ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್

ವೈರಲ್ ಆಗಿರುವ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯಗಳಿವೆ. ಈ ಸಿನಿಮಾ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸುವ ಎಲ್ಲ ಲಕ್ಷಣ ಈಗಾಗಲೇ ಕಾಣಿಸುತ್ತಿದೆ. ಹಲವು ಸತ್ಯ ಘಟನೆಗಳಿಂದ ಪ್ರೇರಿತವಾದ ಸಿನಿಮಾ ಎಂದು ಟ್ರೇಲರ್​​ನ ಆರಂಭದಲ್ಲೇ ಹೇಳಲಾಗಿದೆ.

ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್
The Kerala Story 2

Updated on: Feb 17, 2026 | 5:33 PM

2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಬಲವಂತದಿಂದ ಭಯೋತ್ಪಾದಕ ಕೃತ್ಯಕ್ಕೆ ಬಳಸಿಕೊಳ್ಳುವ ಕಥೆಯನ್ನು ತೋರಿಸಲಾಗಿತ್ತು. ಈಗ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಕೂಡ ಲವ್ ಜಿಹಾದ್ ಬಗ್ಗೆ ತೋರಿಸಲಾಗುತ್ತದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ. ಟ್ರೇಲರ್ (The Kerala Story 2 Trailer) ನೋಡಿದ ಸಿನಿಪ್ರಿಯರಿಗೆ ಶಾಕ್ ಆಗಿದೆ.

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅದಿತಿ ಭಾಟಿಯಾ, ಐಶ್ವರ್ಯಾ ಊಜಾ, ಉಲ್ಕಾ ಗುಪ್ತಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಲವ್ ಜಿಹಾದ್ ಜಾಲಕ್ಕೆ ಬಲಿಯಾಗುವ ಹಿಂದೂ ಯುವತಿಯರಾಗಿ ಈ ಮೂವರು ಕಾಣಿಸಿಕೊಳ್ಳುತ್ತಿದ್ದಾರೆ.

ಮುಂದಿನ 25 ವರ್ಷಗಳಲ್ಲಿ ಭಾರತವು ಇಸ್ಲಾಮಿಕ್ ಸ್ಟೇಟ್ ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ಸಂದೇಶದೊಂದಿಗೆ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಆರಂಭ ಆಗುತ್ತದೆ. ಕೇರಳ, ಮಧ್ಯಪ್ರದೇಶ, ರಾಜಸ್ತಾನದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ತೋರಿಸುತ್ತದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟ್ರೇಲರ್ ಮಿಲಿಯನ್​ಗಟ್ಟಲೆ ವೀಕ್ಷಣೆ ಪಡೆದಿದೆ.

‘ದಿ ಕೇರಳ ಸ್ಟೋರಿ 2’ ಟ್ರೇಲರ್:

The Kerala Story 2 Goes Beyond| Official Trailer| Vipul Amrutlal Shah| Kamakhya Singh| Aashin A Shah

ಹಿಂದೂ ಯುವತಿಯರನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಯಾವ ರೀತಿ ಯಾಮಾರಿಸಲಾಗುತ್ತದೆ? ಬಳಿಕ ಅವರನ್ನು ಹೇಗೆ ಮತಾಂತರ ಮಾಡಲಾಗುತ್ತದೆ? ಆ ನಂತರ ಅವರ ಪರಿಸ್ಥಿತಿ ಎಷ್ಟು ಹೀನಾಯವಾಗುತ್ತದೆ ಎಂಬುದರ ಝಲಕ್ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್​​ನಲ್ಲಿ ಕಾಣಿಸಿದೆ. ಈ ಎಲ್ಲ ದೃಶ್ಯಗಳನ್ನು ನೋಡಿದ ಪ್ರೇಕ್ಷಕರು ಹೌಹಾರಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಲೈಂಗಿಕ ಹಗರಣದ ಕಥೆ ಇರುತ್ತಾ? ಸ್ಪಷ್ಟನೆ ನೀಡಿದ ನಿರ್ದೇಶಕ

‘ದಿ ಕೇರಳ ಸ್ಟೋರಿ’ ಸಿನಿಮಾ 2023ರಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಈಗ ಅದರ ಸೀಕ್ವೆಲ್ ಆಗಿರುವ ‘ದಿ ಕೇರಳ ಸ್ಟೋರಿ 2’ ಸಿನಿಮಾ ಕೂಡ ವಿವಾದ ಎಬ್ಬಿಸುವ ಎಲ್ಲ ಲಕ್ಷಣಗಳು ಕಾಣಿಸಿವೆ. ‘ಹಲವು ಸತ್ಯ ಘಟನೆಗಳಿಂದ ಸ್ಫೂರ್ತಿ ಪಡೆದು ನಿರ್ಮಾಣವಾದ ಸಿನಿಮಾ’ ಎಂಬುದನ್ನು ಟ್ರೇಲರ್​ನ ಆರಂಭದಲ್ಲೇ ತೋರಿಸಲಾಗಿದೆ. ಫೆಬ್ರವರಿ 27ರಂದು ಈ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us