Bastar: ‘ದಿ ಕೇರಳ ಸ್ಟೋರಿ’ ತಂಡದಿಂದ ಹೊಸ ಸಿನಿಮಾ ಅನೌನ್ಸ್​; ತೆರೆಗೆ ಬರಲಿದೆ ಮತ್ತೊಂದು ರಿಯಲ್​ ಘಟನೆ

Sudipto Sen: ‘ಬಸ್ತರ್​’ ಸಿನಿಮಾದ ಟೈಟಲ್​ ಪೋಸ್ಟರ್​ ಅನಾವರಣ ಮಾಡಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ.

Bastar: ‘ದಿ ಕೇರಳ ಸ್ಟೋರಿ’ ತಂಡದಿಂದ ಹೊಸ ಸಿನಿಮಾ ಅನೌನ್ಸ್​; ತೆರೆಗೆ ಬರಲಿದೆ ಮತ್ತೊಂದು ರಿಯಲ್​ ಘಟನೆ
ಬಸ್ತರ್​, ದಿ ಕೇರಳ ಸ್ಟೋರಿ
Follow us
ಮದನ್​ ಕುಮಾರ್​
|

Updated on: Jun 26, 2023 | 3:04 PM

ಈ ವರ್ಷ ತೆರೆಕಂಡ ಸಿನಿಮಾಗಳ ಪೈಕಿ ಅತಿ ಹೆಚ್ಚು ಚರ್ಚೆ ನಡೆದಿದ್ದು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಗ್ಗೆ. ಇನ್ನೂ ಕೆಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಸುದೀಪ್ತೋ ಸೇನ್ (Sudipto Sen) ಹಾಗೂ ಬಂಡವಾಳ ಹೂಡಿದ್ದ ವಿಪುಲ್​ ಅಮೃತ್​ಲಾಲ್​ ಶಾ ಅವರು ಮತ್ತೊಂದು ಹೊಸ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಚಿತ್ರಕ್ಕೆ ‘ಬಸ್ತರ್​’ (Bastar) ಎಂದು ಹೆಸರು ಇಡಲಾಗಿದೆ. ಟೈಟಲ್​ ಪೋಸ್ಟರ್​ ಅನಾವರಣ ಮಾಡಲಾಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಬಾರಿ ಕೂಡ ಅವರಿಬ್ಬರು ಒಂದು ರಿಯಲ್​ ಲೈಫ್​ ಘಟನೆಯನ್ನು ಇಟ್ಟುಕೊಂಡು ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಣ ಆಗಿದ್ದು ‘ಸನ್​ಶೈನ್​ ಪಿಕ್ಚರ್ಸ್​’ ಸಂಸ್ಥೆ ಮೂಲಕ. ಈಗ ‘ಬಸ್ತರ್​’ ಚಿತ್ರ ಕೂಡ ಇದೇ ಬ್ಯಾನರ್​ ಮೂಲಕ ಮೂಡಿಬರಲಿದೆ. ಈ ಸಿನಿಮಾದಲ್ಲಿ ಯಾರು ನಟಿಸಲಿದ್ದಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ ಕೆಲವು ಕಲಾವಿದರು ಕೂಡ ‘ಬಸ್ತರ್’ ಚಿತ್ರದಲ್ಲಿ ಇರುತ್ತಾರಾ ಎಂಬ ಕೌತುಕ ಮೂಡಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?

‘ಬಸ್ತರ್​’ ಪೋಸ್ಟರ್​ನಲ್ಲಿ ಏನಿದೆ?

ದಟ್ಟ ಅರಣ್ಯದಲ್ಲಿ ಕೆಂಪು ಬಾವುಟ ಇದೆ. ನೆಲಕ್ಕೆ ಉರುಳಿದ ಮರ ಹೈಲೈಟ್​ ಆಗಿದೆ. ಗನ್​ ಮತ್ತು ಹೊಗೆ ಕೂಡ ಈ ಪೋಸ್ಟರ್​ನಲ್ಲಿ ಇದೆ. ‘ದೇಶದಲ್ಲಿ ಸಂಚಲನ ಮೂಡಿಸಲಿದೆ ಅಡಗಿದ ಸತ್ಯ’ ಎಂಬ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಈಗಲೇ ಅನೌನ್ಸ್​ ಮಾಡಲಾಗಿದೆ. 2024ರ ಏಪ್ರಿಲ್​ 5ರಂದು ‘ಬಸ್ತರ್​’ ತೆರೆಕಾಣಲಿದೆ ಎಂದು ಪೋಸ್ಟರ್​ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಕೇರಳದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಘಟನೆಗಳನ್ನು ಇಟ್ಟುಕೊಂಡು ‘ದಿ ಕೇರಳ ಸ್ಟೋರಿ’ ಸಿದ್ಧಗೊಂಡಿತ್ತು. ಕೆಲವರು ಇದನ್ನು ಪ್ರೊಪೊಗಾಂಡ ಸಿನಿಮಾ ಎಂದು ತೆಗಳಿದ್ದರು. ಕಮಲ್​ ಹಾಸನ್​, ಪ್ರಕಾಶ್​ ರೈ ಮುಂತಾದ ಸೆಲೆಬ್ರಿಟಿಗಳು ಸಹ ಈ ಚಿತ್ರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಮೂಲಕ ಈ ಸಿನಿಮಾ ಸಖತ್​ ವಿವಾದ ಸೃಷ್ಟಿ ಮಾಡಿತ್ತು. ಈಗ ಅದೇ ಚಿತ್ರತಂಡದವರು ‘ಬಸ್ತರ್​’ ಸಿನಿಮಾದಲ್ಲಿ ಯಾವ ನೈಜ ಘಟನೆಯನ್ನು ಜನರ ಎದುರು ಇಡಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!