ಮಂಡ್ಯ ಜನರ ಪ್ರೀತಿ ಕಂಡು ಸನ್ನಿ ಲಿಯೋನ್ ಮೂಕವಿಸ್ಮಿತ; ಇವರಿಗೆ ಗೌರವ ಸೂಚಿಸಲು ವಿಶೇಷ ನಿರ್ಧಾರ

ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಗ್ರಾಮದ ಹೆಬ್ಬಾಗಿನಲ್ಲಿ 20 ಅಡಿಗೂ ಉದ್ದದ ಸನ್ನಿ ಫ್ಲೆಕ್ಸ್ ಅಳವಡಿಕೆ ಮಾಡಲಾಗಿತ್ತು. ಈ ಬಗ್ಗೆ ಸನ್ನಿ ಸಂತಸಗೊಂಡಿದ್ದಾರೆ.

ಮಂಡ್ಯ ಜನರ ಪ್ರೀತಿ ಕಂಡು ಸನ್ನಿ ಲಿಯೋನ್ ಮೂಕವಿಸ್ಮಿತ; ಇವರಿಗೆ ಗೌರವ ಸೂಚಿಸಲು ವಿಶೇಷ ನಿರ್ಧಾರ
ಸನ್ನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 16, 2022 | 9:12 PM

ಮೇ 13ರಂದು ಸನ್ನಿ ಲಿಯೋನ್​ ಅವರು (Sunny Leone) ಬರ್ತ್​ಡೇ ಆಚರಿಸಿಕೊಂಡಿದ್ದರು. ಮಂಡ್ಯದಲ್ಲಿ ಸನ್ನಿ ಲಿಯೋನ್ ಬರ್ತ್ ಡೇ ಜೋರಾಗಿ ನಡೆದಿತ್ತು. ಅಭಿಮಾನಿಗಳಿಂದ ರಕ್ತದಾನ ಶಿಬಿರ ಆಯೋಜನೆಗೊಂಡಿತ್ತು. ಈ ವೇಳೆ ಅನೇಕರು ರಕ್ತ ನೀಡಿ, ಜೀವ ಉಳಿಸಿ ಎನ್ನುವ ಸಂದೇಶ ಕೊಟ್ಟರು. ಇನ್ನು, ಅಭಿಮಾನಿಗಳಿಗೆ ಬಾಡೂಟ ಆಯೋಜನೆ ಮಾಡಲಾಗಿತ್ತು. ಸನ್ನಿ ಬರ್ತ್​ಡೇ ದಿನ (Sunny Leone Birthday) ಬಾಡೂಟ ಸವಿದು ಫ್ಯಾನ್ಸ್ ಖುಷಿಯಾದರು. ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸುದ್ದಿ ಅನೇಕ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಇದು ಸನ್ನಿ ಕಣ್ಣಿಗೂ ಬಿದ್ದಿದೆ. ಮಂಡ್ಯದ ಅಭಿಮಾನಿಗಳು ತೋರಿದ ಪ್ರೀತಿಗೆ ಸನ್ನಿ ಲಿಯೋನ್ ಮೂಕವಿಸ್ಮಿತರಾಗಿದ್ದಾರೆ.

ಒಂದು ಕಾಲದಲ್ಲಿ ನೀಲಿ ಚಿತ್ರ ಲೋಕದಲ್ಲಿ ಸನ್ನಿ ಕೆಲಸ ಮಾಡಿದ್ದರು. ನಂತರ ಅವರು ಬಾಲಿವುಡ್​ಗೆ ಕಾಲಿಟ್ಟು ಬೇರೆ ಇಮೇಜ್​ ಪಡೆದುಕೊಂಡರು. ಸ್ಟಾರ್​ ಹೀರೋಗಳ ಸಿನಿಮಾಗಳಲ್ಲಿ ಐಟಂ ಡ್ಯಾನ್ಸ್​ ಮಾಡಿ ಫೇಮಸ್​ ಆದರು. ಅನೇಕ ಚಿತ್ರಗಳಿಗೆ ಅವರು ಹೀರೋಯಿನ್​ ಆಗಿಯೂ ನಟಿಸಿದರು. ಸಿನಿಮಾ ಕೆಲಸಗಳ ಮಧ್ಯೆ ಅವರು ಹಲವು ಸಾಮಾಜಿಕ ಕೆಲಸಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ. ಸನ್ನಿ ಲಿಯೋನ್​ ಮತ್ತು ಅವರ ಪತಿ ಡೇನಿಯಲ್​ ವೆಬರ್​ ಅವರು ಅನಾಥ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡಿದ್ದಾರೆ. ಆ ಮಗುವಿಗೆ ನಿಶಾ ಕೌರ್ ಎಂದು ಹೆಸರು ಇಟ್ಟಿದ್ದಾರೆ. ಇನ್ನೂ ಹಲವು ಒಳ್ಳೆಯ ಕೆಲಸಗಳು ಅವರಿಂದ ಆಗಿವೆ. ಸನ್ನಿ ಅವರ ಈ ಕಾರ್ಯಕ್ಕೆ ಮಂಡ್ಯದಲ್ಲಿ ಅಭಿಮಾನಿ ಬಳಗವೇ ಹುಟ್ಟಿಕೊಂಡಿದೆ.

ಇದನ್ನೂ ಓದಿ
Image
Sunny Leone Birthday: ಮಾದಕ ತಾರೆ ಸನ್ನಿ ಲಿಯೋನ್​ ಜನ್ಮದಿನ: ಪಡ್ಡೆಗಳ ಫೇವರಿಟ್​ ನಟಿ ಬಗ್ಗೆ ಇಲ್ಲಿದೆ ಕೆಲವು ಇಂಟರೆಸ್ಟಿಂಗ್​ ವಿಷಯ
Image
‘ನೀವು ಮಗಳನ್ನು ದತ್ತು ಪಡೆದಿದ್ದು ಪಬ್ಲಿಸಿಟಿ ಗಿಮಿಕ್​’; ಅಭಿಮಾನಿ ಮಾತಿಗೆ ಸನ್ನಿ ಲಿಯೋನ್​ ಉತ್ತರ ಏನು?
Image
‘ದಯವಿಟ್ಟು ತಪ್ಪು ತಿಳಿಯಬೇಡಿ’; ಮಧ್ಯರಾತ್ರಿ ಆದ ಬಳಿಕ ಸನ್ನಿ ಲಿಯೋನ್​ ಮನೆಗೆ ಹೋಗಿದ್ದ ಖ್ಯಾತ ಗಾಯಕ
Image
ನಿಮ್ಮ ಪರ್ಸನಲ್​ ಮೆಸೇಜ್​ ಬೇರೆ ಯಾರೂ ಓದಬಾರದು ಎಂದರೆ ಏನು ಮಾಡ್ಬೇಕು? ಇಲ್ಲಿದೆ ಸನ್ನಿ ಲಿಯೋನ್​ ಉಪಾಯ

ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಗ್ರಾಮದ ಹೆಬ್ಬಾಗಿನಲ್ಲಿ 20 ಅಡಿಗೂ ಉದ್ದದ ಸನ್ನಿ ಫ್ಲೆಕ್ಸ್ ಅಳವಡಿಕೆ ಮಾಡಲಾಗಿತ್ತು. ‘ಬಡಮಕ್ಕಳ ತಾಯಿ, ಅಭಿಮಾನಿಗಳ ದೇವತೆ’ ಎಂದು ಸನ್ನಿ ಅವರನ್ನು ಬಣ್ಣಿಸಲಾಗಿತ್ತು. ಈ ಫ್ಲೆಕ್ಸ್ ಫೋಟೋ ಕೂಡ ವೈರಲ್ ಆಗಿತ್ತು. ಈ ಬಗ್ಗೆ ಸನ್ನಿ ಸಂತಸ ಹೊರಹಾಕಿದ್ದಾರೆ.

‘ಇದು ನಂಬಲು ಅಸಾಧ್ಯ. ನಿಮಗೆ ಗೌರವ ಸೂಚಿಸಲು ನಾನೂ ಹೋಗಿ ರಕ್ತದಾನ ಮಾಡುತ್ತೇನೆ. ತುಂಬಾ ಧನ್ಯವಾದಗಳು. ನಿಜವಾಗಿಯೂ ನೀವೆಲ್ಲರೂ ನನಗೆ ತುಂಬಾ ವಿಶೇಷವಾದ ಭಾವನೆ ಮೂಡಿಸುತ್ತೀರಿ. ಲವ್​ ಯೂ’ ಎಂದು ಟ್ವೀಟ್ ಮಾಡಿದ್ದಾರೆ ಸನ್ನಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:25 pm, Mon, 16 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ