AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ದ ವಿರುದ್ಧ ದೂರು, ಸಮಯ ವ್ಯರ್ಥ ಮಾಡಬೇಡಿ ಎಂದ ಸುಪ್ರೀಂ

‘ರಾಮಾಯಣ’ ಸಿನಿಮಾದಲ್ಲಿ ಹಲವು ವಿಷಯಗಳನ್ನು ತಿರುಚಲಾಗಿದ್ದು, ಸಿನಿಮಾದ ಪ್ರದರ್ಶನಕ್ಕೆ ತಡೆ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್​​ನಲ್ಲಿ ನವೆಂಬರ್ 23ಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿರಲಿಲ್ಲ. ಈ ಬಗ್ಗೆ ದೂರುದಾರರ ಪರ ವಕೀಲರು ಪ್ರಶ್ನೆ ಮಾಡಿದ್ದು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದಿದ್ದರು. ತ್ರಿಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆದಿದೆ.

‘ರಾಮಾಯಣ’ದ ವಿರುದ್ಧ ದೂರು, ಸಮಯ ವ್ಯರ್ಥ ಮಾಡಬೇಡಿ ಎಂದ ಸುಪ್ರೀಂ
Ramayana Moie
ಮಂಜುನಾಥ ಸಿ.
|

Updated on: Nov 27, 2026 | 4:33 PM

Share

ಮುಖ್ಯಾಂಶಗಳು

  • ‘ರಾಮಾಯಣ’ ಸಿನಿಮಾ ವಿರುದ್ಧ ಸುಪ್ರೀಂನಲ್ಲಿ ದೂರು
  • ‘ರಾಮಾಯಣ’ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ
  • ಸಮಯ ವ್ಯರ್ಥ ಮಾಡಬೇಡಿ ಎಂದ ಕೋರ್ಟ್

ರಣ್​​ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ನಟನೆ ಮಾಡಿರುವ ‘ರಾಮಾಯಣ’ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಭಾರತದ ಈ ಹಿಂದಿನ ಎಲ್ಲ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿಯಲಿದೆ ಎನ್ನಲಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಮೂರು ವಾರಕ್ಕೂ ಹೆಚ್ಚು ಸಮಯವಾಗಿದ್ದು, ಈಗಲೂ ಸಹ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಇತ್ತೀಚೆಗೆ ಕೆಲ ಸಂಘಟನೆಗಳು ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಸಿನಿಮಾದ ನಿಷೇಧಕ್ಕೆ ಕರೆ ನೀಡಿದ್ದವು. ಇದೀಗ ಸಿನಿಮಾ ವಿರುದ್ಧ ನೇರವಾಗಿ ಸುಪ್ರೀಂಕೋರ್ಟ್​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಹ ಸಲ್ಲಿಸಲಾಗಿದೆ. ಆದರೆ ಅರ್ಜಿಯ ತ್ವರಿತ ವಿಚಾರಣೆ ಸಾಧ್ಯವಿಲ್ಲ ಎಂದಿರುವ ಸುಪ್ರೀಂಕೋರ್ಟ್, ‘ನ್ಯಾಯಾಲಯದ ಸಮಯ ವ್ಯರ್ಥ ಮಾಡಬೇಡಿ’ ಎಂದಿದೆ.

‘ರಾಮಾಯಣ’ ಸಿನಿಮಾದಲ್ಲಿ ಹಲವು ವಿಷಯಗಳನ್ನು ತಿರುಚಲಾಗಿದ್ದು, ಸಿನಿಮಾದ ಪ್ರದರ್ಶನಕ್ಕೆ ತಡೆ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್​​ನಲ್ಲಿ ನವೆಂಬರ್ 23ಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿರಲಿಲ್ಲ. ಈ ಬಗ್ಗೆ ದೂರುದಾರರ ಪರ ವಕೀಲರು ಪ್ರಶ್ನೆ ಮಾಡಿದ್ದು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದಿದ್ದರು. ತ್ರಿಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆದಿದೆ.

‘ಅರ್ಜಿಯ ತ್ವರಿತ ವಿಚಾರಣೆ ಮಾಡಬೇಕು’ ಎಂಬ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಸಿನಿಮಾ ಈಗಾಗಲೇ ಬಿಡುಗಡೆ ಆಗಿದೆ, ಯಾರಿಗೆ ನೋಡಬೇಕು ಎನಿಸಿತೋ ಅವರೆಲ್ಲ ನೋಡಿದ್ದಾರೆ’ ಎಂದರು. ‘ಸಿನಿಮಾದಲ್ಲಿ ಸಾಕಷ್ಟು ವಿಷಯಗಳನ್ನು ತಿರುಚಲಾಗಿದೆ’ ಎಂಬ ವಾದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು, ‘ಅವರಿಗೆ ಕಥೆ ಹೇಗೆ ಅರ್ಥ ಆಗಿದೆಯೋ ಹಾಗೆ ಅವರು ಸಿನಿಮಾ ಮಾಡಿದ್ದಾರೆ. ನಿಮಗೆ ಹೇಗೆ ಅರ್ಥ ಆಗಿದೆಯೋ ಹಾಗೆ ನೀವು ಸಿನಿಮಾ ಮಾಡಿ. ‘ರಾಮಾಯಣ’ ಪೌರಾಣಿಕ ಕಥೆಯ ಬಗ್ಗೆ ನಿಮ್ಮ ಅಭಿಪ್ರಾಯ ಭಿನ್ನವಾಗಿದ್ದರೆ ಅದರ ಆಧಾರದ ಮೇಲೆ ಬೇರೆ ಸಿನಿಮಾ ಮಾಡಿ, ಸುಮ್ಮನೆ ನ್ಯಾಯಾಲಯದ ಅಮೂಲ್ಯ ಸಮಯ ಹಾಳು ಮಾಡಬೇಡಿ’ ಎಂದು ಖಾರವಾಗಿ ನುಡಿದಿದ್ದಾರೆ.

ಇದನ್ನೂ ಓದಿ:ರಣ್​​ಬೀರ್ ಕಪೂರ್ ಧರಿಸಿದ್ದ ಗಡಿಯಾರದ ಬೆಲೆ ಎಷ್ಟು ಲಕ್ಷ ಗೊತ್ತೆ?

ಅರ್ಜಿಯ ತ್ವರಿತ ವಿಚಾರಣೆಗೆ ವಕೀಲರು ಪದೇ ಪದೇ ಆಗ್ರಹಿಸಿದಾಗ ಅದಕ್ಕೂ ನಿರಾಕರಿಸಿದ ನ್ಯಾಯಮೂರ್ತಿಗಳು, ಅರ್ಜಿಯು ನಿಯಮದಂತೆ ಸರತಿಯಲ್ಲಿ ವಿಚಾರಣೆಗೆ ಬರಲಿದೆ ಎಂದಿದ್ದಾರೆ. ಅರ್ಜಿದಾರರು ಸಲ್ಲಿಸಿರುವ ಅರ್ಜಿಯಲ್ಲಿ, ನಿತೇಶ್ ತಿವಾರಿ ನಿರ್ದೇಶನ ಮಾಡಿರುವ ‘ರಾಮಾಯಣ’ ಸಿನಿಮಾದಲ್ಲಿ ಪೌರಾಣಿಕ ಕಥೆಯಲ್ಲಿರುವ ಹಲವು ಅಂಶಗಳನ್ನು ತಿರುಚಲಾಗಿದೆ ಎಂದು ಆರೋಪ ಮಾಡಲಾಗಿದೆ.

ಇತ್ತೀಚೆಗೆ ಕೆಲ ಹಿಂದೂ ಸಂಘಟನೆಗಳು ಸಹ ಸಿನಿಮಾದ ವಿರುದ್ಧ ಆಕ್ರೋಶ ಹೊರಹಾಕಿದ್ದವು. ಸಿನಿಮಾದಲ್ಲಿ ಶ್ರೀರಾಮ ಮತ್ತು ಲಕ್ಷ್ಮಣರನ್ನು ಬಲಹೀನರನ್ನಾಗಿ ತೋರಿಸಲಾಗಿದೆ. ರಾವಣನನ್ನು ಮಹಾ ಶಕ್ತಿವಂತನೂ, ಸಾಮಾಜಿಕ ನ್ಯಾಯದ ಪ್ರತಿಪಾದಕನೂ ಎಂಬಂತೆ ತೋರಿಸಲಾಗಿದೆ. ಈ ಸಿನಿಮಾ ಕಮ್ಯೂನಿಸ್ಟ್ ಅಜೆಂಡಾವನ್ನು ಪ್ರಚಾರ ಮಾಡುತ್ತಿದೆ ಎಂದು ಸಹ ಕೆಲವರು ಆರೋಪಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ