AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj Kundra: ಅಶ್ಲೀಲ ಚಿತ್ರ ಪ್ರಕರಣ; ರಾಜ್ ಕುಂದ್ರಾಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

Raj Kundra case: ರಾಜ್ ಕುಂದ್ರಾಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅಶ್ಲೀಲ ಚಿತ್ರ ತಯಾರಿಕೆ ಹಾಗೂ ಹಂಚಿಕೆಯ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ರಾಜ್ ಕುಂದ್ರಾರನ್ನು ಬಂಧಿಸದಂತೆ ತಾತ್ಕಾಲಿಕ ಆದೇಶ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

Raj Kundra: ಅಶ್ಲೀಲ ಚಿತ್ರ ಪ್ರಕರಣ; ರಾಜ್ ಕುಂದ್ರಾಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್
ರಾಜ್ ಕುಂದ್ರಾ
TV9 Web
| Edited By: |

Updated on:Dec 15, 2021 | 12:56 PM

Share

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಮತ್ತು ಹಂಚಿಕೆ ಆರೋಪದ ಮೇಲಿನ ಹಲವು ಪ್ರಕರಣಗಳಲ್ಲಿ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಉದ್ಯಮಿ ರಾಜ್ ಕುಂದ್ರಾ (Raj Kundra) ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ (Supreme Court) ಬುಧವಾರ ಹೇಳಿದೆ. ಅಲ್ಲದೇ ನಾಲ್ಕು ವಾರಗಳ ರಕ್ಷಣೆ ನೀಡಿದೆ. ಈ ಕುರಿತು ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿದೆ. ನವೆಂಬರ್ 25 ರಂದು ಬಾಂಬೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಿರಾಕರಿಸಿದ ನಂತರ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ (Shilpa Shetty) ಅವರ ಪತಿ ಕುಂದ್ರಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್​​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ರಾಜ್ ಕುಂದ್ರಾ, ವಿಡಿಯೊಗಳು ಕಾಮಪ್ರಚೋದಕವಾಗಿದ್ದರೂ ವಾಸ್ತವವಾಗಿ ಯಾವುದೇ ದೈಹಿಕ ಅಥವಾ ಲೈಂಗಿಕ ಚಟುವಟಿಕೆಯನ್ನು ತೋರಿಸುವುವಂತಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಜತೆಗೆ ಅಂತಹ ವಿಡಿಯೊಗಳ ತಯಾರಿಕೆಯಲ್ಲಿ ಅಥವಾ ಪ್ರಸಾರದಲ್ಲಿ ಭಾಗಿಯಾಗಿಲ್ಲ ಎಂದೂ ಅವರು ಸ್ಪಷ್ಟನೆ ನೀಡಿದ್ದರು. ಈ ಪ್ರಕರಣದಲ್ಲಿ ತಮ್ಮನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ಅವರು ಹೇಳಿದ್ದರು. ಇದೀಗ ಸುಪ್ರೀಂ ಕೋರ್ಟ್ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದೇಶ ನೀಡಿದ್ದು, ರಾಜ್ ಕುಂದ್ರಾರನ್ನು ನಾಲ್ಕು ವಾರ ಬಂಧಿಸದಂತೆ ರಕ್ಷಣೆ ನೀಡಿದೆ.

ಇದೇ ಪ್ರಕರಣದಲ್ಲಿ ಅಶ್ಲೀಲ ಚಿತ್ರಗಳ ಪ್ರಕರಣದಲ್ಲಿ ಇತರ ಐವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಮುಂಬೈ ಹೈಕೋರ್ಟ್ ತಿರಸ್ಕರಿಸಿದೆ. ಇವರಲ್ಲಿ ನಟಿಯರಾದ ಪೂನಂ ಪಾಂಡೆ (Poonam Pandey) ಮತ್ತು ಶೆರ್ಲಿನ್ ಚೋಪ್ರಾ (Sherly Chopra) ಅರ್ಜಿಗಳೂ ಸೇರಿವೆ.

ಮುಂಬೈ ಅಪರಾಧ ಪತ್ತೆ ವಿಭಾಗವು ತನಿಖೆ ನಡೆಸುತ್ತಿರುವ ಮತ್ತೊಂದು ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈನಲ್ಲಿ ಬಂಧಿಸಲಾಯಿತು. ನಂತರ ಈ ಪ್ರಕರಣದಲ್ಲಿ ಕುಂದ್ರಾಗೆ ಸೆಪ್ಟೆಂಬರ್​ನಲ್ಲಿ ಜಾಮೀನು ಲಭಿಸಿತ್ತು. ಪ್ರಕರಣದಲ್ಲಿ ತಾನು ಭಾಗಿಯಾಗಿದ್ದೆ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಕುಂದ್ರಾ ವಾದಿಸಿದ್ದರು. ಅಲ್ಲದೇ ಪ್ರಕರಣದಲ್ಲಿ ತಮ್ಮನ್ನು ಬಲಿಪಶು ಮಾಡಲಾಗಿದೆ ಎಂದು ಅವರು ಹೇಳಿದ್ದರು. ರಾಜ್ ಕುಂದ್ರಾ ಮೇಲೆ ಹಲವು ಆರೋಪಗಳನ್ನು ಮಾಡಲಾಗಿದೆ. ಇದೀಗ ಅದರಲ್ಲಿನ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತ್ರ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಕ್ಷಣೆ ನೀಡಿದೆ.

ಇದನ್ನೂ ಓದಿ:

ರಾಜ್ ಕುಂದ್ರಾಗೆ ಡಿವೋರ್ಸ್​ ಕೊಡುವ ಬಗ್ಗೆ ಶಿಲ್ಪಾ ಶೆಟ್ಟಿ ಸುಳಿವು? ಇಲ್ಲಿದೆ ಹೊಸ ಅಂತ್ಯದ ಬಗ್ಗೆ ಮಾತು

Raj Kundra: ಚಿತ್ರರಂಗದಲ್ಲಿ ಕಷ್ಟಪಡುತ್ತಿದ್ದ ಯುವತಿಯರೇ ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳ ದಂಧೆಗೆ ಟಾರ್ಗೆಟ್

Published On - 12:50 pm, Wed, 15 December 21

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ