AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿಗೆ Y ಕೆಟಗರಿ ಭದ್ರತೆ

Vivek Agnihotri | Y category security: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ವಿವಾದ ಸೃಷ್ಟಿ ಆಗಿರುವ ಬೆನ್ನಲ್ಲೇ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗುತ್ತಿದೆ. ಈ ಕುರಿತು ಎಎನ್​ಐ ಸುದ್ದಿ ಸಂಸ್ಥೆ ಟ್ವೀಟ್​ ಮಾಡಿದೆ.

Breaking News: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿಗೆ Y ಕೆಟಗರಿ ಭದ್ರತೆ
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Mar 18, 2022 | 4:44 PM

Share

ಬಾಲಿವುಡ್​ನ ‘ದಿ ಕಾಶ್ಮೀರ್​ ಫೈಲ್ಸ್​’  ಸಿನಿಮಾ (The Kashmir Files) ಎಲ್ಲೆಡೆ ಸದ್ದು ಮಾಡುತ್ತಿದೆ. ಜೊತೆಗೆ ಒಂದಷ್ಟು ವಿವಾದಗಳನ್ನು ಕೂಡ ಸೃಷ್ಟಿ ಮಾಡಿದೆ. ಈ ಸಿನಿಮಾ ನಿರ್ದೇಶನ ಮಾಡಿರುವ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ತೋರಿಸಲಾದ ದೃಶ್ಯಗಳ ಬಗ್ಗೆ ಕೆಲವರಿಂದ ತಕರಾರು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ವೈ ಕೆಟಗರಿ ಭದ್ರತೆ (Y category security) ನೀಡಲಾಗುತ್ತಿದೆ. ಈ ಕುರಿತು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ ಎಂದು ಎಎನ್​ಐ ಸುದ್ದಿ ಸಂಸ್ಥೆ ಟ್ವೀಟ್​ ಮಾಡಿದೆ. ಅಭಿಷೇಕ್​ ಅಗರ್​ವಾಲ್​ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ವಿಥುನ್ ಚಕ್ರವರ್ತಿ, ಪುನೀತ್​ ಇಸ್ಸಾರ್​, ಪ್ರಕಾಶ್​ ಬೆಳವಾಡಿ ಮುಂತಾದವರು ನಟಿಸಿದ್ದಾರೆ.

ಈ ಸಿನಿಮಾಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ಕ್ಷೇತ್ರದ ಅನೇಕ ಗಣ್ಯರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿ ಶಹಭಾಷ್ ಎಂದಿದ್ದಾರೆ. ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಇದು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ವಿದೇಶಿ ಗಳಿಕೆಯನ್ನೂ ಸೇರಿ ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ರೂಪಾಯಿ ಕಮಾಯಿ ಆಗಿದೆ. ತೆರೆಕಂಡು ಒಂದು ವಾರ ಆಗಿದ್ದರೂ ಸಹ ಇಂದಿಗೂ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ್ದಕ್ಕಾಗಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿವೆ. ಸೋಶಿಯಲ್​ ಮೀಡಿಯಾದಲ್ಲೂ ಅವರಿಗೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರದಿಂದ ತೀರ್ಮಾನಿಸಲಾಗಿದೆ. 7ರಿಂದ 8 ಜನ CRPF ಕಮಾಂಡೋಗಳು ವಿವೇಕ್​ ಅವರಿಗೆ ಭದ್ರತೆ ಒದಗಿಸಲಿದ್ದಾರೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಅವರಿಗೆ ಅನೇಕರು ಕೊಲೆ ಬೆದರಿಗೆ ಹಾಕಿದ್ದರು. ಆ ಕಾರಣದಿಂದ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯನ್ನು ಡಿಆ್ಯಕ್ಟೀವೇಟ್​​ ಮಾಡುವುದಾಗಿ ವಿವೇಕ್​ ಅಗ್ನಿಹೋತ್ರಿ ತಿಳಿಸಿದ್ದರು. ಸಿನಿಮಾ ಬಿಡುಗಡೆ ಆದ ಬಳಿಕ ಬೆದರಿಕೆ ಕರೆಗಳು ಹೆಚ್ಚಿವೆ ಎನ್ನಲಾಗಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾ.11ರಂದು ರಿಲೀಸ್​ ಆಯಿತು. ಮರುದಿನವೇ ವಿವೇಕ್​ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಇತ್ತೀಚೆಗೆ ಗೃಹ ಸಚಿವ ಅಮಿತ್​ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಆ ಸಂದರ್ಭದ ಫೋಟೋಗಳನ್ನು ವಿವೇಕ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅವರಿಗೆ ವೈ ಕೆಟಗರಿ ಭದ್ರತೆ ಸಿಕ್ಕಿದೆ.

ಇದನ್ನೂ ಓದಿ:

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

ಅಮಿತ್​ ಶಾ ಭೇಟಿ ಮಾಡಿದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡ; ಇಲ್ಲಿವೆ ಫೋಟೋಗಳು

Published On - 12:26 pm, Fri, 18 March 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ