AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಟ್​ ಬಟ್ಟೆ ಧರಿಸಿ ಟ್ರೋಲ್​ ಆದ ಸುಶಾಂತ್​ ಸಹೋದರಿ; ಅಭಿಮಾನಿಗಳ ಕೋಪಕ್ಕೆ ಕಾರಣ ಏನು?

Shweta Singh Kirti: ಅಭಿಮಾನಿಗಳೆಲ್ಲ ಸುಶಾಂತ್​ ಸಿಂಗ್​ ರಜಪೂತ್​ ನಿಧನಕ್ಕೆ ನ್ಯಾಯ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಸಹೋದರಿ ತನ್ನದೇ ಲೋಕದಲ್ಲಿ ಮುಳುಗಿದ್ದಾರೆ ಎಂಬ ಟೀಕೆ ಎದುರಾಗಿದೆ.

ಹಾಟ್​ ಬಟ್ಟೆ ಧರಿಸಿ ಟ್ರೋಲ್​ ಆದ ಸುಶಾಂತ್​ ಸಹೋದರಿ; ಅಭಿಮಾನಿಗಳ ಕೋಪಕ್ಕೆ ಕಾರಣ ಏನು?
ಸುಶಾಂತ್ ಸಿಂಗ್ ರಜಪೂತ್, ಶ್ವೇತಾ ಸಿಂಗ್ ಕೀರ್ತಿ
Follow us
TV9 Web
| Updated By: ಮದನ್​ ಕುಮಾರ್​

Updated on: Dec 18, 2021 | 7:57 AM

ಬಾಲಿವುಡ್​ನ ಖ್ಯಾತ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದುಕೊಂಡಿದೆ. 2020ರ ಜೂನ್​ 14ರಂದು ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಸುಶಾಂತ್​ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿತ್ತು. ಅದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಹಲವರ ವಾದ. ಸುಶಾಂತ್​ ಸಾವಿಗೆ ಕಾರಣ ಆದವರಿಗೆ ಸೂಕ್ತ ಶಿಕ್ಷ ಆಗಬೇಕು ಎಂದು ಅವರ ಅಭಿಮಾನಿಗಳು ಮತ್ತು ಕುಟುಂಬದವರು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸುಶಾಂತ್​ ಸಹೋದರಿ ಶ್ವೇತಾ ಸಿಂಗ್​ ಕೀರ್ತಿ (Shweta Singh Kirti) ಅವರು ಸಿಕ್ಕಾಪಟ್ಟೆ ಟ್ರೋಲ್​ (Troll) ಆಗಿದ್ದಾರೆ. ಹಾಟ್​ ಅವತಾರದಲ್ಲಿ ಬಟ್ಟೆ ಧರಿಸಿ ಪೋಸ್​ ನೀಡಿದ ಅವರನ್ನು ಸುಶಾಂತ್​ ಅಭಿಮಾನಿಗಳು ಖಾರವಾಗಿ ಟೀಕಿಸಿದ್ದಾರೆ.

ಸುಶಾಂತ್​ ನಿಧನರಾದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ಒಂದು ಆಂದೋಲನ ಶುರು ಆಯಿತು. #JusticeForSSR ಎಂಬ ಹ್ಯಾಶ್​ಟ್ಯಾಗ್​ ಮೂಲಕ ಲಕ್ಷಾಂತರ ಜನರು ಧ್ವನಿ ಎತ್ತಿದರು. ಸುಶಾಂತ್​ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಉದ್ದೇಶ ಈ ಆಂದೋಲನದ ಹಿಂದಿದೆ. ಅದರಲ್ಲಿ ಸುಶಾಂತ್​ ಅಭಿಮಾನಿಗಳು ಇಂದಿಗೂ ಭಾಗಿ ಆಗುತ್ತಲೇ ಇದ್ದಾರೆ. ಈ ನಡುವೆ ತಮ್ಮ ನಿಜವಾದ ಉದ್ದೇಶ ಮರೆತು, ಹಾಟ್​ ಫೋಟೋಗಳನ್ನು ಪೋಸ್ಟ್​ ಮಾಡುತ್ತಿರುವ ಸುಶಾಂತ್​ ಸಹೋದರಿ ಶ್ವೇತಾ ಸಿಂಗ್​ ಕೀರ್ತಿ ಅವರನ್ನು ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

#JusticeForSSR ಎಂಬ ಅಂದೋಲನ ಎಲ್ಲಿಗೆ ಹೋಯಿತು? ಸುಶಾಂತ್​ ಸಾವಿಗೆ ನ್ಯಾಯ ಕೊಡಿಸುವಲ್ಲಿ ನಿಮ್ಮ ಪ್ರಯತ್ನ ಎತ್ತ ಸಾಗಿದೆ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ‘ಅಭಿಮಾನಿಗಳೆಲ್ಲ ಸುಶಾಂತ್​ ನಿಧನಕ್ಕೆ ನ್ಯಾಯ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಸಹೋದರಿ ತನ್ನದೇ ಲೋಕದಲ್ಲಿ ಮುಳುಗಿದ್ದಾರೆ’ ಎಂದು ಜನರು ಕಮೆಂಟ್​ ಮಾಡಿದ್ದಾರೆ. ಇಂಥ ಟೀಕೆಗಳನ್ನು ಎದುರಿಸಲಾಗದೇ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಶ್ವೇತಾ ಸಿಂಗ್​. ಸದ್ಯ ಅವರ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಕಿರುತೆರೆ ನಟಿ ಅಂಕಿತಾ ಲೋಖಂಡೆ ಜತೆ ಸುಶಾಂತ್​ ಪ್ರೀತಿಸುತ್ತಿದ್ದರು. ನಂತರ ಅವರ ನಡುವೆ ಬ್ರೇಕಪ್​ ಆಯ್ತು ಎಂಬುದು ಜಗತ್ತಿಗೆ ತಿಳಿದಿರುವ ವಿಚಾರ. ಈಗ ಅಂಕಿತಾ ಲೋಖಂಡೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರಿಯಕರ ವಿಕ್ಕಿ ಜೈನ್​ ಜತೆ ಅವರು ಸಪ್ತಪದಿ ತುಳಿದಿದ್ದಾರೆ. ನವ ಜೋಡಿಗೆ ಶ್ವೇತಾ ಸಿಂಗ್​ ಕೀರ್ತಿ ಕೂಡ ವಿಶ್​ ಮಾಡಿದ್ದಾರೆ.

ಇದನ್ನೂ ಓದಿ:

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ

ಸುಶಾಂತ್​ ಪ್ರೇಯಸಿ ರಿಯಾ ಚಕ್ರವರ್ತಿ ಧರಿಸಿದ ಈ ಲೆಹೆಂಗಾ ಬೆಲೆ ಕೇಳಿ ಕಣ್ಣರಳಿಸಿದ ಫ್ಯಾನ್ಸ್​

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ