Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು

The Kashmir Files | IFFI Goa: ‘ಈ ಚಿತ್ರ ನನ್ನ ಹೃದಯಕ್ಕೆ ತುಂಬ ಹತ್ತಿರವಾಗಿದೆ. ಇದರಲ್ಲಿ ನಾವು ತೋರಿಸಿದ ಸತ್ಯವನ್ನು 32 ವರ್ಷಗಳ ಕಾಲ ಮುಚ್ಚಿಡಲಾಗಿತ್ತು’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು
ಅನುಪಮ್ ಖೇರ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 23, 2022 | 5:51 PM

ನಟ ಅನುಪಮ್ ಖೇರ್ ಅವರ ಪಾಲಿಗೆ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಹೆಚ್ಚು ವಿಶೇಷವಾಗಿದೆ. 2022ರ ಮಾರ್ಚ್​ 11ರಂದು ಬಿಡುಗಡೆ ಆದ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 250 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿತು. ಹಲವು ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿತು. ಈಗ ಗೋವಾದಲ್ಲಿ ನಡೆಯುತ್ತಿರುವ ‘ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ’ದಲ್ಲೂ (IFFI Goa) ಈ ಚಿತ್ರಕ್ಕೆ ಗೌರವ ಸಿಕ್ಕಿದೆ. ಚಿತ್ರದ ಪ್ರದರ್ಶನದ ವೇಳೆ ನಟ ಅನುಪಮ್​ ಖೇರ್​, ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಮುಂತಾದವರು ಹಾಜರಿದ್ದರು. ಎಲ್ಲರ ಎದುರು ಅನುಪಮ್ ಖೇರ್​ (Anupam Kher) ಅವರು ತಮ್ಮ ಮನದ ಮಾತುಗಳನ್ನು ಹಂಚಿಕೊಂಡರು. ಆ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲೂ ಅವರು ಶೇರ್​ ಮಾಡಿಕೊಂಡಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಪಲ್ಲವಿ ಜೋಶಿ, ಅನುಪಮ್​ ಖೇರ್​, ದರ್ಶನ್​ ಕುಮಾರ್​, ಮಿಥುನ್​ ಚಕ್ರವರ್ತಿ ಮುಂತಾದವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಸಿನಿಮಾದ ಕುರಿತು ತಮ್ಮ ಮನದ ಮಾತುಗಳನ್ನು ಗೋವಾ ಸಿನಿಮೋತ್ಸವದಲ್ಲಿ ಅನುಪಮ್​ ಖೇರ್​ ಅವರು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ್ದು ‘ಬಾಹುಬಲಿ’ಗಿಂತಲೂ ದೊಡ್ಡ ಗೆಲುವು: ಇದು ಆಮಿರ್ ಖಾನ್ ಫಾರ್ಮುಲಾ

‘ಈ ಚಿತ್ರ ನನ್ನ ಹೃದಯಕ್ಕೆ ತುಂಬ ಹತ್ತಿರವಾಗಿದೆ. ಈ ಚಿತ್ರದಲ್ಲಿ ನಾವು ತೋರಿಸಿದ ಸತ್ಯವನ್ನು 32 ವರ್ಷಗಳ ಕಾಲ ಮುಚ್ಚಿಡಲಾಗಿತ್ತು. ಕಾಶ್ಮೀರಿ ಪಂಡಿತರ ಹಾಗೂ ಹಿಂದುಗಳ ಹತ್ಯಾಕಾಂಡದ ಕಥೆ ಇದು. ಎಲ್ಲರಿಗೂ ಇದು ಗೊತ್ತಿತ್ತು. ಆದರೆ ಸಿನಿಮಾ ಮಾಡಬೇಕು ಎಂದುಕೊಂಡ ಏಕೈಕ ವ್ಯಕ್ತಿ ವಿವೇಕ್​ ಅಗ್ನಿಹೋತ್ರಿ’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

ವ್ಯಾಕ್ಸಿನ್​ ಕುರಿತು ವಿವೇಕ್​ ಅಗ್ನಿಹೋತ್ರಿ ಸಿನಿಮಾ:

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಯಾವ ಸಿನಿಮಾ ಮಾಡುತ್ತಾರೆ ಎಂಬ ಕೌತುಕಕ್ಕೆ ಇತ್ತೀಚೆಗೆ ತೆರೆ ಬಿದ್ದಿದೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ. ಈ ಚಿತ್ರದ ಟೈಟಲ್ ಅನೌನ್ಸ್​ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವ್ಯಾಕ್ಸಿನ್ ಬಾಟಲಿ ಮೇಲೆ ಚಿತ್ರದ ಶೀರ್ಷಿಕೆ ಬರೆಯಲಾಗಿದೆ.

2023ರ ಆಗಸ್ಟ್ 15ರಂದು ‘ದಿ ವ್ಯಾಕ್ಸಿನ್​ ವಾರ್​’ ರಿಲೀಸ್ ಆಗಲಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ಮರಾಠಿ ಸೇರಿದಂತೆ 11 ಭಾಷೆಗಳಲ್ಲಿ ತೆರೆಗೆ ಬರಲಿದೆ ಎಂಬುದು ವಿಶೇಷ. ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್