AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taapsee Pannu: ‘ನಾನು ಇನ್ನೂ ಪ್ರೆಗ್ನೆಂಟ್​ ಆಗಿಲ್ಲ’: ಮದುವೆ ಯಾವಾಗ ಅಂತ ಕೇಳಿದ್ದಕ್ಕೆ ಈ ಥರ ಉತ್ತರ ನೀಡಿದ ತಾಪ್ಸಿ ಪನ್ನು

‘ಮಕ್ಕಳನ್ನು ಪಡೆಯಬೇಕು ಎನಿಸಿದಾಗ ನಾನು ಮದುವೆ ಆಗುತ್ತೇನೆ’ ಎಂದು ಈ ಮೊದಲು ತಾಪ್ಸಿ ಪನ್ನು ಹೇಳಿದ್ದರು. ಅವರಿಗೆ ಈಗ 35 ವರ್ಷ ವಯಸ್ಸು.

Taapsee Pannu: ‘ನಾನು ಇನ್ನೂ ಪ್ರೆಗ್ನೆಂಟ್​ ಆಗಿಲ್ಲ’: ಮದುವೆ ಯಾವಾಗ ಅಂತ ಕೇಳಿದ್ದಕ್ಕೆ ಈ ಥರ ಉತ್ತರ ನೀಡಿದ ತಾಪ್ಸಿ ಪನ್ನು
ತಾಪ್ಸಿ ಪನ್ನು
ಮದನ್​ ಕುಮಾರ್​
|

Updated on: Jul 18, 2023 | 11:07 AM

Share

ನಟಿ ತಾಪ್ಸಿ ಪನ್ನು (Taapsee Pannu) ಅವರು ಸಿನಿಮಾ ಮತ್ತು ವೈಯಕ್ತಿಕ ವಿಚಾರಗಳ ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. 2022ರಲ್ಲಿ ಅವರು ಸಖತ್ ಬ್ಯುಸಿ ಆಗಿದ್ದರು. ಅವರು ನಟಿಸಿದ 6 ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ತೆರೆ ಕಂಡಿದ್ದವು. ಹಾಗಾಗಿ ಒಂದು ದೀರ್ಘ ಬ್ರೇಕ್​ ಪಡೆದುಕೊಂಡು ಅವರೀಗ ವಿದೇಶ ಸುತ್ತುತ್ತಿದ್ದಾರೆ. ಈ ನಡುವೆ ಅಭಿಮಾನಿಗಳ ಜೊತೆ ಸೋಶಿಯಲ್​ ಮೀಡಿಯಾ ಮೂಲಕ ತಾಪ್ಸಿ ಪನ್ನು ಅವರು ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಹಲವು ಬಗೆಯ ಪ್ರಶ್ನೆಗಳು ಅವರಿಗೆ ಎದುರಾಗಿವೆ. ಅಚ್ಚರಿ ಎಂದರೆ, ಮದುವೆ (Marriage) ಬಗ್ಗೆ ಕೇಳಿದ್ದಕ್ಕೆ ಪ್ರೆಗ್ನೆನ್ಸಿ (Pregnancy) ವಿಚಾರವನ್ನು ತಾಪ್ಸಿ ಪನ್ನು ಸ್ಪಷ್ಟಪಡಿಸಿದ್ದಾರೆ.

ಬ್ಯಾಡ್ಮಿಂಟನ್​ ಆಟಗಾರ ಹಾಗೂ ಕೋಚ್​ ಮಥಾಯಿಸ್​ ಬೋ ಅವರ ಜೊತೆ ತಾಪ್ಸಿ ಪನ್ನು ಬಹಳ ಕಾಲದಿಂದ ಡೇಟಿಂಗ್ ಮಾಡುತ್ತಿದ್ದಾರೆ. ಪ್ರಿಯಕರನ ಜೊತೆ ಅವರು ಆಗಾಗ ಫಾರಿನ್​ ಟ್ರಿಪ್​ ಮಾಡುತ್ತಾರೆ. ಆ ಫೋಟೋಗಳನ್ನು ಕೂಡ ಅವರು ಹಂಚಿಕೊಳ್ಳುತ್ತಾರೆ. ಆದರೆ ಮದುವೆ ಯಾವಾಗ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಆ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ತಾಪ್ಸಿ ಪನ್ನು ಉತ್ತರ ನೀಡಿದ್ದಾರೆ. ಅದು ಕೂಡ ಬಹಳ ಫನ್ನಿಯಾಗಿ.

ಇದನ್ನೂ ಓದಿ: ‘ತಾಪ್ಸಿ ಪನ್ನುಗಿಂತ ನನ್ನ ಸ್ತ* ದೊಡ್ಡದಿದೆ’; ವೈರಲ್ ಆಯ್ತು ಸ್ಟಾರ್ ಡೈರೆಕ್ಟರ್ ಹೇಳಿಕೆ

‘ಯಾವಾಗ ಮದುವೆ ಅಂತ ಕೇಳುತ್ತಿದ್ದೀರಿ. ನಾನಿನ್ನೂ ಗರ್ಭಿಣಿ ಆಗಿಲ್ಲ. ಸದ್ಯಕ್ಕಂತೂ ಆಗಲ್ಲ. ಆದಾಗ ನಿಮಗೆ ತಿಳಿಸುತ್ತೇನೆ’ ಎಂದು ತಾಪ್ಸಿ ಪನ್ನು ಉತ್ತರಿಸಿದ್ದಾರೆ. ‘ಮಕ್ಕಳನ್ನು ಪಡೆಯಬೇಕು ಎನಿಸಿದಾಗ ನಾನು ಮದುವೆ ಆಗುತ್ತೇನೆ’ ಎಂದು ಈ ಹಿಂದಿನ ಸಂದರ್ಶನದಲ್ಲಿ ಅವರು ಹೇಳಿದ್ದರು. ಅವರಿಗೆ ಈಗ 35 ವರ್ಷ ವಯಸ್ಸು. ಆದಷ್ಟು ಬೇಗ ತಾಪ್ಸಿ ಪನ್ನು ಮದುವೆ ಆಗಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಇದನ್ನೂ ಓದಿ: Taapsee Pannu: ಗ್ಲಾಮರಸ್​ ಬಟ್ಟೆ ಜತೆ ಲಕ್ಷ್ಮೀ ದೇವಿಯ ಸರ ಧರಿಸಿದ್ದಕ್ಕೆ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಾಪ್ಸಿ ಪನ್ನು ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ. ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡುತ್ತಿರುವ ‘ಡಂಕಿ’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ತಾಪ್ಸಿಗೆ ಸಿಕ್ಕಿದೆ. ಆ ಸಿನಿಮಾದ ಶೂಟಿಂಗ್​ ಪ್ರಗತಿಯಲ್ಲಿದೆ. ಇದಲ್ಲದೇ, ‘ಏಲಿಯನ್​’, ‘ಜನ ಗಣ ಮನ’, ‘ಓ ಲಡ್ಕಿ ಹೈ ಕಹಾ’, ‘ಫಿರ್​ ಆಯಿ ಹಸೀನ್​ ದಿಲ್​ರುಬಾ’ ಮುಂತಾದ ಸಿನಿಮಾಗಳಲ್ಲಿ ತಾಪ್ಸಿ ಪನ್ನು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ