ಮುಂದುವರಿದಿದೆ. ಈ ಸಿನಿಮಾದ ಒಟ್ಟು ಕಲೆಕ್ಷನ್​ (Gadar 2 Collection) ಈಗ 410 ಕೋಟಿ ರೂಪಾಯಿ ದಾಟಿದೆ. ಇನ್ನೂ ಒಂದಷ್ಟು ದಿನಗಳ ಕಾಲ ಈ ಸಿನಿಮಾ ಅತ್ತುತ್ತಮವಾಗಿ ಪ್ರದರ್ಶನ ಕಾಣುವುದು ಗ್ಯಾರಂಟಿ ಆಗಿದೆ. ಇದರಿಂದ ಸನ್ನಿ ಡಿಯೋಲ್​ ಅವರಿಗೆ ತುಂಬ ಖುಷಿ ಆಗಿದೆ.

ಮೊದಲ ವೀಕೆಂಡ್​ನಲ್ಲಿ ಮಾತ್ರವಲ್ಲದೇ ಎರಡನೇ ವೀಕೆಂಡ್​ನಲ್ಲೂ ‘ಗದರ್​ 2’ ಸಿನಿಮಾ ಅಬ್ಬರಿಸಿತು. ಈಗ ಮೂರನೇ ವೀಕೆಂಡ್​ನಲ್ಲಿ ಯಾವ ರೀತಿ ಕಮಾಲ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ವಾರದ ದಿನಗಳಲ್ಲಿ ಕೂಡ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದೆ. ಬಹು ವರ್ಷಗಳ ಬಳಿಕ ನಟ ಸನ್ನಿ ಡಿಯೋಲ್​ ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುವಂತೆ ಆಗಿದೆ.

ತರಣ್​ ಆದರ್ಶ್​ ಟ್ವೀಟ್​:

ಆಗಸ್ಟ್​ 11ರಂದು ‘ಗದರ್​ 2’ ಸಿನಿಮಾ ಬಿಡುಗಡೆ ಆಯಿತು. ಅದೇ ದಿನ ಅಕ್ಷಯ್​ ಕುಮರ್​ ನಟನೆಯ ‘ಒಎಂಜಿ 2’ ಸಿನಿಮಾ ಕೂಡ ಬಿಡುಗಡೆ ಆಗಿತ್ತು. ಒಂದು ದಿನ ಮೊದಲು ‘ಜೈಲರ್​’ ಚಿತ್ರದ ತೆರೆಕಂಡು ಉತ್ತಮವಾದ ರೆಸ್ಪಾನ್ಸ್​ ಪಡೆದುಕೊಂಡಿತ್ತು. ಅಂಥ ದೊಡ್ಡ ಸಿನಿಮಾಗಳಿಗೂ ಪೈಪೋಟಿ ನೀಡುವ ಮೂಲಕ ‘ಗದರ್ 2’ ಸಿನಿಮಾ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿ ಮುನ್ನುಗ್ಗಿದೆ. ಈ ಸಿನಿಮಾ 500 ಕೋಟಿ ರೂಪಾಯಿ ತನಕವೂ ಕಲೆಕ್ಷನ್​ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಟ್ರೇಡ್​ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ‘ಸಿನಿಮಾ ಹಿಟ್ ಆದ ಬಳಿಕ ಸನ್ನಿ ಡಿಯೋಲ್​ಗೆ ಸೊಕ್ಕು ಬಂತು’; ನಟನ ವರ್ತನೆಗೆ ಆಕ್ರೋಶ

ಮಲ್ಟಿಪ್ಲೆಕ್ಸ್​ಗಳಲ್ಲಿ ‘ಗದರ್​ 2’ ಚಿತ್ರ ಚೆನ್ನಾಗಿ ಪ್ರದರ್ಶನ ಕಂಡಿದೆ. ಅದಕ್ಕಿಂತಲೂ ಉತ್ತಮವಾಗಿ ಸಿಂಗಲ್​ ಸ್ಕ್ರೀನ್​ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಅಬ್ಬರಿಸಿದೆ. ತುಂಬ ಮಾಸ್​ ಆಗಿ ಮೂಡಿಬಂದಿರುವ ಈ ಚಿತ್ರವನ್ನು ಆ್ಯಕ್ಷನ್​ ಪ್ರಿಯರು ಇಷ್ಟಪಟ್ಟಿದ್ದಾರೆ. ಮತ್ತೆ ಮತ್ತೆ ಚಿತ್ರಮಂದಿರಕ್ಕೆ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. 2001ರಲ್ಲಿ ‘ಗದರ್​’ ಸಿನಿಮಾ ಹಿಟ್​ ಆಗಿತ್ತು. ಈಗ ಅದರ ಸೀಕ್ವೆಲ್​ ಆಗಿ ‘ಗದರ್​ 2’ ಬಂದಿರುವುದರಿಂದ ಜನರು ಮುಗಿಬಿದ್ದು ಸಿನಿಮಾ ನೋಡಿದ್ದಾರೆ. 13ನೇ ದಿನ ಕೂಡ ಈ ಸಿನಿಮಾಗೆ 10 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂಬುದು ಗಮನಾರ್ಹ ವಿಷಯ.

ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಕಲೆಕ್ಷನ್​ ಮಾಡಿದ ‘ಗದರ್​ 2’; ದುಬೈನಲ್ಲಿ ಸನ್ನಿ ಡಿಯೋಲ್​ ಪಾರ್ಟಿ

ಈ ಶುಕ್ರವಾರ (ಆಗಸ್ಟ್​ 25) ಬಾಲಿವುಡ್​ನಲ್ಲಿ ಹೊಸ ಸಿನಿಮಾಗಳು ತೆರೆಕಾಣುತ್ತಿವೆ. ಆಯುಷ್ಮಾನ್​ ಖುರಾನಾ ನಟನೆಯ ‘ಡ್ರೀಮ್​ ಗರ್ಲ್​ 2’ ಮತ್ತು ನುಸ್ರತ್​ ಬರೂಚಾ ಅಭಿನಯದ ‘ಅಕೇಲಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾಗಳಿಗೆ ಉತ್ತಮ ರೆಸ್ಪಾನ್ಸ್​ ಸಿಕ್ಕರೆ ‘ಗದರ್ 2’ ಹವಾ ಕಡಿಮೆ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ