Gangubai Kathiawadi: ‘ಗಂಗೂಬಾಯಿ ಕಾಠಿಯಾವಾಡಿ’ಗೆ ಹೊಸ ಸಂಕಷ್ಟ; ಚಿತ್ರದ ಹೆಸರು ಬದಲಿಸುವಂತೆ ಸುಪ್ರೀಂ ಸೂಚನೆ

Alia Bhatt | Sanjay Leela Bhansali: ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಶೀರ್ಷಿಕೆಯನ್ನು ಬದಲಿಸುವಂತೆ ಸುಪ್ರೀಂ ಕೋರ್ಟ್ ಚಿತ್ರತಂಡಕ್ಕೆ ಸೂಚಿಸಿದೆ. ಫೆಬ್ರವರಿ 25ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಈ ಚಿತ್ರ ಸಿದ್ಧವಾಗಿದೆ.

Gangubai Kathiawadi: ‘ಗಂಗೂಬಾಯಿ ಕಾಠಿಯಾವಾಡಿ’ಗೆ ಹೊಸ ಸಂಕಷ್ಟ; ಚಿತ್ರದ ಹೆಸರು ಬದಲಿಸುವಂತೆ ಸುಪ್ರೀಂ ಸೂಚನೆ
‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್
Follow us
| Updated By: shivaprasad.hs

Updated on:Feb 23, 2022 | 8:05 PM

ಆಲಿಯಾ ಭಟ್ (Alia Bhatt) ವೃತ್ತಿಬದುಕಿನ ದೊಡ್ಡ ಪರೀಕ್ಷೆಯೊಂದಕ್ಕೆ ಸಜ್ಜಾಗುತ್ತಿದ್ದಾರೆ. ದೊಡ್ಡ ಬಜೆಟ್​​ನಲ್ಲಿ ತಯಾರಾಗಿರುವ, ಖ್ಯಾತ ತಾರೆಯರು ಬಣ್ಣ ಹಚ್ಚಿರುವ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಈ ವಾರ ಅಂದರೆ ಫೆಬ್ರವರಿ 25ರಂದು ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಹಲವು ಬಾರಿ ವಿವಾದಕ್ಕೆ ಒಳಗಾಗಿರುವ ಚಿತ್ರಕ್ಕೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಶಾಸಕರೊಬ್ಬರು ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಹೆಸರು ಬದಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, ಚಿತ್ರದ ಹೆಸರು ಬದಲಾವಣೆ ಮಾಡುವಂತೆ ಸೂಚನೆ ನೀಡಿದೆ. ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಈ ಚಿತ್ರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕ ಅಮಿನ್ ಪಟೇಲ್ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ಕಾಮಾಠಿಪುರವನ್ನು ರೆಡ್ ಲೈಟ್ ಏರಿಯಾ ಎಂದು ತೋರಿಸಿರುವುದಲ್ಲದೇ ಕಾಠಿಯಾವಾಡಿ ಸಮುದಾಯವನ್ನು ಕೀಳಾಗಿ ತೋರಿಸಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.

ಬರಹಗಾರ ಹುಸೇನ್ ಜೈದಿ ಬರೆದಿರುವ ‘ಮಾಫಿಯಾ ಕ್ವೀನ್ಸ್ ಆಫ್ ಮುಂಬೈ’ ಪುಸ್ತಕವನ್ನು ಆಧರಿಸಿ ಸಂಜಯ್ ಲೀಲಾ ಭನ್ಸಾಲಿ ಚಿತ್ರವನ್ನು ತಯಾರಿಸಿದ್ದಾರೆ. ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ಯಾಗಿ ಬಣ್ಣಹಚ್ಚಿದ್ದಾರೆ. ಯುವತಿಯೊಬ್ಬಳು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟವಾಗಿ ನಂತರ ಕಾಮಾಠಿಪುರದ ಡಾನ್ ಆಗುವ ಕತೆಯನ್ನು ಚಿತ್ರ ಒಳಗೊಂಡಿರಲಿದೆ. ಅಜಯ್ ದೇವಗನ್, ವಿಜಯ್ ರಾಜ್, ಸೀಮಾ ಪಹ್ವಾ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರಕ್ಕಿದ್ದ ಉಳಿದ ಅಡೆತಡೆ ನಿವಾರಿಸಿದ ಬಾಂಬೆ ಹೈಕೋರ್ಟ್:

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಎರಡನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಅಲ್ಲದೇ ಚಿತ್ರದ ರಿಲೀಸ್ ಬಗ್ಗೆ ಇದ್ದ ಆತಂಕಗಳನ್ನು ನಿವಾರಿಸಿದೆ. ಯಾವುದೇ ಅಡೆತಡೆಗಳಿಲ್ಲದೆ ಚಿತ್ರವು ಫೆಬ್ರವರಿ 25ರಂದು ತೆರೆಕಾಣಬಹುದು ಎಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಚಿತ್ರಗಳು ಶೀರ್ಷಿಕೆಯ ಕಾರಣದಿಂದ ವಿವಾದವಾಗುತ್ತಿರುವುದು ಇದೇ ಮೊದಲೇನಲ್ಲ. ದೀಪಿಕಾ ಪಡುಕೋಣೆ ನಟನೆಯ ‘ಪದ್ಮಾವತ್’ ಚಿತ್ರಕ್ಕೆ ಮೊದಲು ‘ಪದ್ಮಾವತಿ’ ಎಂದು ಹೆಸರಿಡಲಾಗಿತ್ತು. ವಿರೋಧದ ನಂತರ ‘ಪದ್ಮಾವತ್’ ಎಂದು ಬದಲಿಸಲಾಗಿತ್ತು. ಅದಕ್ಕೂ ಮುನ್ನ ‘ರಾಮ್​ ಲೀಲಾ’ ಚಿತ್ರದ ಶೀರ್ಷಿಕೆಯನ್ನು ವಿರೋಧದ ನಂತರ ‘ಗೋಲಿಯೋಂಕಾ ರಾಸ್​​ಲೀಲಾ ರಾಮ್​-ಲೀಲಾ’ ಎಂದು ಬದಲಿಸಲಾಗಿತ್ತು. ಇದೀಗ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಹೆಸರನ್ನು ಬದಲಿಸುವಂತೆ ಸುಪ್ರೀಂ ಸೂಚಿಸಿದೆ.

ಇದನ್ನೂ ಓದಿ:

NBK107: ತೆಲುಗಿನಲ್ಲೂ ರಿಮೇಕ್ ಆಗುತ್ತಿದೆಯಾ ‘ಮಫ್ತಿ’? ಕುತೂಹಲ ಮೂಡಿಸಿದ ‘ಎನ್​ಬಿಕೆ107’ ಪೋಸ್ಟರ್

‘ಆಲ್ ಓಕೆ’ ಹಾಡುಗಳನ್ನು ಕೇಳಿ ಪುನೀತ್ ಹೇಗೆ ಪ್ರತಿಕ್ರಿಯಿಸುತ್ತಿದ್ದರು? ಅಲೋಕ್ ಹಂಚಿಕೊಂಡ್ರು ಕುತೂಹಲಕರ ವಿಚಾರ

Published On - 8:01 pm, Wed, 23 February 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ