ಲಾಭ ಮಾಡುವಲ್ಲಿ ‘ಉರಿ’ ಸಿನಿಮಾವನ್ನೂ ಮೀರಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಇಲ್ಲಿದೆ ಲೆಕ್ಕಾಚಾರ

The Kashmir Files: ಬಾಲಿವುಡ್​ನಲ್ಲಿ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಎಂಬ ಖ್ಯಾತಿಯನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಪಡೆದುಕೊಂಡಿದೆ. 231 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿದೆ.

ಲಾಭ ಮಾಡುವಲ್ಲಿ ‘ಉರಿ’ ಸಿನಿಮಾವನ್ನೂ ಮೀರಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಇಲ್ಲಿದೆ ಲೆಕ್ಕಾಚಾರ
ವಿಕ್ಕಿ ಕೌಶಲ್​, ಅನುಪಮ್​ ಖೇರ್​
Follow us
TV9 Web
| Updated By: ಮದನ್​ ಕುಮಾರ್​

Updated on:Mar 30, 2022 | 8:18 AM

ಯಾರೂ ನಿರೀಕ್ಷೆ ಮಾಡಿರದ ರೀತಿಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಸಾಧನೆ ಮಾಡಿದೆ. ಯಾವುದೇ ಕಮರ್ಷಿಯಲ್​ ಅಂಶಗಳನ್ನು ನೆಚ್ಚಿಕೊಳ್ಳದ ಈ ಚಿತ್ರವು ಬಾಕ್ಸ್​ ಆಫೀಸ್​ನಲ್ಲಿ ಕಮರ್ಷಿಯಲ್​ ಹಿಟ್​ ಎನಿಸಿಕೊಂಡಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರಿಗೆ ಈ ಸಿನಿಮಾದಿಂದ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅನೇಕ ಸ್ಟಾರ್​ ನಟರ ಸಿನಿಮಾಗಳಿಗೂ ಪೈಪೋಟಿ ನೀಡಿ, ಗಲ್ಲಾಪೆಟ್ಟಿಗೆಯಲ್ಲಿ ಅತ್ಯುತ್ತಮ ಕಮಾಯಿ ಮಾಡಿದ್ದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ಹೆಚ್ಚುಗಾರಿಕೆ. ಹಣ ಗಳಿಕೆ ವಿಚಾರದಲ್ಲಿ ಈ ಸಿನಿಮಾ ಅನೇಕ ದಾಖಲೆಗಳನ್ನು ಬರೆದಿದೆ. ಸ್ಟಾರ್​ ಹೀರೋಗಳು ಚಿತ್ರಗಳೂ ಮಾಡದಂತಹ ಅನೇಕ ದಾಖಲೆಯನ್ನು ಈ ಚಿತ್ರ ಮಾಡಿದೆ. ಈ ಹಿಂದೆ ವಿಕ್ಕಿ ಕೌಶಲ್​ ನಟನೆಯ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ (Uri The Surgical Strike) ಸಿನಿಮಾ ಬಾಲಿವುಡ್​ನಲ್ಲಿ ಅತಿ ಹೆಚ್ಚು ಲಾಭ ಮಾಡಿದ ಚಿತ್ರ ಎಂಬ ಖ್ಯಾತಿ ಪಡೆದಿತ್ತು. ಈಗ ಆ ಸ್ಥಾನವನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪಡೆದುಕೊಂಡಿದೆ. ಇದು ಚಿತ್ರತಂಡಕ್ಕೆ ಇನ್ನಷ್ಟು ಹೆಮ್ಮೆ ತಂದಿದೆ. ಇಂಥ ಹಲವು ಕಾರಣಗಳಿಂದಾಗಿ ಈ ಸಿನಿಮಾ ದೇಶಾದ್ಯಂತ ಸಂಚನಲ ಮೂಡಿಸಿದೆ.

ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿ 50 ಅಥವಾ 60 ಕೋಟಿ ರೂಪಾಯಿ ಲಾಭ ಪಡೆಯುವ ಟ್ರೆಂಡ್​ ಒಂದು ಕಡೆಯಾದರೆ, ತುಂಬ ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಿ ಅತಿ ಹೆಚ್ಚು ಲಾಭ ಪಡೆಯುವುದು ಇನ್ನೊಂದು ಬಗೆಯ ಟ್ರೆಂಡ್​. ಎರಡನೇ ಪ್ರಕಾರದ ಯಶಸ್ಸಿಗೆ ಹೆಚ್ಚು ತೂಕ. ಅಂಥ ಸಾಧನೆಯನ್ನು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಮಾಡಿದೆ.

ಒಂದು ಮೂಲದ ಮಾಹಿತಿಯ ಪ್ರಕಾರ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿರುವುದು 20 ಕೋಟಿ ರೂಪಾಯಿ ಬಜೆಟ್​ನಲ್ಲಿ. ಆದರೆ ಈ ಸಿನಿಮಾ ಈವರೆಗೂ (18 ದಿಗಳಲ್ಲಿ) ಗಳಿಸಿರುವುದು ಬರೋಬ್ಬರಿ 231 ಕೋಟಿ ರೂಪಾಯಿ. ಆ ಮೂಲಕ ಬಾಲಿವುಡ್​ನಲ್ಲಿ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಒಳಗಾಗಿದೆ.

ಕಲಾವಿದರಿಗೆ ನೀಡಿದ ಸಂಭಾವನೆ ಎಷ್ಟು?

ಹಿರಿಯ ನಟರಾದ ಅನುಪಮ್​ ಖೇರ್​, ಮಿಥುನ್ ಚಕ್ರವರ್ತಿ, ಪುನೀತ್​ ಇಸ್ಸಾರ್​ ಅವರು ಈ ಸಿನಿಮಾದಲ್ಲಿ ಗಮನಾರ್ಹ ಅಭಿನಯ ನೀಡಿದ್ದಾರೆ. ಮಿಥುನ್​ ಚಕ್ರವರ್ತಿ ಅವರಿಗೆ 1.5 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ಅನುಪಮ್​ ಖೇರ್​ ಅವರು 1 ಕೋಟಿ ರೂಪಾಯಿ ಪಡೆದಿದ್ದಾರೆ. ನಟಿ ಪಲ್ಲವಿ ಜೋಶಿ ಅವರು 50ರಿಂದ 70 ಲಕ್ಷ ರೂಪಾಯಿ ಸಂಭಾವನೆ ಪಡೆದಿರಬಹುದು ಎನ್ನಲಾಗಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ತಮ್ಮ ಕೆಲಸಕ್ಕೆ 1 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎಂದು ವರದಿ ಆಗಿದೆ.

ಯುವ ನಟ ದರ್ಶನ್​ ಕುಮಾರ್​ ಅವರಿಗೆ 45 ಲಕ್ಷ ರೂಪಾಯಿ ನೀಡಲಾಗಿದೆ. ಪುನೀತ್​ ಇಸ್ಸಾರ್​ ಮತ್ತು ಮೃಣಾಲ್​ ಕುಲಕರ್ಣಿ ಅವರು ತಲಾ 50 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಈ ಸಂಖ್ಯೆಗಳ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಈ ಚಿತ್ರಕ್ಕೆ ಅಭಿಷೇಕ್​ ಅಗರ್​ವಾಲ್​ ಬಂಡವಾಳ ಹೂಡಿದ್ದಾರೆ. 1990ರ ಸಮಯದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈಗಲೂ ಅನೇಕ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ:

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

ತನ್ನದೇ ರಕ್ತ ಸುರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಪೋಸ್ಟರ್​ ರಚಿಸಿದ ಮಹಿಳೆ; ‘ಇಂಥದ್ದೆಲ್ಲ ಮಾಡ್ಬೇಡಿ’ ಎಂದ ನಿರ್ದೇಶಕ

Published On - 8:15 am, Wed, 30 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್