The Kerala Story: ಇನ್ನಷ್ಟು ಹೆಚ್ಚಲಿದೆ ‘ದಿ ಕೇರಳ ಸ್ಟೋರಿ’ ಸಿನಿಮಾ ಗಳಿಕೆ; ಕೋರ್ಟ್ ತೀರ್ಪಿನ ಬಳಿಕ ಚಿತ್ರತಂಡಕ್ಕೆ ಸಿಕ್ತು ಬಲ
‘ದಿ ಕೇರಳ ಸ್ಟೋರಿ’ ಬಿಡುಗಡೆಯಾಗಿ 14 ದಿನ ಕಳೆದಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಪ್ರದರ್ಶನ ಆರಂಭವಾದರೆ ಸಹಜವಾಗಿಯೇ ಕಲೆಕ್ಷನ್ ಹೆಚ್ಚಾಗಲಿದೆ.
ವಿವಾದಾತ್ಮಕ ಕಥಾಹಂದರ ಇದೆ ಎಂಬ ಕಾರಣದಿಂದ ಕೆಲವು ಕಡೆಗಳಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಪ್ರದರ್ಶನಕ್ಕೆ ಅಡ್ಡಿ ಉಂಟಾಗಿತ್ತು. ತಮಿಳುನಾಡಿನ ಮಲ್ಟಿಪ್ಲೆಕ್ಸ್ಗಳಲ್ಲಿ ಈ ಸಿನಿಮಾದ ಪ್ರದರ್ಶನ ಸ್ಥಗಿತಗೊಂಡಿತ್ತು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಸರ್ಕಾರವು ಈ ಚಿತ್ರಕ್ಕೆ ನಿಷೇದ ಹೇರಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಲಾಗಿತ್ತು. ಚಿತ್ರತಂಡದ ಪರವಾಗಿ ಕೋರ್ಟ್ (Supreme Court) ತೀರ್ಪು ನೀಡಿದೆ. ‘ದಿ ಕೇರಳ ಸ್ಟೋರಿ’ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಈ ಸಿನಿಮಾದ ಕಲೆಕ್ಷನ್ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ. ಈ ಸಿನಿಮಾದಲ್ಲಿ ನಟಿ ಅದಾ ಶರ್ಮಾ (Adah Sharma) ಅವರು ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಶಾಲಿನಿ ಉನ್ನಿಕೃಷ್ಣನ್ ಅಲಿಯಾಸ್ ಫಾತಿಮಾ ಎಂಬ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರಕ್ಕೆ ಸುದೀಪ್ತೋ ಸೇನ್ ಅವರ ನಿರ್ದೇಶನವಿದೆ.
‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆಯಾಗಿ 14 ದಿನ ಕಳೆದಿದೆ. ಎರಡನೇ ವಾರ ಕೂಡ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ಪ್ರತಿ ದಿನ ಬಹುಕೋಟಿ ರೂಪಾಯಿ ಆದಾಯ ಹರಿದು ಬರುತ್ತಿದೆ. ಈಗ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಕೂಡ ಪ್ರದರ್ಶನ ಆರಂಭವಾದರೆ ಸಹಜವಾಗಿಯೇ ಕಲೆಕ್ಷನ್ ಹೆಚ್ಚಾಗಲಿದೆ.
ಇದನ್ನೂ ಓದಿ: The Kerala Story: 2ನೇ ವಾರವೂ ‘ದಿ ಕೇರಳ ಸ್ಟೋರಿ’ ಯಶಸ್ವಿ ಪ್ರದರ್ಶನ; 164 ಕೋಟಿ ರೂ. ಗಳಿಸಿದ ಕಾಂಟ್ರವರ್ಸಿ ಸಿನಿಮಾ
‘ಈ ಮೊದಲು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಸಿಕ್ಕಾಗ ‘1920’ ಮತ್ತು ‘ಕಮಾಂಡೋ’ ಸಿನಿಮಾ ಬಗ್ಗೆ ಮಾತನಾಡುತ್ತಿದ್ದರು. ಆದರೆ ಈಗ ದಿ ಕೇರಳ ಸ್ಟೋರಿ ಬಗ್ಗೆ ಮಾತನಾಡುತ್ತಾರೆ. ಕಣ್ಣು ತೆರೆಸಿದ್ದಕ್ಕೆ ಧನ್ಯವಾದಗಳು ಎಂದು ತಾಯಂದಿರು ಕಣ್ಣೀರು ಹಾಕುತ್ತಾ ಹೇಳುತ್ತಾರೆ. ಹುಡುಗಿಯರಿಗೆ ಈ ಚಿತ್ರ ಇಷ್ಟ ಆಗಿದೆ. ನಾಲ್ಕು-ಐದು ಬಾರಿ ಸಿನಿಮಾ ನೋಡಿದ ಹುಡುಗರು ಬಂದು ಕೆಲವು ಡೈಲಾಗ್ ಮತ್ತು ದೃಶ್ಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈಗ ಕೇವಲ ಸಿನಿಮಾವಾಗಿ ಉಳಿದಿಲ್ಲ. ಇದೊಂದು ಆಂದೋಲನ ಆಗಿದೆ’ ಎಂದು ಅದಾ ಶರ್ಮಾ ಇತ್ತೀಚೆಗೆ ಹೇಳಿದ್ದರು.
ಇದನ್ನೂ ಓದಿ: Siddhi Idnani: ದಿ ಕೇರಳ ಸ್ಟೋರಿ ಸಿನಿಮಾದ ಗುಳಿಕೆನ್ನೆ ಬೆಡಗಿ ಸಿದ್ಧಿ ಇದ್ನಾನಿ
‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್ವಾಶ್ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್ವಾಶ್ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್ ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ಆಫರ್ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.