The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬ್ಯಾನ್​; ನಿರ್ಧಾರಕ್ಕೆ ಕಾರಣ ತಿಳಿಸಿದ ಮಮತಾ ಬ್ಯಾನರ್ಜಿ

|

Updated on: May 08, 2023 | 6:31 PM

West Bengal Bans The Kerala Story: ಪಶ್ಚಿಮ ಬಂಗಾಳದ ಯಾವುದೇ ಚಿತ್ರಮಂದಿರಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಆಗಬಾರದು ಎಂದು ಆದೇಶಿಸಲಾಗಿದೆ. ಮಮತಾ ಬ್ಯಾನರ್ಜಿ ಅವರ ಈ ಕ್ರಮದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ.

The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬ್ಯಾನ್​; ನಿರ್ಧಾರಕ್ಕೆ ಕಾರಣ ತಿಳಿಸಿದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ, ಅದಾ ಶರ್ಮಾ
Follow us on

ದೇಶಾದ್ಯಂತ ಚರ್ಚೆ ಹುಟ್ಟುಹಾಕಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾವನ್ನು ಪಶ್ಚಿಮ ಬಂಗಾಳದಲ್ಲಿ ಬ್ಯಾನ್​ ಮಾಡಲಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಈ ಆದೇಶ ಹೊರಡಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ರಾಜ್ಯದ ಯಾವುದೇ ಚಿತ್ರಮಂದಿರಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಆಗಬಾರದು ಎಂದು ಆದೇಶಿಸಲಾಗಿದೆ. ‘ಶಾಂತಿ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದ್ವೇಷ ಮತ್ತು ಹಿಂಸೆ ಹರಡುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ವರದಿ ಆಗಿದೆ. ಸುದೀಪ್ತೋ ಸೇನ್​ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ (Adah Sharma) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಕೇರಳದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾದ ಟೀಸರ್​ ರಿಲೀಸ್​ ಆದಾಗಲೇ ವಿವಾದ ಶುರುವಾಗಿತ್ತು. ಟ್ರೇಲರ್​ ಕೂಡ ವಿವಾದಕ್ಕೆ ಕಾರಣ ಆಗಿತ್ತು. ಈ ಸಿನಿಮಾದ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟ್​ಗೆ ಕೇರಳ ಸರ್ಕಾರ ಮನವಿ ಮಾಡಿತ್ತು. ಆದರೆ ಆ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಮೇ 5ರಂದು ಬಿಡುಗಡೆಯಾದ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಮಿಂಚಿದ ಅದಾ ಶರ್ಮಾ

ಇದನ್ನೂ ಓದಿ
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಬಾಕ್ಸ್​ ಆಫೀಸ್​ನಲ್ಲಿ 3 ದಿನಕ್ಕೆ 35 ಕೋಟಿ ರೂಪಾಯಿ:

ದಿನದಿಂದ ದಿನಕ್ಕೆ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಹೆಚ್ಚಾಗುತ್ತಿದೆ. ಮೊದಲ ದಿನ ಈ ಚಿತ್ರ 8.3 ಕೋಟಿ ರೂಪಾಯಿ ಗಳಿಸಿತ್ತು. ಎರಡನೇ ದಿನವಾದ ಶನಿವಾರ ಗಣನೀಯ ಏರಿಕೆ ಕಂಡಿತು. ಅಂದು ‘ದಿ ಕೇರಳ ಸ್ಟೋರಿ’ ಗಳಿಸಿದ್ದು ಬರೋಬ್ಬರಿ 11.22 ಕೋಟಿ ರೂಪಾಯಿ. ಇನ್ನು ಭಾನುವಾರ ಕೂಡ ಜನರನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಈ ಚಿತ್ರ ಯಶಸ್ವಿ ಆಗಿದೆ. ಅಂದರೆ, 3ನೇ ದಿನ 16 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ, ಈ ಸಿನಿಮಾದ ಒಟ್ಟು ಕಲೆಕ್ಷನ್​ 35.25 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಮಧ್ಯ ಪ್ರದೇಶ ಸರ್ಕಾರವು ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದೆ. ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಬೇಕೆಂದು ಮಧ್ಯ ಪ್ರದೇಶದ ಕೆಲವು ಹಿಂದುಪರ ಸಂಘಟನೆಗಳು, ಬಿಜೆಪಿಯು ತಮ್ಮದೇ ಪಕ್ಷದ ಸಿಎಂ ಅವರನ್ನು ಒತ್ತಾಯಿಸಿದ್ದವು. ಹಾಗಾಗಿ ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ವಿಡಿಯೋ ಒಂದನ್ನು ಪ್ರಕಟಿಸಿದ್ದು, ದಿ ಕೇರಳ ಸ್ಟೋರಿ ಸಿನಿಮಾವನ್ನು ಹೊಗಳಿರುವುದಲ್ಲದೆ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:55 pm, Mon, 8 May 23