ಸುಶಾಂತ್ ಸಿಂಗ್ ರಜಪೂತ್​ ಜನ್ಮದಿನ; ಅಭಿಮಾನಿಗಳಿಂದ ಎದುರಾಗುತ್ತಿದೆ ಒಂದೇ ಪ್ರಶ್ನೆ

Sushant Singh Rajput Birthday: ಸುಶಾಂತ್ ಸಿಂಗ್ ಅವರು ಮುಂಬೈನ ಫ್ಲ್ಯಾಟ್ ಒಂದರಲ್ಲಿ ಬಾಡಿಗೆಗೆ ಇದ್ದರು. ಅದೇ ಫ್ಲ್ಯಾಟ್​ನಲ್ಲಿ ಅವರು ನೇಣು ಬಿಗಿದುಕೊಂಡು ಮೃತಪಟ್ಟರು. ಇದು ಆತ್ಮಹತ್ಯೆ ಎಂದು ಊಹಿಸಲಾಗಿತ್ತು. ಆದರೆ, ಇದು ಕೊಲೆ ಎನ್ನುವ ಆರೋಪಗಳು ಕೇಳಿ ಬಂದವು.

ಸುಶಾಂತ್ ಸಿಂಗ್ ರಜಪೂತ್​ ಜನ್ಮದಿನ; ಅಭಿಮಾನಿಗಳಿಂದ ಎದುರಾಗುತ್ತಿದೆ ಒಂದೇ ಪ್ರಶ್ನೆ
ಸುಶಾಂತ್ ಸಿಂಗ್
Follow us
ರಾಜೇಶ್ ದುಗ್ಗುಮನೆ
|

Updated on: Jan 21, 2023 | 9:29 AM

2020ರ ಜೂನ್ 14ರಂದು ನಟ ಸುಶಾಂತ್ ಸಿಂಗ್ (Sushant Singh Rajput) ಮೃತಪಟ್ಟರು. ಚಿತ್ರರಂಗದಲ್ಲಿ ಸ್ಟಾರ್ ಪಟ್ಟ ಪಡೆದಿದ್ದ ಸುಶಾಂತ್​ ಅವರ ಸಾವಿನ ಸುದ್ದಿಯನ್ನು ಸಾಕಷ್ಟು ಜನರಿಗೆ ಅರಗಿಸಿಕೊಳ್ಳಲು ಆಗಲಿಲ್ಲ. ಅವರು ಮೃತಪಟ್ಟು ಎರಡೂವರೆ ವರ್ಷ ಕಳೆದಿದೆ. ಇಂದು (ಜನವರಿ 21) ಸುಶಾಂತ್ ಸಿಂಗ್ ಜನ್ಮದಿನ (Sushant Singh Rajput Birthday). ಅವರನ್ನು ಎಲ್ಲರೂ ನೆನಪಿಸಿಕೊಳ್ಳುತ್ತಿದ್ದಾರೆ. ಅವರ ಸಾವಿನ ರಹಸ್ಯ ಹೊರಬಿದ್ದಿಲ್ಲ ಎನ್ನುವ ಬೇಸರ ಇದೆ. ಸಿಬಿಐ ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಅಂತಿಮ ವರದಿ ಮಾತ್ರ ಬಂದಿಲ್ಲ. ಆದಷ್ಟು ಬೇಗ ಅವರ ಸಾವಿನ ರಹಸ್ಯ ಹೊರ ಬೀಳಲಿ ಅನ್ನುವುದು ಫ್ಯಾನ್ಸ್ ಆಗ್ರಹ.

ಸುಶಾಂತ್ ಸಿಂಗ್ ಅವರು ಮುಂಬೈನ ಫ್ಲ್ಯಾಟ್ ಒಂದರಲ್ಲಿ ಬಾಡಿಗೆಗೆ ಇದ್ದರು. ಅದೇ ಫ್ಲ್ಯಾಟ್​ನಲ್ಲಿ ಅವರು ನೇಣು ಬಿಗಿದುಕೊಂಡು ಮೃತಪಟ್ಟರು. ಇದು ಆತ್ಮಹತ್ಯೆ ಎಂದು ಊಹಿಸಲಾಗಿತ್ತು. ಆದರೆ, ಇದು ಕೊಲೆ ಎನ್ನುವ ಆರೋಪಗಳು ಕೇಳಿ ಬಂದವು. ಬಾಲಿವುಡ್​ನಲ್ಲಿ ಸುಶಾಂತ್ ಅವರನ್ನು ಹೊರಗಿನವರು ಎಂದು ಪರಿಗಣಿಸಲಾಗಿತ್ತು. ಹೀಗಾಗಿ ಅವರಿಗೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಯಿತು.

ಈ ಮಧ್ಯೆ ಸುಶಾಂತ್ ಸಿಂಗ್ ರಜಪೂತ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಮೇಲೆ ಅನೇಕರು ಗಮನಹರಿಸಿದರು. ಸುಶಾಂತ್ ಖಾತೆಯಿಂದ ಅವರ ಖಾತೆಗೆ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಗಳು ಕೇಳಿ ಬಂದವು. ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಮಾದಕದ್ರವ್ಯದ ಬಗ್ಗೆ ತಿಳಿಯಿತು. ಈ ಪ್ರಕರಣವನ್ನು ಎನ್​ಸಿಬಿ ಕೂಡ ವಿಚಾರಣೆ ನಡೆಸಿತು.

ಇದನ್ನೂ ಓದಿ: ಮರಣೋತ್ತರ ಪರೀಕ್ಷೆ ವೇಳೆ ಸುಶಾಂತ್ ಸಿಂಗ್ ದೇಹದ ಮೇಲಿತ್ತು ಗಾಯ; ಸತ್ಯ ಮುಚ್ಚಿಟ್ರಾ ವೈದ್ಯರು?

ಆರಂಭದಲ್ಲಿ ಮುಂಬೈ ಪೊಲೀಸರು ಪ್ರಕರಣವನ್ನು ವಿಚಾರಣೆ ಮಾಡಿದ್ದರು. ಪ್ರಕರಣದಲ್ಲಿ  ಒತ್ತಡ ಹೆಚ್ಚಿತು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಪತ್ತೆ ಹಚ್ಚಲು ಅವರಿಂದ ಸಾಧ್ಯವಾಗಲಿಲ್ಲ. ಈ ಮಧ್ಯೆ ನ್ಯಾಯ ಕೊಡಿಸಿ ಎನ್ನುವ ಒತ್ತಾಯ ಅಭಿಮಾನಿಗಳಿಂದ ಹೆಚ್ಚಿತು. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಯಿತು. ಸಿಬಿಐ ಪ್ರಕರಣವನ್ನು ತನಿಖೆ ಮಾಡುತ್ತಿದೆ. ಈ ಪ್ರಕರಣದ ಅಂತಿಮ ವರದಿ ಸಿದ್ಧವಾಗಿಲ್ಲ. ಈ ಪ್ರಕರಣದಲ್ಲಿ ನ್ಯಾಯ ಸಿಗೋದು ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಈಗಲೂ ಎದುರಾಗುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ