‘ಉರಿ’ ಚಿತ್ರವನ್ನೂ ಬೀಟ್​ ಮಾಡಿದ ‘ದಿ ಕಾಶ್ಮೀರ್​ ಫೈಲ್ಸ್​’; ಈವರೆಗೂ ಆಗಿರುವ ಕಲೆಕ್ಷನ್​ ಎಷ್ಟು?

The Kashmir Files Total Collection: ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದಲ್ಲಿ ದೇಶಭಕ್ತಿಯ ಕಥಾಹಂದರ ಇತ್ತು. ಆ ಚಿತ್ರದ ಲೈಫ್​ಟೈಮ್​ ಕಲೆಕ್ಷನ್​ ಅನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಮೀರಿಸಿದೆ.

‘ಉರಿ’ ಚಿತ್ರವನ್ನೂ ಬೀಟ್​ ಮಾಡಿದ ‘ದಿ ಕಾಶ್ಮೀರ್​ ಫೈಲ್ಸ್​’; ಈವರೆಗೂ ಆಗಿರುವ ಕಲೆಕ್ಷನ್​ ಎಷ್ಟು?
ಉರಿ: ದಿ ಸರ್ಜಿಕಲ್​ ಸ್ಟ್ರೈಕ್​, ದಿ ಕಾಶ್ಮೀರ್​ ಫೈಲ್ಸ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 04, 2022 | 3:31 PM

ಭಾರತದ ಸಿನಿಮಾರಂಗದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಈ ಹಿಂದೆ ಗಲ್ಲಾಪೆಟ್ಟಿಗೆಯಲ್ಲಿ ಅಬ್ಬರಿಸಿದ್ದ ಅನೇಕ ಚಿತ್ರಗಳನ್ನು ಹಿಂದಿಕ್ಕಿ ಈ ಸಿನಿಮಾ ಸೌಂಡು ಮಾಡುತ್ತಿದೆ. ಬಿಡುಗಡೆಯಾಗಿ 25 ದಿನ ಕಳೆದಿದ್ದರೂ ಕೂಡ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಹಲವೆಡೆ ಉತ್ತಮ ಪ್ರದರ್ಶನ ಕಾಣುತ್ತಲೇ ಇದೆ. ಕಲೆಕ್ಷನ್​ (The Kashmir Files Box Office Collection) ವಿಚಾರದಲ್ಲಿ ಹಲವು ಮೈಲಿಗಲ್ಲುಗಳನ್ನು ಈ ಸಿನಿಮಾ ಸ್ಥಾಪಿಸಿದೆ. ಈ ಹಿಂದೆ ವಿಕ್ಕಿ ಕೌಶಲ್​ ನಟಿಸಿದ್ದ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ (Uri The Surgical Strike) ಸಿನಿಮಾ ಮಾಡಿದ್ದ ಲೈಫ್​ಟೈಮ್​ ಗಳಿಕೆಯನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕೇವಲ 24ನೇ ದಿನದಲ್ಲಿ ಮಾಡಿದೆ. ಇದು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ, ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಮತ್ತು ಅವರ ಇಡೀ ತಂಡಕ್ಕೆ ಖುಷಿ ನೀಡಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಮೂಡಿಬಂದ ಈ ಸಿನಿಮಾವನ್ನು ದೇಶಾದ್ಯಂತ ಜನರು ಮುಗಿಬಿದ್ದು ನೋಡಿದ್ದಾರೆ. ಈಗಲೂ ಕೂಡ ಈ ಚಿತ್ರ ಕೋಟಿಗಟ್ಟಲೆ ಹಣ ಗಳಿಸುತ್ತಿದೆ. ದೊಡ್ಡ ದೊಡ್ಡ ಸ್ಟಾರ್​ ಸಿನಿಮಾಗಳು ತೆರೆಕಂಡರೂ ಕೂಡ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಹವಾ ಕಮ್ಮಿ ಆಗಿಲ್ಲ.

‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದಲ್ಲಿ ದೇಶಭಕ್ತಿಯ ಕಥಾಹಂದರ ಇತ್ತು. ಆ ಚಿತ್ರಕ್ಕೆ ಆದಿತ್ಯ ಧಾರ್​ ನಿರ್ದೇಶನ ಮಾಡಿದ್ದರು. ವಿಕ್ಕಿ ಕೌಶಲ್​, ಪರೇಷ್​ ರಾವಲ್​, ಯಾಮಿ ಗೌತಮ್​ ಮುಂತಾದವರು ಈ ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದರು. ಹಲವು ತಿಂಗಳ ಕಾಲ ಆ ಚಿತ್ರ ಪ್ರದರ್ಶನ ಕಂಡಿತ್ತು. ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದ ಲೈಫ್​ಟೈಮ್​ ಕಲೆಕ್ಷನ್​​ 245 ಕೋಟಿ ರೂಪಾಯಿಗಳು. ಈಗ ಆ ಸಿನಿಮಾಗಿಂತಲೂ ಹೆಚ್ಚು ಕಲೆಕ್ಷನ್​ ಮಾಡುವ ಮೂಲಕ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಜಯಭೇರಿ ಬಾರಿಸಿದೆ.

ಏ.3ಕ್ಕೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬರೋಬ್ಬರಿ 245 ಕೋಟಿ ರೂಪಾಯಿ ಗಳಿಸುವ ಮೂಲಕ ‘ಉರಿ’ ಚಿತ್ರದ ಸರಿಸಮವಾಗಿ ನಿಂತಿತು. ಏ.4ರಂದು ಕೂಡ ಹಲವು ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಂಡಿದೆ. ಇನ್ನೂ ಅನೇಕ ದಿನಗಳ ಕಾಲ ಪ್ರದರ್ಶನ ಆಗಲಿದೆ. ಆ ಮೂಲಕ ಬಾಕ್ಸ್​ ಆಫೀಸ್​ ಗಳಿಕೆ ವಿಚಾರದಲ್ಲಿ ‘ಉರಿ’ ಚಿತ್ರವನ್ನೂ ಮೀರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಮುನ್ನುಗ್ಗುತ್ತಿದೆ.

ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ವಿಥುನ್​ ಚಕ್ರವರ್ತಿ, ಪ್ರಕಾಶ್​ ಬೆಳವಾಡಿ, ಪುನೀತ್​ ಇಸ್ಸಾರ್​ ಮುಂತಾದವರು ನಟಿಸಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂತಾದ ರಾಜಕಾರಣಿಗಳು ಮೆಚ್ಚುಗೆ ಮಾತುಗಳನ್ನು ಹೇಳಿದ ಬಳಿಕ ಜನರಿಗೆ ಈ ಚಿತ್ರದ ಬಗ್ಗೆ ಕೌತುಕ ಹೆಚ್ಚಿತು. ಅನೇಕ ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಯಿತು.

ಕೆಲವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ವಿರೋಧಿಸಿದ್ದಾರೆ. ಆದರೂ ಇದರ ಗಲ್ಲಾಪೆಟ್ಟಿಗೆ ಗಳಿಕೆಗೆ ತೊಂದರೆ ಆಗಿಲ್ಲ. ಕಡಿಮೆ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಲಾಭ ಮಾಡಿದೆ. ಆ ಮೂಲಕ ಹಿಂದಿ ಸಿನಿಮಾದ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ. ಈ ಚಿತ್ರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಜಾರಿಯಲ್ಲಿದೆ. ಅತ್ತ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಗಮನ ಹರಿಸಿದ್ದಾರೆ. ಆ ಚಿತ್ರಕ್ಕೆ ‘ದಿ ದಿಲ್ಲಿ ಫೈಲ್ಸ್​’ ಎಂದು ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ:

‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ