ಜಮ್ಮು ಮಲ್ಟಿಪ್ಲೆಕ್ಸ್​ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರದರ್ಶನಕ್ಕೆ ತಡೆ; ವೈರಲ್​ ಆಗಿದೆ ವಿಡಿಯೋ

ಮಲ್ಟಿಪ್ಲೆಕ್ಸ್ ಸಿಬ್ಬಂದಿಗಳು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಪ್ರದರ್ಶನ ನಿಲ್ಲಿಸುತ್ತಿದ್ದಂತೆಯೇ ಗದ್ದಲ ಉಂಟಾಯಿತು. ಸಿಬ್ಬಂದಿ ವಿರುದ್ಧ ಪ್ರೇಕ್ಷಕರು ಸಿಡಿದೆದ್ದರು.

ಜಮ್ಮು ಮಲ್ಟಿಪ್ಲೆಕ್ಸ್​ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರದರ್ಶನಕ್ಕೆ ತಡೆ; ವೈರಲ್​ ಆಗಿದೆ ವಿಡಿಯೋ
ದಿ ಕಾಶ್ಮೀರ್​ ಫೈಲ್ಸ್
Follow us
| Updated By: ಮದನ್​ ಕುಮಾರ್​

Updated on: Mar 13, 2022 | 9:17 AM

ದೇಶಾದ್ಯಂತ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files Movie) ಬಗ್ಗೆ ಚರ್ಚೆ ಶುರುವಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಅವರು ಮೇಲೆ ನಡೆದ ದೌರ್ಜನ್ಯಗಳ ಕುರಿತು ಸಿನಿಮಾದಲ್ಲಿ ವಿವರಿಸಲಾಗಿದೆ. ಅನೇಕ ವಿವಾದಗಳ ಮೂಲಕವೂ ಈ ಚಿತ್ರ ಸುದ್ದಿ ಆಗುತ್ತಿದೆ. ಆರಂಭದಲ್ಲಿ ಈ ಸಿನಿಮಾದ ಪ್ರಚಾರಕ್ಕೆ ‘ದಿ ಕಪಿಲ್​ ಶರ್ಮಾ ಶೋ’ನಲ್ಲಿ ಅವಕಾಶ ಸಿಗಲಿಲ್ಲ ಎಂಬ ಬಗ್ಗೆ ಕಾಂಟ್ರವರ್ಸಿ ಆಗಿತ್ತು. ನಂತರ ಕೆಲವರು ಈ ಚಿತ್ರದ ವಿರುದ್ಧ ಕೋರ್ಟ್​ ಮೆಟ್ಟಿಲು ಏರಿದರು. ಈಗ ಇನ್ನೊಂದು ವಿವಾದ ತಲೆ ಎತ್ತಿದೆ. ಜಮ್ಮುವಿನಲ್ಲಿ  (Jammu) ಪ್ರದರ್ಶನ ಆಗುತ್ತಿದ್ದ ಈ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಅಲ್ಲದೇ ಚಿತ್ರ ನೋಡಲು ಬಂದಿದ್ದ ಪ್ರೇಕ್ಷಕರ ಮೇಲೆ ಹಲ್ಲೆ ಆಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ. ಈ ಕುರಿತ ಒಂದು ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಅಷ್ಟಕ್ಕೂ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ಸ್ಕ್ರೀನಿಂಗ್​ ನಿಲ್ಲಿಸಿದ್ದು ಯಾಕೆ ಎಂದು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಪ್ರಶ್ನೆ ಮಾಡಿದ್ದಾರೆ.

ಕೊರೊನಾ ಮೂರನೇ ಅಲೆ ಮುಗಿದ ಬಳಿಕ ಕೆಲವೇ ಕೆಲವು ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿವೆ. ‘ಗಂಗೂಬಾಯಿ ಕಾಠಿಯಾವಾಡಿ’, ‘ರಾಧೆ ಶ್ಯಾಮ್​’ ಮುಂತಾದ ಚಿತ್ರಗಳಿಂದ ಸಿನಿಮಾರಂಗದ ವಹಿವಾಟು ಚೇತರಿಸಿಕೊಂಡಿದೆ. ಈ ಸಂದರ್ಭದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕೂಡ ಜನರನ್ನು ಸೆಳೆದುಕೊಳ್ಳುತ್ತಿದೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ಈ ಚಿತ್ರವನ್ನು ಅಭಿಷೇಕ್​ ಅಗರ್​ವಾಲ್​ ನಿರ್ಮಾಣ ಮಾಡಿದ್ದಾರೆ. ಚಿತ್ರದ ಬಗ್ಗೆ ಪರ-ವಿರೋಧ ವ್ಯಕ್ತವಾಗುತ್ತಿದೆ.

ಭಾರತೀಯ ವಾಯುಪಡೆಯ ಅಧಿಕಾರಿ ರವಿ ಖನ್ನಾ ಅವರ ದೃಶ್ಯಗಳನ್ನು ತೋರಿಸದಂತೆ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರತಂಡಕ್ಕೆ ಜಮ್ಮು ಕೋರ್ಟ್​ ಇತ್ತೀಚೆಗೆ ಸೂಚನೆ ನೀಡಿತ್ತು. ರವಿ ಖನ್ನಾ ಅವರ ಪತ್ನಿ ನಿರ್ಮಲ್​ ಖನ್ನಾ ಅವರು ಸಲ್ಲಿಸಿದ್ದ ಮನವಿಯನ್ನು ಆಲಿಸಿ ಈ ಆದೇಶ ನೀಡಲಾಗಿತ್ತು. ಇದಾದ ಬೆನ್ನಲ್ಲೇ ಜುಮ್ಮು ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾದ ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.

ಮಲ್ಟಿಪ್ಲೆಕ್ಸ್​ನ ಸಿಬ್ಬಂದಿಗಳು ಪ್ರದರ್ಶನವನ್ನು ನಿಲ್ಲಿಸುತ್ತಿದ್ದಂತೆಯೇ ಗದ್ದಲ ಉಂಟಾಯಿತು. ಸಿಬ್ಬಂದಿ ವಿರುದ್ಧ ಪ್ರೇಕ್ಷಕರು ಸಿಡಿದೆದ್ದರು. ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದರು. ತಮ್ಮ ಮೇಲೆ ಹಲ್ಲೆ ಆಗಿದೆ ಎಂದು ಕೆಲವು ಪ್ರೇಕ್ಷಕರು ಆರೋಪ ಮಾಡುತ್ತಿರುವುದು ಕೂಡ ಈ ವೈರಲ್​ ವಿಡಿಯೋದಲ್ಲಿ ಸೆರೆ ಆಗಿದೆ. ‘ಪ್ರದರ್ಶನ ನಿಲ್ಲಿಸಿರುವುದರ ಹಿಂದೆ ಏನೋ ಉದ್ದೇಶ ಇದೆ. ಸತ್ಯವನ್ನು ಮುಚ್ಚಿಡುವ ಪ್ರಯತ್ನ ನಡೆದಿದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ಪ್ರಕಾಶ್​ ಬೆಳವಾಡಿ, ಮಿಥುನ್​ ಚಕ್ರವರ್ತಿ ಮುಂತಾದವರು ನಟಿಸಿದ್ದಾರೆ. ಮೊದಲ ದಿನ ಈ ಚಿತ್ರಕ್ಕೆ ಮೂರೂವರೆ ಕೋಟಿ ರೂಪಾಯಿ ಗಳಿಕೆ ಆಗಿದೆ. ನಿಧಾನವಾಗಿ ಕಲೆಕ್ಷನ್​ ಹೆಚ್ಚುತ್ತಿದೆ. ‘ರಾಧೆ ಶ್ಯಾಮ್​’ ರೀತಿಯ ಕಮರ್ಷಿಯಲ್​ ಸಿನಿಮಾಗಳ ಅಬ್ಬರದ ನಡುವೆಯೂ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪೈಪೋಟಿ ನೀಡುತ್ತಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕೆ ಮೆಚ್ಚುಗೆ: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡದ ಜೊತೆ ಶನಿವಾರ (ಮಾ.12) ಸಂಜೆ ಮೋದಿ ಭೇಟಿ ಆಗಿದೆ. ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತುಂಬ ಖುಷಿ ಆಯಿತು. ನಮ್ಮ ಸಿನಿಮಾ ಬಗ್ಗೆ ಅವರು ಹೇಳಿದ ಪ್ರಶಂಸೆಯ ಮಾತುಗಳಿಂದಾಗಿ ಈ ಭೇಟಿ ತುಂಬ ವಿಶೇಷವಾಯಿತು’ ಎಂದು ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಭಾರತದ ಅತ್ಯಂತ ಸವಾಲಿನ ಸತ್ಯವನ್ನು ಇಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲು ಧೈರ್ಯ ತೋರಿಸಿದ್ದಾಗಿ ನಿಮಗೆ ಧನ್ಯವಾದಗಳು’ ಎಂದು ನಿರ್ಮಾಪಕರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ:

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿರುವ ನಿವೃತ್ತ ಪೊಲೀಸ್ ಅಧಿಕಾರಿಗಳು

‘ರಾಧೆ ಶ್ಯಾಮ್’ಗೆ ಪ್ರಬಲ ಪೈಪೋಟಿ ನೀಡುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’; ಮೊದಲ ದಿನದ ಕಲೆಕ್ಷನ್ ಎಷ್ಟು? ಇಲ್ಲಿದೆ ಲೆಕ್ಕಾಚಾರ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್