The Kerala Story: 200 ಕೋಟಿ ರೂಪಾಯಿ ಗಡಿ ಮುಟ್ಟಲು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 22 ಕೋಟಿ ರೂ. ಮಾತ್ರ ಬಾಕಿ

The Kerala Story Box Office Collection: ಸತತ 16 ದಿನಗಳ ಕಾಲ ಉತ್ತಮ ಪ್ರದರ್ಶನ ಕಂಡಿರುವ ‘ದಿ ಕೇರಳ ಸ್ಟೋರಿ’ ಚಿತ್ರ ಮೂರನೇ ವೀಕೆಂಡ್​ನಲ್ಲೂ ಭಾರಿ ಕಮಾಯಿ ಮಾಡುವ ಸಾಧ್ಯತೆ ಇದೆ. ಶೀಘ್ರದಲ್ಲೇ ಈ ಸಿನಿಮಾ ದ್ವಿಶತಕ ಬಾರಿಸಲಿದೆ.

The Kerala Story: 200 ಕೋಟಿ ರೂಪಾಯಿ ಗಡಿ ಮುಟ್ಟಲು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 22 ಕೋಟಿ ರೂ. ಮಾತ್ರ ಬಾಕಿ
‘ದಿ ಕೇರಳ ಸ್ಟೋರಿ’ ಸಿನಿಮಾದ ದೃಶ್ಯ

Updated on: May 20, 2023 | 4:35 PM

ಸುದೀಪ್ತೋ ಸೇನ್​ ನಿರ್ದೇಶನ ಮಾಡಿದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಈಗ 200 ಕೋಟಿ ರೂಪಾಯಿ ಗಡಿ ಮುಟ್ಟಲು ಸಜ್ಜಾಗಿದೆ. 2ನೇ ವಾರದಲ್ಲಿ ಈ ಸಿನಿಮಾ ಅದ್ದೂರಿಯಾಗಿ ಕಲೆಕ್ಷನ್​ (The Kerala Story Collection) ಮಾಡಿದೆ. ಪ್ರತಿ ದಿನವೂ ಬಹುಕೋಟಿ ರೂಪಾಯಿ ಗಳಿಕೆ ಆಗುತ್ತಿರುವುದರಿಂದ ಒಳ್ಳೆಯ ಮೊತ್ತವನ್ನು ಕಲೆಹಾಕುವಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರ ಯಶಸ್ವಿ ಆಗಿದೆ. ಮೇ 5ರಂದು ಈ ಸಿನಿಮಾ ತೆರೆಕಂಡಿತು. ಸತತ 16 ದಿನಗಳ ಕಾಲ ಉತ್ತಮ ಪ್ರದರ್ಶನ ಕಂಡಿರುವ ಈ ಚಿತ್ರ ಈಗ ಮೂರನೇ ವೀಕೆಂಡ್​ನಲ್ಲೂ ಭಾರಿ ಕಮಾಯಿ ಮಾಡುವ ಸಾಧ್ಯತೆ ಇದೆ. ಒಟ್ಟು 15 ದಿನಕ್ಕೆ ‘ದಿ ಕೇರಳ ಸ್ಟೋರಿ’ ಚಿತ್ರದ ಒಟ್ಟು ಕಲೆಕ್ಷನ್​ 178 ಕೋಟಿ ರೂಪಾಯಿ ಆಗಿದೆ. ಶೀಘ್ರದಲ್ಲೇ ಈ ಸಿನಿಮಾ ದ್ವಿಶತಕ ಬಾರಿಸಲಿದೆ. ಈ ಚಿತ್ರದಿಂದ ನಟಿ ಅದಾ ಶರ್ಮಾ (Adah Sharma) ಅವರು ಖ್ಯಾತಿ ಹೆಚ್ಚಿದೆ.

ಕಾಂಟ್ರವರ್ಸಿ ಸೃಷ್ಟಿಸಿದ ಸಿನಿಮಾ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುವುದು ಸಹಜ. ‘ದಿ ಕೇರಳ ಸ್ಟೋರಿ’ ವಿಚಾರದಲ್ಲೂ ಹಾಗೆಯೇ ಆಯಿತು. ಟೀಸರ್​ ರಿಲೀಸ್​ ಆದಾಗಲೇ ಈ ಚಿತ್ರಕ್ಕೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಬಿಡುಗಡೆ ಆದಾಗ ಕಿರಿಕ್​ ಜೋರಾಯಿತು. ಏನೇ ಆದರೂ ಕೂಡ ಚಿತ್ರದ ಕಲೆಕ್ಷನ್​ಗೆ ಪೆಟ್ಟು ಬೀಳಲಿಲ್ಲ. ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ.

ಇದನ್ನೂ ಓದಿ: Mamata Banerjee: ‘ಕೈ ಮುಗಿದು ಕೇಳ್ತೀನಿ, ಮಮತಾ ಬ್ಯಾನರ್ಜಿ ನಮ್ಮ ಚಿತ್ರ ನೋಡಲಿ’: ‘ದಿ ಕೇರಳ ಸ್ಟೋರಿ’ ನಿರ್ಮಾಪಕನ ಮನವಿ

ಇದನ್ನೂ ಓದಿ
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

13ನೇ ದಿನ: 8.03 ಕೋಟಿ ರೂ.

14ನೇ ದಿನ: 7 ಕೋಟಿ ರೂ.

15ನೇ ದಿನ: 6.60 ಕೋಟಿ ರೂ.

ಇದನ್ನೂ ಓದಿ: The Kerala Story: 2023ರಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಹಿಂದಿ​ ಚಿತ್ರಗಳ ಪಟ್ಟಿಯಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 2ನೇ ಸ್ಥಾನ

ಸ್ಟಾರ್​ ನಟರು ಇಲ್ಲದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಣ ಮಾಡಿದೆ. ಇದು ಟ್ರೇಡ್​ ವಿಶ್ಲೇಷಕರಿಗೂ ಅಚ್ಚರಿ ಮೂಡಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರದ ಓಟ ಮುಂದುವರಿದಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಕೂಡ ಯಶಸ್ವಿಯಾಗಿ ಪ್ರದರ್ಶನ ಕಂಡರೆ ಸಹಜವಾಗಿಯೇ ಕಲೆಕ್ಷನ್​ ಹೆಚ್ಚಾಗಲಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಲಾಗಿತ್ತು. ಆದರೆ ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್​ ತೀರ್ಪು ನೀಡಿದೆ. ಇದು ಚಿತ್ರತಂಡಕ್ಕೆ ಖುಷಿ ನೀಡಿದೆ. ಈ ಬಗ್ಗೆ ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಎನ್​ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅವರು ಈ ಸಿನಿಮಾವನ್ನು ಮಮತಾ ಬ್ಯಾನರ್ಜಿ ನೋಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.