AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್

ಅಂದುಕೊಂಡ ಮಟ್ಟದಲ್ಲಿ ಓಪನಿಂಗ್ ಪಡೆಯಲು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಸಾಧ್ಯವಾಗಿಲ್ಲ. ಮೊದಲ ದಿನ ಕೇರಳದ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ಕ್ಯಾನ್ಸಲ್ ಮಾಡಲಾಗಿದೆ. ವಿವಾದದ ನಡುವೆ ಮುಂದಿನ ದಿನಗಳಲ್ಲಿ ಈ ಸಿನಿಮಾಗೆ ಎಷ್ಟು ಕಲೆಕ್ಷನ್ ಆಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್
The Kerala Story 2
ಮದನ್​ ಕುಮಾರ್​
|

Updated on: Mar 01, 2026 | 7:41 AM

Share

ಬಿಡುಗಡೆಗೂ ಮುನ್ನ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಖತ್ ವಿವಾದ ಸೃಷ್ಟಿ ಮಾಡಿತ್ತು. ಈ ಸಿನಿಮಾದ ವಿವಾದವು ಹೈಕೋರ್ಟ್ ಮೆಟ್ಟಿಲೇರಿತ್ತು. ಆ ಕಾರಣದಿಂದ ಚಿತ್ರದ ಬಿಡುಗಡೆ ಸ್ವಲ್ಪ ತಡವಾಯಿತು. ಶುಕ್ರವಾರ (ಫೆಬ್ರವರಿ 27) ಸಂಜೆ ಕೆಲವೇ ಕೆಲವು ಕಡೆಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಾಯಿತು. ಶನಿವಾರ (ಫೆ.28) ಎಂದಿನಂತೆ ಎಲ್ಲ ಕಡೆಗಳಲ್ಲಿ ರಿಲೀಸ್ ಆಯಿತು. ಈ ಎರಡೂ ದಿನಗಳು ಸೇರಿ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಒಟ್ಟು ಕಲೆಕ್ಷನ್ (Box Office Collection) ಅಂದಾಜು 5.40 ಕೋಟಿ ರೂಪಾಯಿ ಆಗಿದೆ.

ಚಿತ್ರದ ಬಿಡುಗಡೆಗೆ ಕೋರ್ಟ್ ಅನುಮತಿ ತಡವಾಗಿ ಸಿಕ್ಕಿದ್ದರಿಂದ ಫೆ.27ರಂದು ಬೆರಳೆಣಿಕೆಯಷ್ಟು ಚಿತ್ರಮಂದಿರಗಳಲ್ಲಿ ಮಾತ್ರ ರಿಲೀಸ್ ಆಯಿತು. Sacnilk ವರದಿ ಪ್ರಕಾರ ಅಂದು ಈ ಸಿನಿಮಾ ಗಳಿಸಿದ್ದು 75 ಲಕ್ಷ ರೂಪಾಯಿ ಮಾತ್ರ. ಎರಡನೇ ದಿನವಾದ ಶನಿವಾರ (ಫೆ.28) 4.65 ಕೋಟಿ ರೂಪಾಯಿ ಗಳಿಸಿದೆ. ಭಾನುವಾರ (ಮಾರ್ಚ್ 1) ಎಷ್ಟು ಕಲೆಕ್ಷನ್ ಆಗಲಿದೆ ಎಂಬ ಕೌತುಕ ಇದೆ.

2023ರಲ್ಲಿ ರಿಲೀಸ್ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಮೊದಲ ದಿನವೇ 8.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ಚಿತ್ರದ ಒಟ್ಟು ಕಲೆಕ್ಷನ್ 242 ಕೋಟಿ ರೂಪಾಯಿ ಆಗಿತ್ತು. ಆ ಯಶಸ್ಸಿನ ಬಳಿಕ ‘ದಿ ಕೇರಳ ಸ್ಟೋರಿ 2’ ಸಿನಿಮಾ ಮಾಡಲಾಯಿತು. ಆದರೆ ಸೀಕ್ವೆಲ್​​ಗೆ ನಿರೀಕ್ಷಿತ ಪ್ರಮಾಣದಲ್ಲಿ ಓಪನಿಂಗ್ ಸಿಕ್ಕಿಲ್ಲ. ವಿವಾದಿಂದ ಸಾಕಷ್ಟು ಸುದ್ದಿ ಆಗಿದ್ದರೂ ಕೂಡ ಜನರು ಈ ಚಿತ್ರಕ್ಕೆ ಆಸಕ್ತಿ ತೋರಿಸಿಲ್ಲ.

‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಕೇರಳವನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂಬ ಆರೋಪ ಇದೆ. ಹಾಗಾಗಿ ಈ ಚಿತ್ರವನ್ನು ವಿರೋಧಿಸಿ ಕೇರಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದ್ದರಿಂದ ಅನೇಕ ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ಕ್ಯಾನ್ಸಲ್ ಮಾಡಲಾಗಿದೆ. ಇದರಿಂದಾಗಿ ಕೇರಳದಲ್ಲಿ ಈ ಚಿತ್ರಕ್ಕೆ ಹೀನಾಯ ಕಲೆಕ್ಷನ್ ಆಗಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಉಲ್ಕಾ ಗುಪ್ತಾ, ಐಶ್ವರ್ಯಾ ಊಜಾ, ಅದಿತಿ ಭಾಟಿಯಾ ಅವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ