ದೇಶಾದ್ಯಂತ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ (The Kashmir Files Movie) ಬಗ್ಗೆ ಚರ್ಚೆ ಶುರುವಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಅವರು ಮೇಲೆ ನಡೆದ ದೌರ್ಜನ್ಯಗಳ ಕುರಿತು ಸಿನಿಮಾದಲ್ಲಿ ವಿವರಿಸಲಾಗಿದೆ. ಅನೇಕ ವಿವಾದಗಳ ಮೂಲಕವೂ ಈ ಚಿತ್ರ ಸುದ್ದಿ ಆಗುತ್ತಿದೆ. ಆರಂಭದಲ್ಲಿ ಈ ಸಿನಿಮಾದ ಪ್ರಚಾರಕ್ಕೆ ‘ದಿ ಕಪಿಲ್ ಶರ್ಮಾ ಶೋ’ನಲ್ಲಿ ಅವಕಾಶ ಸಿಗಲಿಲ್ಲ ಎಂಬ ಬಗ್ಗೆ ಕಾಂಟ್ರವರ್ಸಿ ಆಗಿತ್ತು. ನಂತರ ಕೆಲವರು ಈ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದರು. ಈಗ ಇನ್ನೊಂದು ವಿವಾದ ತಲೆ ಎತ್ತಿದೆ. ಜಮ್ಮುವಿನಲ್ಲಿ (Jammu) ಪ್ರದರ್ಶನ ಆಗುತ್ತಿದ್ದ ಈ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಅಲ್ಲದೇ ಚಿತ್ರ ನೋಡಲು ಬಂದಿದ್ದ ಪ್ರೇಕ್ಷಕರ ಮೇಲೆ ಹಲ್ಲೆ ಆಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ. ಈ ಕುರಿತ ಒಂದು ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಅಷ್ಟಕ್ಕೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಸ್ಕ್ರೀನಿಂಗ್ ನಿಲ್ಲಿಸಿದ್ದು ಯಾಕೆ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಪ್ರಶ್ನೆ ಮಾಡಿದ್ದಾರೆ.
ಕೊರೊನಾ ಮೂರನೇ ಅಲೆ ಮುಗಿದ ಬಳಿಕ ಕೆಲವೇ ಕೆಲವು ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿವೆ. ‘ಗಂಗೂಬಾಯಿ ಕಾಠಿಯಾವಾಡಿ’, ‘ರಾಧೆ ಶ್ಯಾಮ್’ ಮುಂತಾದ ಚಿತ್ರಗಳಿಂದ ಸಿನಿಮಾರಂಗದ ವಹಿವಾಟು ಚೇತರಿಸಿಕೊಂಡಿದೆ. ಈ ಸಂದರ್ಭದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕೂಡ ಜನರನ್ನು ಸೆಳೆದುಕೊಳ್ಳುತ್ತಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ಈ ಚಿತ್ರವನ್ನು ಅಭಿಷೇಕ್ ಅಗರ್ವಾಲ್ ನಿರ್ಮಾಣ ಮಾಡಿದ್ದಾರೆ. ಚಿತ್ರದ ಬಗ್ಗೆ ಪರ-ವಿರೋಧ ವ್ಯಕ್ತವಾಗುತ್ತಿದೆ.
ಭಾರತೀಯ ವಾಯುಪಡೆಯ ಅಧಿಕಾರಿ ರವಿ ಖನ್ನಾ ಅವರ ದೃಶ್ಯಗಳನ್ನು ತೋರಿಸದಂತೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರತಂಡಕ್ಕೆ ಜಮ್ಮು ಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತು. ರವಿ ಖನ್ನಾ ಅವರ ಪತ್ನಿ ನಿರ್ಮಲ್ ಖನ್ನಾ ಅವರು ಸಲ್ಲಿಸಿದ್ದ ಮನವಿಯನ್ನು ಆಲಿಸಿ ಈ ಆದೇಶ ನೀಡಲಾಗಿತ್ತು. ಇದಾದ ಬೆನ್ನಲ್ಲೇ ಜುಮ್ಮು ಮಲ್ಟಿಪ್ಲೆಕ್ಸ್ನಲ್ಲಿ ಸಿನಿಮಾದ ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.
ಮಲ್ಟಿಪ್ಲೆಕ್ಸ್ನ ಸಿಬ್ಬಂದಿಗಳು ಪ್ರದರ್ಶನವನ್ನು ನಿಲ್ಲಿಸುತ್ತಿದ್ದಂತೆಯೇ ಗದ್ದಲ ಉಂಟಾಯಿತು. ಸಿಬ್ಬಂದಿ ವಿರುದ್ಧ ಪ್ರೇಕ್ಷಕರು ಸಿಡಿದೆದ್ದರು. ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದರು. ತಮ್ಮ ಮೇಲೆ ಹಲ್ಲೆ ಆಗಿದೆ ಎಂದು ಕೆಲವು ಪ್ರೇಕ್ಷಕರು ಆರೋಪ ಮಾಡುತ್ತಿರುವುದು ಕೂಡ ಈ ವೈರಲ್ ವಿಡಿಯೋದಲ್ಲಿ ಸೆರೆ ಆಗಿದೆ. ‘ಪ್ರದರ್ಶನ ನಿಲ್ಲಿಸಿರುವುದರ ಹಿಂದೆ ಏನೋ ಉದ್ದೇಶ ಇದೆ. ಸತ್ಯವನ್ನು ಮುಚ್ಚಿಡುವ ಪ್ರಯತ್ನ ನಡೆದಿದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್ ಮಾಡಿದ್ದಾರೆ.
We are here in @wavecinemas Jammu, Just now the authorities here stopped the screening of THE KASHMIR FILES People are being thrashed and assaulted!
A big propaganda is running to Muzzle the voice of truth @vivekagnihotri @AnupamPKher
.@KhajuriaManu @DrVikasPadhaDo raise pic.twitter.com/9aW1aRL2RF
— Amit Sharma ?? (@amitsharmaJK_) March 11, 2022
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಪ್ರಕಾಶ್ ಬೆಳವಾಡಿ, ಮಿಥುನ್ ಚಕ್ರವರ್ತಿ ಮುಂತಾದವರು ನಟಿಸಿದ್ದಾರೆ. ಮೊದಲ ದಿನ ಈ ಚಿತ್ರಕ್ಕೆ ಮೂರೂವರೆ ಕೋಟಿ ರೂಪಾಯಿ ಗಳಿಕೆ ಆಗಿದೆ. ನಿಧಾನವಾಗಿ ಕಲೆಕ್ಷನ್ ಹೆಚ್ಚುತ್ತಿದೆ. ‘ರಾಧೆ ಶ್ಯಾಮ್’ ರೀತಿಯ ಕಮರ್ಷಿಯಲ್ ಸಿನಿಮಾಗಳ ಅಬ್ಬರದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪೈಪೋಟಿ ನೀಡುತ್ತಿದೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಮೆಚ್ಚುಗೆ:
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತಂಡದ ಜೊತೆ ಶನಿವಾರ (ಮಾ.12) ಸಂಜೆ ಮೋದಿ ಭೇಟಿ ಆಗಿದೆ. ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತುಂಬ ಖುಷಿ ಆಯಿತು. ನಮ್ಮ ಸಿನಿಮಾ ಬಗ್ಗೆ ಅವರು ಹೇಳಿದ ಪ್ರಶಂಸೆಯ ಮಾತುಗಳಿಂದಾಗಿ ಈ ಭೇಟಿ ತುಂಬ ವಿಶೇಷವಾಯಿತು’ ಎಂದು ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಭಾರತದ ಅತ್ಯಂತ ಸವಾಲಿನ ಸತ್ಯವನ್ನು ಇಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲು ಧೈರ್ಯ ತೋರಿಸಿದ್ದಾಗಿ ನಿಮಗೆ ಧನ್ಯವಾದಗಳು’ ಎಂದು ನಿರ್ಮಾಪಕರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: