AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೈಯಕ್ತಿಕ ವಿಚಾರಕ್ಕೆ ಸ್ಪಷ್ಟನೆ ನೀಡಲ್ಲ’; ಮದುವೆ ಗಾಸಿಪ್​ಗೆ ಉತ್ತರಿಸಿದ ತಾಪ್ಸಿ

ತಾಪ್ಸಿ ಪನ್ನು ಮಾರ್ಚ್ ತಿಂಗಳಲ್ಲಿ ಮಥಾಯಸ್​ ಬೋ ಅವರನ್ನು ಮದುವೆ ಆಗಲಿದ್ದಾರೆ ಎಂದು ವರದಿ ಆಗಿತ್ತು. ಅಷ್ಟೇ ಅಲ್ಲ, ಸಿಖ್ ಹಾಗೂ ಕ್ರೈಸ್ತ ಸಮುದಾಯದ ಸಂಪ್ರದಾಯದಂತೆ ಈ ವಿವಾಹ ನೆರವೇರಲಿದೆ ಎಂದು ವರದಿ ಆಗಿದೆ. ಇವರು ಮದುವೆಗೆ ಉದಯಪುರವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಕೂಡ ವರದಿಯಲ್ಲಿ ಹೇಳಲಾಗಿತ್ತು.

‘ವೈಯಕ್ತಿಕ ವಿಚಾರಕ್ಕೆ ಸ್ಪಷ್ಟನೆ ನೀಡಲ್ಲ’; ಮದುವೆ ಗಾಸಿಪ್​ಗೆ ಉತ್ತರಿಸಿದ ತಾಪ್ಸಿ
ತಾಪ್ಸಿ-ಮಥಾಯಸ್​ ಬೋ
ರಾಜೇಶ್ ದುಗ್ಗುಮನೆ
|

Updated on: Feb 29, 2024 | 7:34 AM

Share

ನಟಿ ತಾಪ್ಸಿ ಪನ್ನು ಅವರು ಸಿನಿಮಾ ಜೊತೆ ವೈಯಕ್ತಿಕ ವಿಚಾರದಿಂದಲೂ ಆಗಾಗ ಸುದ್ದಿ ಆಗುತ್ತಾರೆ. ತಾಪ್ಸಿ ಪನ್ನು ಅವರು ಬ್ಯಾಡ್ಮಿಂಟನ್​ ಆಟಗಾರ ಮಥಾಯಸ್​ ಬೋ (Mathias Boe)  ಜೊತೆ ಪ್ರೀತಿಯಲ್ಲಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇವರು ಶೀಘ್ರವೇ ಹಸೆಮಣೆ ಏರಲಿದ್ದಾರೆ ಎನ್ನಲಾಗಿತ್ತು. ಈ ವಿಚಾರವಾಗಿ ತಾಪ್ಸಿ ಪನ್ನು ಮಾತನಾಡಿದ್ದಾರೆ. ‘ನನ್ನ ವೈಯಕ್ತಿಕ ವಿಚಾರದಲ್ಲಿ ನಾನು ಎಂದಿಗೂ ಸ್ಪಷ್ಟನೆ ನೀಡಲ್ಲ’ ಎಂದಿದ್ದಾರೆ ಅವರು.

ತಾಪ್ಸಿ ಪನ್ನು ಅವರು ಈ ವರ್ಷ ಮಾರ್ಚ್ ತಿಂಗಳಲ್ಲಿ ಮಥಾಯಸ್​ ಬೋ ಅವರನ್ನು ಮದುವೆ ಆಗಲಿದ್ದಾರೆ ಎಂದು ವರದಿ ಆಗಿತ್ತು. ಅಷ್ಟೇ ಅಲ್ಲ, ಸಿಖ್ ಹಾಗೂ ಕ್ರೈಸ್ತ ಸಮುದಾಯದ ಸಂಪ್ರದಾಯದಂತೆ ಈ ವಿವಾಹ ನೆರವೇರಲಿದೆ ಎಂದು ವರದಿ ಆಗಿತ್ತು. ಇವರು ಮದುವೆಗೆ ಉದಯಪುರವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಕೂಡ ವರದಿಯಲ್ಲಿ ಹೇಳಲಾಗಿತ್ತು. ಈ ವಿಚಾರವನ್ನು ತಾಪ್ಸಿ ಪನ್ನು ಅವರು ಒಪ್ಪಿಯೂ ಇಲ್ಲ ಅದನ್ನು ಅಲ್ಲಗಳೆದೂ ಇಲ್ಲ.

ನಟಿಯರು ಸಾರ್ವಜನಿಕ ಜೀವನದಲ್ಲಿ ಇದ್ದಾಗ ಅವರ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡುತ್ತವೆ. ಕೆಲವು ಸೆಲೆಬ್ರಿಟಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದರೆ, ಇನ್ನೂ ಕೆಲವರು ಸೈಲೆಂಟ್ ಆಗಿರುತ್ತಾರೆ. ಅದೇ ರೀತಿ ತಾಪ್ಸಿ ಪನ್ನು ಕೂಡ ತಮ್ಮದೇ ನಿಯಮ ಹಾಕಿಕೊಂಡಿದ್ದಾರೆ. ಅವರು ಎಂದಿಗೂ ತಮ್ಮ ವೈಯಕ್ತಿಕ ವಿಚಾರದಲ್ಲಿ ಸ್ಪಷ್ಟನೆ ನೀಡುವುದಿಲ್ಲ. ಅದೇ ಮಾತನ್ನು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ‘ನನ್ನ ವೈಯಕ್ತಿಕ ವಿಚಾರದಲ್ಲಿ ನಾನು ಈವರೆಗೆ ಸ್ಪಷ್ಟನೆ ನೀಡಿಲ್ಲ, ಮುಂದೆ ನೀಡುವುದೂ ಇಲ್ಲ’ ಎಂದಿದ್ದಾರೆ ತಾಪ್ಸಿ.

ಮಥಾಯಸ್​ ಬೋ ಅವರು ಭಾರತದ ಬ್ಯಾಡ್ಮಿಂಟನ್ ಕೋಚ್ ಆಗಿದ್ದಾರೆ. ಕಳೆದ 10 ವರ್ಷಗಳಿಂದ ತಾಪ್ಸಿ ಹಾಗೂ ಮಥಾಯಸ್ ಡೇಟಿಂಗ್ ಮಾಡುತ್ತಿದ್ದಾರೆ. 2013ರಲ್ಲಿ ತಾಪ್ಸಿ ಹಾಗೂ ಮಥಾಯಸ್​ ಬೋ ಮಧ್ಯೆ ಭೇಟಿ ಆಯಿತು. ನಂತರದ ದಿನಗಳಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತು.

ಇದನ್ನೂ ಓದಿ: ಕ್ರಿಶ್ಚಿಯನ್​-ಸಿಖ್​ ಸಂಪ್ರದಾಯದಂತೆ ತಾಪ್ಸಿ ಪನ್ನು ಮದುವೆ; ಬಾಲಿವುಡ್​ ಮಂದಿಗೆ ಆಹ್ವಾನ ಇಲ್ಲ?

ಸಿನಿಮಾ ವಿಚಾರಕ್ಕೆ ಬರೋದಾದರೆ ತಾಪ್ಸಿ ಪನ್ನು ಅವರು ‘ಡಂಕಿ’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ 2023ರ ಡಿಸೆಂಬರ್​ನಲ್ಲಿ ರಿಲೀಸ್ ಆಗಿ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 450 ಕೋಟಿ ರೂಪಾಯಿ ಗಳಿಕೆ ಮಾಡಿದೆ. ‘ವೋ ಲಡ್ಕಿ ಹೇ ಕಹಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಅರ್ಷದ್ ಸಯದ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರತೀಕ್ ಬಬ್ಬರ್ ಹಾಗೂ ಪ್ರತಿಕ್ ಗಾಂಧಿ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ