ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತು. ಮೊದಲ ದಿನ ಕೇವಲ 3 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಬಾಕ್ಸ್ ಆಫೀಸ್ ಉಡೀಸ್ ಮಾಡಿತು. ಈ ಮೂಲಕ ಸಿನಿಮಾ ಸದ್ದು ಮಾಡಿತು. ಈಗ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ (The Kashmir Files) ರೀ ರೀಲೀಸ್ ಆಗುತ್ತಿದೆ. ‘ಪಠಾಣ್’ ಸಿನಿಮಾ ಜತೆಗೆ ಈ ಚಿತ್ರ ಸ್ಪರ್ಧೆ ನೀಡುತ್ತಿದೆ ಅನ್ನೋದು ವಿಶೇಷ.
ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆಗೆ ಸಂಬಂಧಿಸಿದ ವಿಷಯ ಇಟ್ಟುಕೊಂಡು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಸಿದ್ಧಗೊಂಡಿತು. ಈ ಚಿತ್ರವನ್ನು ಜನರು ತುಂಬಾನೇ ಇಷ್ಟಪಟ್ಟರು. ಒಟಿಟಿಯಲ್ಲಿ ರಿಲೀಸ್ ಆಗಿ ಸಿನಿಮಾ ಸದ್ದು ಮಾಡಿತು. ಈಗ ಈ ಚಿತ್ರ ಥಿಯೇಟರ್ನಲ್ಲಿ ಮತ್ತೆ ಬಿಡುಗಡೆ ಆಗಲಿದೆ.
ಈ ಬಗ್ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಅವರ ಪತ್ನಿ, ನಟಿ ಪಲ್ಲವಿ ಜೋಶಿ ಅವರು ಮಾಹಿತಿ ನೀಡಿದ್ದಾರೆ. ‘ಜನವರಿ 19ರಂದು ದಿ ಕಾಶ್ಮೀರ್ ಫೈಲ್ಸ್ ಚಿತ್ರಮಂದಿರದಲ್ಲಿ ರಿಲೀಸ್ ಆಗುತ್ತಿದೆ. ಜನರ ಬೇಡಿಕೆ ಮೇರೆಗೆ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ’ ಎಂದು ಪಲ್ಲವಿ ಜೋಶಿ ಅವರು ಬರೆದುಕೊಂಡಿದ್ದಾರೆ. ಮೊದಲ ಬಾರಿಗೆ 2022, ಮಾರ್ಚ್ 11ರಂದು ಈ ಚಿತ್ರ ರಿಲೀಸ್ ಆಗಿತ್ತು.
ಜನವರಿ 25ರಂದು ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಥಿಯೇಟರ್ಗೆ ಕಾಲಿಡುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಇದು ಶಾರುಖ್ ಖಾನ್ ಅವರ ಕಂಬ್ಯಾಕ್ ಸಿನಿಮಾ. ಈ ಕಾರಣಕ್ಕೆ ಅಭಿಮಾನಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾದಿದ್ದಾರೆ. ಈ ಚಿತ್ರದ ಜತೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಸ್ಪರ್ಧೆಗೆ ಇಳಿದಿದೆ. ಈ ಚಿತ್ರ ಈಗಾಗಲೇ ಒಟಿಟಿಯಲ್ಲಿ ನೋಡಲು ಲಭ್ಯವಿದೆ. ಹೀಗಾಗಿ, ಥಿಯೇಟರ್ನಲ್ಲಿ ಈ ಚಿತ್ರವನ್ನು ಜನರು ಕಣ್ತುಂಬಿಕೊಳ್ಳುತ್ತಾರೋ ಅಥವಾ ಇಲ್ಲವೋ ಎಂಬ ಪ್ರಶ್ನೆ ಮೂಡಿದೆ.
ಇದನ್ನೂ ಓದಿ: ‘ಧಾರ್ಮಿಕ ಭಯೋತ್ಪಾದನೆ ತಡೆಗೆ ತೆರಿಗೆ ಹಣ ಬಳಕೆ ಆಗುತ್ತಿದೆ’; ಬೊಬ್ಬೆ ಹೊಡೆದವರಿಗೆ ವಿವೇಕ್ ಅಗ್ನಿಹೋತ್ರಿ ತಿರುಗೇಟು
ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದಲ್ಲಿ ಮೂಡಿಬಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮೊದಲಾದವರು ನಟಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ಅವರು ಸದ್ಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ.