AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?

The Game of Girgit: ಈ ಹಿಂದೆ ‘ಕಮಾಂಡೋ’ ಸಿನಿಮಾದಲ್ಲಿ ಕೂಡ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಿದ್ದರು. ಈಗ ಮತ್ತೊಮ್ಮೆ ಖಾಕಿ ಧರಿಸುತ್ತಿದ್ದಾರೆ.

Adah Sharma: ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?
ಅದಾ ಶರ್ಮಾ
TV9 Web
| Edited By: |

Updated on:May 11, 2023 | 4:13 PM

Share

ನಟಿ ಅದಾ ಶರ್ಮಾ (Adah Sharma) ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ವರ್ಷ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡಿದೆ. ಅದಾ ಶರ್ಮಾ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ. ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಿಂದ ಅವರ ವೃತ್ತಿಜೀವನಕ್ಕೆ ಹೊಸ ಮೈಲೇಜ್​ ಸಿಕ್ಕಿದೆ. ಈಗ ಅವರಿಗೆ ಮತ್ತೊಂದು ದೊಡ್ಡ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ‘ದಿ ಗೇಮ್​ ಆಫ್​ ಗಿರ್ಗಿಟ್​’ (The Game of Girgit) ಎಂಬ ಸಿನಿಮಾಗೆ ಅದಾ ಶರ್ಮಾ ಅವರು ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್​ ಗೇಮ್​ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.

‘ಗಾಂಧಾರ್​ ಫಿಲ್ಮ್ಸ್​ ಆ್ಯಂಡ್​ ಸ್ಟುಡಿಯೋ ಪ್ರೈವೇಟ್​ ಲಿಮಿಡೆಟ್​’ ಸಂಸ್ಥೆ ಮೂಲಕ ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾ ಮೂಡಿಬರುತ್ತಿದೆ. ಇಂದು (ಮೇ 11) ಅದಾ ಶರ್ಮಾ ಅವರ ಬರ್ತ್​ಡೇ. ಆ ಪ್ರಯುಕ್ತ ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಲಿದ್ದಾರೆ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

‘ದಿ ಗೇಮ್​ ಆಫ್​ ಗಿರ್ಗಿಟ್​’ ಚಿತ್ರಕ್ಕೆ ವಿಶಾಲ್​ ಪಾಂಡ್ಯ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಈಗಲೇ ಕುತೂಹಲ ಸೃಷ್ಟಿ ಆಗಿದೆ. ಒಂದು ಕಾಲದಲ್ಲಿ ಬ್ಲೂ ವೇಲ್​ ಗೇಮ್​ ಬಗ್ಗೆ ಸಾಕಷ್ಟು ಕ್ರೇಜ್​ ಇತ್ತು. ಯುವಕರು ಈ ಗೇಮ್​ಗೆ ಅಡಿಕ್ಟ್​ ಆಗಿದ್ದರು. ಅದರಿಂದ ಸಾಕಷ್ಟು ಅನಾಹುತಗಳು ಆದ ಬಗ್ಗೆ ಮಾತುಗಳು ಕೇಳಿಬಂದಿದ್ದವು. ಅಂಥ ಖತರ್ನಾಕ್​ ಗೇಮ್​ ಕುರಿತು ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾ ಸಿದ್ಧವಾಗುತ್ತಿದೆ.

ಇದನ್ನೂ ಓದಿ: The Kerala Story: ಇನ್ನಷ್ಟು ಹೆಚ್ಚಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 68 ಕೋಟಿ ರೂ. ದಾಟಿದರೂ ತಗ್ಗಿಲ್ಲ ಈ ಚಿತ್ರದ ಅಬ್ಬರ

ಈ ಸಿನಿಮಾದಲ್ಲಿ ನಟಿಸಲು ಅದಾ ಶರ್ಮಾ ಅವರು ಖುಷಿಯಾಗಿದ್ದಾರೆ. ‘ತಮಗೆ ತಾವೇ ಹಾನಿ ಮಾಡಿಕೊಳ್ಳುವ ಅಥವಾ ಬೇರೆಯವರಿಗೆ ಹಾನಿ ಮಾಡುವ ರೀತಿಯಲ್ಲಿ ಆ ಗೇಮ್​ ಇತ್ತು. ಆ ಸಮಸ್ಯೆಗೆ ಪರಿಹಾರ ನೀಡುವ ಪಾತ್ರ ನನ್ನದು’ ಎಂದು ಅವರು ಹೇಳಿದ್ದಾರೆ. ಈ ಹಿಂದೆ ‘ಕಮಾಂಡೋ’ ಸಿನಿಮಾದಲ್ಲಿ ಕೂಡ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಿದ್ದರು. ಈಗ ಮತ್ತೊಮ್ಮೆ ಖಾಕಿ ಧರಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:10 pm, Thu, 11 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್