AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudipto Sen: ಅನಾರೋಗ್ಯಕ್ಕೆ ಒಳಗಾದ ‘ದಿ ಕೇರಳ ಸ್ಟೋರಿ’ ನಿರ್ದೇಶಕ ಸುದೀಪ್ತೋ ಸೇನ್​; ಈ ಪರಿಸ್ಥಿತಿ ಬರಲು ಕಾರಣ ಏನು?

Sudipto Sen Health Update: ನಿರ್ದೇಶಕ ಸುದೀಪ್ತೋ ಸೇನ್​ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

Sudipto Sen: ಅನಾರೋಗ್ಯಕ್ಕೆ ಒಳಗಾದ ‘ದಿ ಕೇರಳ ಸ್ಟೋರಿ’ ನಿರ್ದೇಶಕ ಸುದೀಪ್ತೋ ಸೇನ್​; ಈ ಪರಿಸ್ಥಿತಿ ಬರಲು ಕಾರಣ ಏನು?
ಸುದೀಪ್ತೋ ಸೇನ್​, ಅದಾ ಶರ್ಮಾ
ಮದನ್​ ಕುಮಾರ್​
|

Updated on: May 26, 2023 | 6:36 PM

Share

ಭಾರಿ ಚರ್ಚೆಗೆ ಒಳಗಾದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆದರೆ ಬೇಸರದ ಸಂಗತಿ ಏನೆಂದರೆ ಈ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ. ಹಲವು ವರ್ಷಗಳಿಂದ ಸುದೀಪ್ತೋ ಸೇನ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಸಿನಿಮಾ ಮತ್ತು ಸಾಕ್ಷ್ಯಚಿತ್ರಗಳಿಗೆ ನಿರ್ದೇಶನ ಮಾಡಿದ್ದರೂ ಕೂಡ ಅವರಿಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ಗೆದ್ದ ಬಳಿಕ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು. ಈ ಸಿನಿಮಾದ ಪ್ರಚಾರದಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅನೇಕ ಊರುಗಳಿಗೆ ಭೇಟಿ ನೀಡಿದ್ದರು. ವಿಶ್ರಾಂತಿ ಇಲ್ಲದೇ ಪ್ರಯಾಣ ಮಾಡಿದ್ದರಿಂದಲೇ ಸುದೀಪ್ತೋ ಸೇನ್​ ಅವರಿಗೆ ಈಗ ಆರೋಗ್ಯ ಕೈ ಕೊಟ್ಟಿದೆ. ಕೊಂಚ ಸುಧಾರಿಸಿಕೊಂಡು ಮತ್ತೆ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

ಕೆಲವೇ ದಿನಗಳ ಹಿಂದೆ ಸುದೀಪ್ತೋ ಸೇನ್​ ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿತ್ತು. ಆದರೂ ಅವರಿಗೆ ಹೆಚ್ಚೇನೂ ಪೆಟ್ಟಾಗಿರಲಿಲ್ಲ ಎಂಬುದು ಸಮಾಧಾನಕರ ಸಂಗತಿ. ಅದರ ಬೆನ್ನಲ್ಲೇ ಅವರಿಗೆ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅನೇಕ ಕಡೆಗಳಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇದರ ಕಲೆಕ್ಷನ್​ ಇಳಿಮುಖ ಆಗಿದ್ದರೂ ಕೂಡ ಇನ್ನೂ ಅನೇಕ ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಂದುವರಿಯಲಿದೆ. ಹಾಗಾಗಿ ಸುದೀಪ್ತೋ ಸೇನ್​ ಮತ್ತು ತಂಡದವರು ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಚಾರ ಮುಂದುವರಿಸುವ ಪ್ಲ್ಯಾನ್​ನಲ್ಲಿದ್ದಾರೆ. ನಿರ್ದೇಶಕರು ಅನಾರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಕಾಯಲಾಗುತ್ತಿದೆ.

ಇದನ್ನೂ ಓದಿ: Sudipto Sen: ‘ದಿ ಕೇರಳ ಸ್ಟೋರಿ​ 2’ ಮಾಡಲು ನಿರ್ದೇಶಕರಿಗೆ ಆಫರ್​; ಇದರಲ್ಲಿ ತೋರಿಸಲಿರುವ ವಿಷಯ ಏನು?

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಪಾತ್ರದ ಸುತ್ತವೇ ಇಡೀ ಸಿನಿಮಾ ಸಾಗುತ್ತದೆ. ಈ ಚಿತ್ರದಲ್ಲಿ ಅವರ ನಟನೆಗೆ ಸಖತ್ ಸ್ಕೋಪ್​ ಸಿಕ್ಕಿದೆ. ಎಲ್ಲರೂ ಅವರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಈ ಸಿನಿಮಾದಲ್ಲಿ ನಟಿಸಿದ ಬಳಿಕ ಅವರಿಗೆ ಒಂದಷ್ಟು ತೊಂದರೆ ಕೂಡ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಟ್ರೋಲ್​ ಮಾಡಲಾಯಿತು. ಅಲ್ಲದೇ, ಸೈಬರ್​ ಕಿಡಿಗೇಡಿಗಳಿಂದ ಕಿರುಕುಳ ಕೂಡ ಉಂಟಾಯಿತು.

ಇದನ್ನೂ ಓದಿ: The Kerala Story: ಕುಸಿಯಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 250 ಕೋಟಿ ರೂ. ಗಡಿ ಮುಟ್ಟುವುದು ಅನುಮಾನ

ಇನ್​ಸ್ಟಾಗ್ರಾಮ್​ನಲ್ಲಿ ಕಿಡಿಗೇಡಿಯೊಬ್ಬನು ಅದಾ ಶರ್ಮಾ ಅವರ ಫೋನ್​ ನಂಬರ್​ ಲೀಕ್​ ಮಾಡಿದ್ದಾನೆ ಎಂದು ಇತ್ತೀಚೆಗೆ ವರದಿ ಆಯಿತು. ಅಲ್ಲದೇ ಅದಾ ಶರ್ಮಾಗೆ ಸಂಬಂಧಿಸಿದ ಖಾಸಗಿ ಮಾಹಿತಿಯನ್ನು ಕೂಡ ಸೋರಿಕೆ ಮಾಡುವುದಾಗಿ ಆತ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಸದ್ಯಕ್ಕೆ ಆ ಕಿಡಿಗೇಡಿಯ ಇನ್​ಸ್ಟಾಗ್ರಾಮ್​ ಖಾತೆ ಡಿಆ್ಯಕ್ಟಿವೇಟ್​ ಆಗಿದೆ. ಫೋನ್​ ನಂಬರ್​ ಲೀಕ್​ ಆದ ಬಳಿಕ ಆ ನಂಬರ್​ ಬದಲಿಸುವುದು ಸೆಲೆಬ್ರಿಟಿಗಳಿಗೆ ಅನಿವಾರ್ಯ ಆಗುತ್ತದೆ. ಅದಾ ಶರ್ಮಾ ಕೂಡ ಹಾಗೆಯೇ ಮಾಡಿದ್ದಾರೆ. ಆದರೆ ಹೊಸ ನಂಬರ್​ ಅನ್ನು ಕೂಡ ಲೀಕ್​ ಮಾಡುವುದಾಗಿ ಕಿಡಿಗೇಡಿಯಿಂದ ಬೆದರಿಕೆ ಬಂತು. ಈತನ ವಿರುದ್ಧ ಮುಂಬೈ ಸೈಬರ್​ ಕ್ರೈಂ ವಿಭಾಗದ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!