The Kerala Story: 156 ಕೋಟಿ ರೂಪಾಯಿಗೆ ಏರಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್; ಮುಂದಿನ ಟಾರ್ಗೆಟ್ 200 ಕೋಟಿ ರೂ.
The Kerala Story Box Office Collection: ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ. ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ.
ನೋಡನೋಡುತ್ತಿದ್ದಂತೆಯೇ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಜಯಭೇರಿ ಬಾರಿಸಿದೆ. ದೇಶದ ಅನೇಕ ಕಡೆಗಳಲ್ಲಿ ಈ ಚಿತ್ರ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ವಿವಾದಾತ್ಮಕ ಕಥಾಹಂದರ ಇರುವುದೇ ಇದಕ್ಕೆ ಕಾರಣ ಎಂದರೂ ತಪ್ಪಿಲ್ಲ. ಟೀಸರ್ ಬಿಡುಗಡೆ ಆದಾಗಲೇ ಈ ಸಿನಿಮಾ ವಿವಾದ ಎಬ್ಬಿಸಿತ್ತು. ಸಿನಿಮಾ ಬಿಡುಗಡೆ ಬಳಿಕವೂ ಕಿರಿಕ್ ಜೋರಾಯಿತು. ಏನೇ ಆದರೂ ಈ ಚಿತ್ರದ ಗಲ್ಲಾಪೆಟ್ಟಿಗೆ ಗಳಿಕೆಗೆ ತೊಂದರೆ ಆಗಿಲ್ಲ. ಈಗ ‘ದಿ ಕೇರಳ ಸ್ಟೋರಿ’ ಸಿನಿಮಾದ ಕಲೆಕ್ಷನ್ (Box Office Collection) 156 ಕೋಟಿ ರೂಪಾಯಿ ಆಗಿದೆ. ಇದರಿಂದ ಚಿತ್ರತಂಡಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್ ಅವರಿಗೆ ಈ ಚಿತ್ರದಿಂದ ಖ್ಯಾತಿ ಹೆಚ್ಚಾಗಿದೆ. ಮುಖ್ಯಭೂಮಿಕೆ ನಿಭಾಯಿಸಿರುವ ನಟಿ ಅದಾ ಶರ್ಮಾ (Adah Sharma) ಕೂಡ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ.
ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ. ಪ್ರತಿ ದಿನವೂ ಈ ಚಿತ್ರ ಉತ್ತಮವಾಗಿ ಕಲೆಕ್ಷನ್ ಮಾಡುತ್ತಿದೆ. ಸದ್ಯ 156 ಕೋಟಿ ರೂಪಾಯಿ ಮಾಡಿರುವ ಈ ಚಿತ್ರದ ಮುಂದಿರುವ ಟಾರ್ಗೆಟ್ 200 ಕೋಟಿ ರೂಪಾಯಿ! ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ.
ಇದನ್ನೂ ಓದಿ: Adah Sharma: ಬ್ಲೂ ವೇಲ್ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?
‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್ ರಿಪೋರ್ಟ್:
1ನೇ ದಿನ: 8.03 ಕೋಟಿ ರೂ.
2ನೇ ದಿನ: 11.22 ಕೋಟಿ ರೂ.
3ನೇ ದಿನ: 16.40 ಕೋಟಿ ರೂ.
4ನೇ ದಿನ: 10.07 ಕೋಟಿ ರೂ.
5ನೇ ದಿನ: 11.14 ಕೋಟಿ ರೂ.
6ನೇ ದಿನ: 12 ಕೋಟಿ ರೂ.
7ನೇ ದಿನ: 12.50 ಕೋಟಿ ರೂ.
8ನೇ ದಿನ: 12.23 ಕೋಟಿ ರೂ.
9ನೇ ದಿನ: 19.50 ಕೋಟಿ ರೂ.
10ನೇ ದಿನ: 23.75 ಕೋಟಿ ರೂ.
11ನೇ ದಿನ: 10.30 ಕೋಟಿ ರೂ.
12ನೇ ದಿನ: 9.65 ಕೋಟಿ ರೂ.
#TheKeralaStory is now the SECOND HIGHEST GROSSING #Hindi film of 2023… Overtakes #TJMM and #KBKJ to claim the second spot… [Week 2] Fri 12.35 cr, Sat 19.50 cr, Sun 23.75 cr, Mon 10.30 cr, Tue 9.65 cr. Total: ₹ 156.69 cr. #India biz. #Boxoffice pic.twitter.com/Ixwggms6QM
— taran adarsh (@taran_adarsh) May 17, 2023
‘ದಿ ಕೇರಳ ಸ್ಟೋರಿ’ ಸೀಕ್ವೆಲ್ ಮಾಡಲು ನಿರ್ದೇಶಕರಿಗೆ ಆಫರ್:
ಈ ಸಿನಿಮಾದ ಸೀಕ್ವೆಲ್ ಬಗ್ಗೆ ಸುದ್ದಿ ಕೇಳಿಬಂದಿದೆ. ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್ವಾಶ್ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್ವಾಶ್ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್ ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ಆಫರ್ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.