ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ತಮ್ಮ ನೇರ ನಡೆ-ನುಡಿಯ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ಈ ಸ್ವಭಾವದಿಂದ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಈಗ ಪ್ರತಿಷ್ಠಿತ ‘ಫಿಲ್ಮ್ಫೇರ್’ ಪ್ರಶಸ್ತಿ (Filmfare Awards) ವಿರುದ್ಧ ಅವರು ಗುಡುಗಿದ್ದಾರೆ. ಚಿತ್ರರಂಗದಲ್ಲಿ ಇರುವ ಬಹುತೇಕರಿಗೆ ಪ್ರಶಸ್ತಿ ಬಗ್ಗೆ ಆಸೆ ಇರುತ್ತದೆ. ಅದರಲ್ಲೂ ‘ಫಿಲ್ಮ್ಫೇರ್’ ರೀತಿಯ ಅವಾರ್ಡ್ ಸಿಗಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಈ ಸಾಲಿಗೆ ಸೇರುವವರಲ್ಲ. ಅವರು ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾ ಬರೋಬ್ಬರಿ 7 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಹಾಗಿದ್ದರೂ ಕೂಡ ಈ ಪ್ರಶಸ್ತಿ ಪಡೆಯಬಾರದು ಎಂದು ವಿವೇಕ್ ಅಗ್ನಿಹೋತ್ರಿ ನಿರ್ಧರಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭಗಳ ಹಿಂದಿರುವ ರಾಜಕೀಯದ ಬಗ್ಗೆ ಈಗಾಗಲೇ ಅನೇಕ ನಟ-ನಟಿಯರು ಮಾತನಾಡಿದ್ದುಂಟು. ಈಗಿನದ್ದು ವಿವೇಕ್ ಅಗ್ನಿಹೋತ್ರಿ ಸರದಿ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘68ನೇ ಫಿಲ್ಮ್ಫೇರ್ ಅವಾರ್ಡ್ಸ್ನಲ್ಲಿ ನನ್ನ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 7 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ ಎಂಬುದು ಮಾಧ್ಯಮಗಳಿಂದ ತಿಳಿಯಿತು. ಆದರೆ ನೈತಿಕತೆ ಇಲ್ಲದ, ಸಿನಿಮಾವಿರೋಧಿಯಾದ ಈ ಪ್ರಶಸ್ತಿತನ್ನು ನಯವಾಗಿ ತಿರಸ್ಕರಿಸುತ್ತೇನೆ’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಬರಹ ಆರಂಭಿಸಿದ್ದಾರೆ.
ANNOUNCEMENT:
FILMFARE AWARDSI learnt from media that #TheKashmirFiles is nominated in 7 categories for the 68th Filmfare Awards. But I politely refuse to be part of these unethical and anti-cinema awards. Here is why:
According to Filmfare, other than the stars, nobody has… pic.twitter.com/2qKCiZ8Llh
— Vivek Ranjan Agnihotri (@vivekagnihotri) April 27, 2023
‘ಫಿಲ್ಮ್ಫೇರ್ ಆಯೋಜಕರ ಪ್ರಕಾರ ಸ್ಟಾರ್ ಕಲಾವಿದರನ್ನು ಹೊರತುಪಡಿಸಿ ಇನ್ನುಳಿದವರ ಮುಖಕ್ಕೆ ಬೆಲೆ ಇಲ್ಲ. ಬೇರೆ ಯಾರೂ ಮುಖ್ಯರಲ್ಲ. ಫಿಲ್ಮ್ಫೇರ್ನಿಂದ ನಿರ್ದೇಶಕರಿಗೆ ಘನತೆ ಬರೋದಿಲ್ಲ. ಬದಲಿಗೆ, ಅವಮಾನಿಸುವ ಈ ವ್ಯವಸ್ಥೆ ಅಂತ್ಯವಾಗಬೇಕು. ಹಾಗಾಗಿ ನಾನು ಇದನ್ನು ವಿರೋಧಿಸುತ್ತಿದ್ದೇನೆ. ಬರಹಗಾರರು, ನಿರ್ದೇಶಕರು ಮತ್ತು ಇತರೆ ವಿಭಾಗಗಳ ಮುಖ್ಯಸ್ಥರನ್ನು ಕೀಳಾಗಿ ಕಾಣುವ ವ್ಯವಸ್ಥೆಯ ಭಾಗವಾಗಲು ನಾನು ನಿರಾಕರಿಸುತ್ತೇನೆ’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
ಮಾದಕ ಸಿನಿಮಾ ಮಾಡಿದ ನಿರ್ದೇಶಕ ಅಂತ ಟೀಕಿಸಿದ್ದಕ್ಕೆ ರಾಹುಲ್ ಗಾಂಧಿ ರೀತಿ ಉತ್ತರಿಸಿದ ವಿವೇಕ್ ಅಗ್ನಿಹೋತ್ರಿ
2022ರಲ್ಲಿ ತೆರೆಕಂಡ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಿಂದ ವಿವೇಕ್ ಅಗ್ನಿಹೋತ್ರಿ ಅವರಿಗೆ ಖ್ಯಾತಿ ಸಿಕ್ಕಿದೆ. 68ನೇ ‘ಫಿಲ್ಮ್ಫೇರ್’ ಅವಾರ್ಡ್ಸ್ನ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ನಟ, ಅತ್ಯುತ್ತಮ ಚಿತ್ರಕಥೆ ಮುಂತಾದ ವಿಭಾಗಗಳಲ್ಲಿ ಈ ಸಿನಿಮಾ ನಾಮಿನೇಟ್ ಆಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:08 pm, Thu, 27 April 23