AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಖ್ಯಾತಿಯ ನಟಿ ಅದಾ ಶರ್ಮಾ ಮುಂದಿನ ಸಿನಿಮಾ ‘ಸಿ.ಡಿ’ ಪೋಸ್ಟರ್​ ವೈರಲ್​

ಅದಾ ಶರ್ಮ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಆ ಚಿತ್ರದಲ್ಲಿ ಅವರಿಗೆ ಪೊಲೀಸ್​ ಅಧಿಕಾರಿಯ ಪಾತ್ರ ಇದೆ. ಆ ಸಿನಿಮಾ ರಿಲೀಸ್​ ಆಗುವುದಕ್ಕಿಂತ ಮುನ್ನವೇ ‘ಸಿ.ಡಿ’ ಚಿತ್ರದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇದರ ಪೋಸ್ಟರ್​ ಗಮನ ಸೆಳೆಯುತ್ತಿದೆ.

‘ದಿ ಕೇರಳ ಸ್ಟೋರಿ’ ಖ್ಯಾತಿಯ ನಟಿ ಅದಾ ಶರ್ಮಾ ಮುಂದಿನ ಸಿನಿಮಾ ‘ಸಿ.ಡಿ’ ಪೋಸ್ಟರ್​ ವೈರಲ್​
ಅದಾ ಶರ್ಮಾ
ಮದನ್​ ಕುಮಾರ್​
|

Updated on: Aug 18, 2023 | 5:42 PM

Share

ನಟಿ ಅದಾ ಶರ್ಮಾ (Adah Sharma) ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿದ್ದು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಿಂದ. ಆ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿತು. ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರ ಮತ್ತೊಂದು ಹೊಸ ಸಿನಿಮಾ ಅನೌನ್ಸ್​ ಆಗಿದೆ. ಈ ಚಿತ್ರಕ್ಕೆ ‘ಸಿ.ಡಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಪೋಸ್ಟರ್​ ನೋಡಿದರೆ ತಿಳಿಯುತ್ತದೆ ಇದೊಂದು ಹಾರರ್​ ಸಿನಿಮಾ. ಭಯಾನಕವಾಗಿ ಕಾಣುವಂತೆ ಈ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ಈ ಮೂಲಕ ಕೌತುಕ ಮೂಡಿಸಲಾಗಿದೆ. ‘ದಿ ಕೇರಳ ಸ್ಟೋರಿ’ ರೀತಿ ‘ಸಿ.ಡಿ’ ಸಿನಿಮಾ (CD Movie) ಕೂಡ ಸಕ್ಸಸ್​ ಆಗಲಿ ಎಂದು ಅಭಿಮಾನಿಗಳು ಅದಾ ಶರ್ಮಾಗೆ ಶುಭಾಶಯ ತಿಳಿಸುತ್ತಿದ್ದಾರೆ.

ಏನಿದು ‘ಸಿ.ಡಿ’ ಅಂದ್ರೆ? ಪೋಸ್ಟರ್​ ನೋಡಿದ ಎಲ್ಲರಿಗೂ ಇಂಥದ್ದೊಂದು ಪ್ರಶ್ನೆ ಮೂಡಿದೆ. ‘ಕ್ರಿಮಿನಲ್​ ಅಥವಾ ಡೆವಿಲ್​’ ಎಂಬ ಟ್ಯಾಗ್​ಲೈನ್​ ಇದೆ. ಹಾಗಾಗಿ ಸಿ ಎಂದರೆ ಕ್ರಿಮಿನಲ್​, ಡಿ ಎಂದರೆ ಡೆವಿಲ್​ ಎಂದು ಜನರು ಅರ್ಥ ಮಾಡಿಕೊಂಡಿದ್ದಾರೆ. ಇದು ಮಹಿಳಾ ಪ್ರಧಾನ ಕಥೆ ಹೊಂದಿರುವ ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕೆ ‘ಎಸ್​ಎಸ್​ಸಿಎಂ ಪ್ರೊಡಕ್ಷನ್ಸ್​’ ಸಂಸ್ಥೆಯು ಬಂಡವಾಳ ಹೂಡುತ್ತಿದೆ. ಕೃಷ್ಣ ಅಣ್ಣಂ ಅವರು ನಿರ್ದೇಶನ ಮಾಡಲಿದ್ದಾರೆ. ಆರ್​ಆರ್​ ಧ್ರುವನ್​ ಅವರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

‘ಸಿ.ಡಿ’ ಸಿನಿಮಾ ಪೋಸ್ಟರ್​:

ಅದಾ ಶರ್ಮ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಪೊಲೀಸ್​ ಅಧಿಕಾರಿಯ ಪಾತ್ರ ಇದೆ. ಯುವಕರ ಪ್ರಾಣಕ್ಕೆ ಅಪಾಯ ತಂದೊಡ್ಡಿದ್ದ ಬ್ಲ್ಯೂ ವೇಲ್​ ಗೇಮ್​ ಕುರಿತ ಕಥಾಹಂದರವನ್ನು ಇಟ್ಟುಕೊಂಡು ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಚಿತ್ರ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಅದಾ ಶರ್ಮಾ ಜೊತೆ ಶ್ರೇಯಸ್​ ತಲ್ಪಡೆ ಕೂಡ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

Adah Sharma: ‘ಅಂಥವರ ಜತೆ ಕೆಲಸ ಮಾಡೋಕೆ ನಂಗೆ ಇಷ್ಟ ಇಲ್ಲ’: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

2008ರಿಂದಲೂ ಅದಾ ಶರ್ಮಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ‘ರಣವಿಕ್ರಮ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ಗೆ ಜೋಡಿಯಾಗುವ ಮೂಲಕ ಅವರು ಕನ್ನಡದ ಪ್ರೇಕ್ಷಕರಿಗೂ ಪರಿಚಿತರಾದರು. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ತೊಡಗಿಕೊಂಡಿದ್ದರೂ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿರಲಿಲ್ಲ. ಆದರೆ ಈ ವರ್ಷ ಬಿಡುಗಡೆ ಆದ ‘ದಿ ಕೇರಳ ಸ್ಟೋರಿ’ ಸಿನಿಮಾದಿಂದ ಅವರ ಅದೃಷ್ಟವೇ ಬದಲಾಯಿತು. ಅವರ ಅಭಿಮಾನಿ ಬಳಗ ಹಿರಿದಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!