Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Varma: ‘ನಾನು ಖುಷಿಯಾಗಿದ್ದೇನೆ’: ತಮನ್ನಾ ಭಾಟಿಯಾ ಪ್ರೀತಿ ಒಪ್ಪಿಕೊಂಡ ಬಳಿಕ ವಿಜಯ್​ ವರ್ಮಾ ಪ್ರತಿಕ್ರಿಯೆ

Tamannaah Bhatia: ‘ಈಗ ನನ್ನ ಜೀವನದಲ್ಲಿ ಸಾಕಷ್ಟು ಪ್ರೀತಿ ಇದೆ. ನಾನು ಖುಷಿಯಾಗಿ ಇದ್ದೇನೆ’ ಎಂದು ವಿಜಯ್​ ವರ್ಮಾ ಹೇಳಿದ್ದಾರೆ. ಆದರೆ ಖಾಸಗಿ ಜೀವನದ ಬಗ್ಗೆ ಅವರು ಹೆಚ್ಚು ಮಾತನಾಡಲು ಇಷ್ಟಪಟ್ಟಿಲ್ಲ.

Vijay Varma: ‘ನಾನು ಖುಷಿಯಾಗಿದ್ದೇನೆ’: ತಮನ್ನಾ ಭಾಟಿಯಾ ಪ್ರೀತಿ ಒಪ್ಪಿಕೊಂಡ ಬಳಿಕ ವಿಜಯ್​ ವರ್ಮಾ ಪ್ರತಿಕ್ರಿಯೆ
ವಿಜಯ್​ ವರ್ಮಾ, ತಮನ್ನಾ ಭಾಟಿಯಾ
Follow us
ಮದನ್​ ಕುಮಾರ್​
|

Updated on: Jun 14, 2023 | 10:49 PM

ನಟಿ ತಮನ್ನಾ ಭಾಟಿಯಾ (Tamanna Bhatia) ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಬಾಲಿವುಡ್​ ನಟ ವಿಜಯ್​ ವರ್ಮಾ ಜೊತೆ ಅವರು ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದುಂಟು. ಈಗ ಅವರು ನಿಧಾನವಾಗಿ ಈ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ತಮ್ಮ ಬಗ್ಗೆ ಹರಿದಾಡುತ್ತಿರುವ ಗಾಸಿಪ್​ಗಳಿಗೆ ಅವರು ಪ್ರತಿಕ್ರಿಯಿಸುತ್ತಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮನ್ನಾ ಭಾಟಿಯಾ (Tamannaah Bhatia) ಅವರು ಅನೇಕ ವಿಚಾರಗಳನ್ನು ಬಾಯಿ ಬಿಟ್ಟಿದ್ದರು. ಆ ಬಳಿಕ ವಿಜಯ್​ ವರ್ಮಾ ಕೂಡ ಬೇರೊಂದು ಯೂಟ್ಯೂಬ್​ ಚಾನೆಲ್​ಗೆ ಸಂದರ್ಶನ ನೀಡಿದ್ದಾರೆ. ತಾವು ಈಗ ಜೀವನದಲ್ಲಿ ಸಂತೋಷದಿಂದ ಇರುವುದಾಗಿ ವಿಜಯ್​ ವರ್ಮಾ (Vijay Varma) ಹೇಳಿದ್ದಾರೆ. ಶೀಘ್ರದಲ್ಲೇ ಈ ಪ್ರೇಮಿಗಳು ಹಸೆಮಣೆ ಏರಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ತಮನ್ನಾ ಹೇಳಿದ್ದೇನು?

‘ಯಾರೋ ಒಬ್ಬರು ನಿಮ್ಮ ಸಹನಟರಾಗಿದ್ದ ಮಾತ್ರಕ್ಕೆ ಅವರೊಡನೆ ಆಕರ್ಷಿತರಾಗಲು ಸಾಧ್ಯವಿಲ್ಲ. ಏಕೆಂದರೆ ನಾನು ಈಗಾಗಲೇ ಹಲವಾರು ನಟರೊಡನೆ ನಟಿಸಿದ್ದೇನೆ. ಯಾರ ಕಡೆಗೂ ನಾನು ಆಕರ್ಷಿತಳಾಗಿಲ್ಲ. ಯಾರ ಬಗ್ಗೆಯಾದರೂ ನೀವು ನಿಜಕ್ಕೂ ಮನಸೋತಿರೆಂದರೆ, ಭಾವನೆಗಳು ಹುಟ್ಟಿದವೆಂದರೆ ಅದು ಬಹಳ ಖಾಸಗಿ ವಿಷಯವಾಗಿರುತ್ತದೆ. ಆ ವ್ಯಕ್ತಿ ಹೇಗಿದ್ದಾನೆ, ಏನು ಮಾಡುತ್ತಿದ್ದಾನೆ, ಯಶಸ್ವಿ ವ್ಯಕ್ತಿಯೋ ಎಂಬುದೆಲ್ಲವೂ ಗಣನೆಗೆ ಬರುವುದೇ ಇಲ್ಲ’ ಎಂದಿದ್ದಾರೆ ತಮನ್ನಾ. ‘ವಿಜಯ್ ವರ್ಮಾ ನನ್ನ ಖುಷಿಯ ಖಜಾನೆ’ ಎಂದು ಅವರು ಬಣ್ಣಿಸಿದ್ದಾರೆ.

ಇದನ್ನೂ ಓದಿ: ತಮನ್ನಾ ಭಾಟಿಯಾ-ವಿಜಯ್​ ವರ್ಮಾ ಮನೆಯಲ್ಲಿ ನಡೆಯುತ್ತಿದೆ ಮದುವೆ ಮಾತುಕತೆ?

ವಿಜಯ್​ ವರ್ಮಾ ಪ್ರತಿಕ್ರಿಯೆ ಏನು?

‘ಈಗ ನನ್ನ ಜೀವನದಲ್ಲಿ ಸಾಕಷ್ಟು ಪ್ರೀತಿ ಇದೆ. ನಾನು ಖುಷಿಯಾಗಿ ಇದ್ದೇನೆ’ ಎಂದು ವಿಜಯ್​ ವರ್ಮಾ ಹೇಳಿದ್ದಾರೆ. ಆದರೆ ಖಾಸಗಿ ಜೀವನದ ಬಗ್ಗೆ ಅವರು ಹೆಚ್ಚು ಮಾತನಾಡಲು ಇಷ್ಟಪಟ್ಟಿಲ್ಲ. ಅದರ ಬದಲು ತಮ್ಮ ಕೆಲಸವೇ ಮಾತನಾಡಬೇಕು ಎಂದು ಅವರು ಹೇಳಿದ್ದಾರೆ. ತಮನ್ನಾ ಜೊತೆಗಿನ ಪ್ರೀತಿ ಬಗ್ಗೆ ಅವರು ವಿವರವಾಗಿ ಮಾತನಾಡುವುದು ಬಾಕಿ ಇದೆ. ಸದ್ಯ ಅವರಿಗೆ ಹಲವು ಸಿನಿಮಾ ಮತ್ತು ವೆಬ್​ ಸಿರೀಸ್​ಗಳ ಆಫರ್​ ಬರುತ್ತಿದೆ.

ಇದನ್ನೂ ಓದಿ: ಬರ್ಲಿನ್​ ಸಿನಿಮೋತ್ಸವದಲ್ಲಿ ಮಿಂಚಿದ ವಿಜಯ್​ ವರ್ಮಾ

ವಿಜಯ್​ ವರ್ಮಾ ಯಾರು?

2012ರಿಂದಲೂ ಸಿನಿಮಾಗಳಲ್ಲಿ ನಟಿಸುತ್ತಿರುವ ವಿಜಯ್ ವರ್ಮಾ ಅವರಿಗೆ ಮೊದಲಿಗೆ ತುಸು ಹೆಸರು ಮಾಡಿಕೊಟ್ಟಿದ್ದು ‘ಪಿಂಕ್’ ಸಿನಿಮಾದ ಸಣ್ಣ ನೆಗೆಟಿವ್ ಪಾತ್ರ. ಅದಾದ ಬಳಿಕ 2019ರ ‘ಗಲ್ಲಿ ಬಾಯ್’ ಸಿನಿಮಾದ ಪೋಷಕ ಪಾತ್ರದಿಂದ ಒಳ್ಳೆಯ ಹೆಸರು ಬಂತು. ಈ ನಡುವೆ ತೆಲುಗಿನ ‘ಎಂಸಿಎ’ ಸಿನಿಮಾದ ವಿಲನ್ ಪಾತ್ರದಲ್ಲಿಯೂ ವಿಜಯ್ ನಟಿಸಿದರು. ‘ಮಿರ್ಜಾಪುರ್’ ಸಿನಿಮಾದ ಅವಳಿ-ಜವಳಿ ಪಾತ್ರ ವಿಜಯ್ ವರ್ಮಾಗೆ ಉತ್ತಮ ಜಯಪ್ರಿಯತೆ ಗಳಿಸಿಕೊಟ್ಟಿತು. ಇತ್ತೀಚೆಗೆ ಬಿಡುಗಡೆ ಆದ ‘ದಹಾಡ್​’ ವೆಬ್ ಸರಣಿಯಲ್ಲಿ ವಿಲನ್ ಪಾತ್ರ ಮಾಡಿ ವಿಜಯ್ ವರ್ಮಾ ಮಿಂಚಿದ್ದಾರೆ. ಆಲಿಯಾ ಭಟ್ ಜೊತೆ ‘ಡಾರ್ಲಿಂಗ್ಸ್’ ಸಿನಿಮಾದಲ್ಲಿಯೂ ವಿಜಯ್ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ