The Kerala Story: ಇನ್ನಷ್ಟು ಹೆಚ್ಚಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 68 ಕೋಟಿ ರೂ. ದಾಟಿದರೂ ತಗ್ಗಿಲ್ಲ ಈ ಚಿತ್ರದ ಅಬ್ಬರ

The Kerala Story Box Office Collection: ಬಿಡುಗಡೆಯಾಗಿ 6 ದಿನ ಕಳೆದರೂ ‘ದಿ ಕೇರಳ ಸ್ಟೋರಿ’ ಸಿನಿಮಾದ ಹವಾ ಕಡಿಮೆ ಆಗಿಲ್ಲ. ದಿನದಿಂದ ದಿನಕ್ಕೆ ಈ ಚಿತ್ರದ ಕಲೆಕ್ಷನ್ ಹೆಚ್ಚಾಗುತ್ತಿದೆ.

The Kerala Story: ಇನ್ನಷ್ಟು ಹೆಚ್ಚಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 68 ಕೋಟಿ ರೂ. ದಾಟಿದರೂ ತಗ್ಗಿಲ್ಲ ಈ ಚಿತ್ರದ ಅಬ್ಬರ
ದಿ ಕೇರಳ ಸ್ಟೋರಿ

Updated on: May 11, 2023 | 3:56 PM

2023ರ ಯಶಸ್ವಿ ಸಿನಿಮಾಗಳ ಪಟ್ಟಿಗೆ ದಿ ಕೇರಳ ಸ್ಟೋರಿ’ (The Kerala Story) ಚಿತ್ರ ಕೂಡ ಸೇರ್ಪಡೆ ಆಗಿದೆ. ಮೇ 5ರಂದು ಈ ಚಿತ್ರ ಬಿಡುಗಡೆ ಆಯಿತು. ಅಂದಿನಿಂದ ಇಂದಿನವರೆಗೆ ಉತ್ತಮವಾಗಿ ಪ್ರದರ್ಶನ ಮುಂದುವರಿಸಿದೆ. ಇನ್ನೂ ಒಂದಷ್ಟು ದಿನಗಳ ಕಾಲ ಈ ಸಿನಿಮಾದ ಅಬ್ಬರ ಮುಂದುವರಿಯುವುದು ಗ್ಯಾರಂಟಿ ಆಗಿದೆ. ದಿನದಿಂದ ದಿನಕ್ಕೆ ‘ದಿ ಕೇರಳ ಸ್ಟೋರಿ’ ಸಿನಿಮಾದ ಕಲೆಕ್ಷನ್​ (The Kerala Story Collection) ಹೆಚ್ಚಾಗುತ್ತಲೇ ಇದೆ. ನಿರೀಕ್ಷೆಗಿಂತಲೂ ಚೆನ್ನಾಗಿ ಈ ಚಿತ್ರ ಕಮಾಯಿ ಮಾಡುತ್ತಿದೆ. ಆ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ನಟಿ ಅದಾ ಶರ್ಮಾ (Adah Sharma) ಅವರು ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಅವರ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ಸಖತ್​ ಮೈಲೇಜ್​ ಸಿಕ್ಕಿದೆ. 6 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡ ‘ದಿ ಕೇರಳ ಸ್ಟೋರಿ’ ಸಿನಿಮಾ ಈವರೆಗೆ 68.86 ಕೋಟಿ ರೂಪಾಯಿ ಕಮಾಯಿ ಮಾಡಿದೆ.

ಬಿಡುಗಡೆಯಾದ ದಿನ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 8.3 ಕೋಟಿ ರೂಪಾಯಿ ಕಲೆಕ್ಷನ್​ ಆಗಿತ್ತು. ಎರಡನೇ ದಿನ ಕಲೆಕ್ಷನ್​ ಹೆಚ್ಚಾಯಿತು. ಶನಿವಾರ (ಮೇ 6) ಈ ಸಿನಿಮಾ ಬರೋಬ್ಬರಿ 11.22 ಕೋಟಿ ರೂಪಾಯಿ ಗಳಿಸಿತು. ಮೂರನೇ ದಿನವಾದ ಭಾನುವಾರ 16.40 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಸದ್ದು ಮಾಡಿತು. ಸೋಮವಾರ (ಮೇ 8) ಬಾಕ್ಸ್​ ಆಫೀಸ್​ ಕಲೆಕ್ಷನ್​ ತಗ್ಗಬಹುದು ಎಂದುಕೊಳ್ಳಲಾಗಿತ್ತು. ಆದರೆ ಆ ರೀತಿ ಆಗಲಿಲ್ಲ.

ಇದನ್ನೂ ಓದಿ
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ನಾಲ್ಕನೇ ದಿನ ಈ ಸಿನಿಮಾ 10 ಕೋಟಿ ರೂಪಾಯಿ ಗಳಿಸಿತು. ಮಂಗಳವಾರ 11.14 ಕೋಟಿ ರೂಪಾಯಿ ಗಳಿಕೆ ಆಯಿತು. ಬುಧವಾರ ಕೂಡ ಈ ಸಿನಿಮಾದ ಅಬ್ಬರ ನಿಂತಿಲ್ಲ. ಬುಧವಾರ 12 ಕೋಟಿ ರೂಪಾಯಿ ಗಳಿಸುವ ಮೂಲಕ ಒಟ್ಟು ಕಲೆಕ್ಷನ್​ 68.86 ಕೋಟಿ ರೂಪಾಯಿ ಆಗಿದೆ. ಆ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ತನ್ನ ನಾಗಾಲೋಟ ಮುಂದುವರಿಸಿದೆ.

ಕೇರಳದಲ್ಲಿ ನಡೆದಿದೆ ಎನ್ನಲಾದ ಲವ್​ ಜಿಹಾದ್​ ಮತ್ತು ಮತಾಂತರದ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ವಿವಾದಾತ್ಮಕ ಕಥಾಹಂದರ ಇರುವುದರಿಂದ ಅನೇಕ ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ. ಆದರೂ ಕೂಡ ಉತ್ತಮವಾಗಿ ಕಲೆಕ್ಷನ್​ ಮಾಡುವಲ್ಲಿ ಈ ಸಿನಿಮಾ ಹಿಂದೆ ಬಿದ್ದಿಲ್ಲ.

ಇದನ್ನೂ ಓದಿ: Adah Sharma: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುವ ಅದಾ ಶರ್ಮಾ; ಇಲ್ಲಿದೆ ಫೋಟೋಸ್

ಮೇ 11ರಂದು ನಟಿ ಅದಾ ಶರ್ಮಾ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಈ ಬಾರಿಯ ಹುಟ್ಟುಹಬ್ಬ ಅವರಿಗೆ ವಿಶೇಷ ಎನಿಸಿಕೊಂಡಿದೆ. ಈ ಚಿತ್ರದ ಯಶಸ್ಸಿನ ಬಳಿಕ ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರಲು ಆರಂಭಿಸಿವೆ. ನಿರ್ದೇಶಕ ಸುದೀಪ್ತೋ ಸೇನ್​ ಅವರ ಖ್ಯಾತಿ ಕೂಡ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us