‘ದಿ ಕೇರಳ ಸ್ಟೋರಿ’ ಸಿನಿಮಾಗೆ ಪಶ್ಚಿಮ ಬಂಗಾಳದಲ್ಲಿ (West Bengal) ನಿಷೇಧ ಹೇರಲಾಗಿತ್ತು. ಆದರೆ ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದು ಚಿತ್ರತಂಡಕ್ಕೆ ಖುಷಿ ನೀಡಿದೆ. ಕೋರ್ಟ್ನಿಂದ ತೀರ್ಪು ಪ್ರಕಟವಾದ ಬಳಿಕ ನಿರ್ಮಾಪಕ ವಿಪುಲ್ ಅಮೃತ್ಲಾಲ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಎನ್ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅವರು ಈ ಸಿನಿಮಾವನ್ನು ಮಮತಾ ಬ್ಯಾನರ್ಜಿ (Mamata Banerjee) ನೋಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಶೀಘ್ರದಲ್ಲೇ 200 ಕೋಟಿ ರೂಪಾಯಿ ಗಳಿಸಲಿದೆ. 2023ರಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾಗಳ ಪಟ್ಟಿಯಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 2ನೇ ಸ್ಥಾನದಲ್ಲಿದೆ.
‘ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಮತಾ ದೀದಿ ಅವರು ನಮ್ಮ ಈ ಸಿನಿಮಾವನ್ನು ನೋಡಲಿ. ಆಕ್ಷೇಪಾರ್ಹವಾದದ್ದು ಏನಾದರೂ ಕಂಡುಬಂದಲ್ಲಿ ನಮ್ಮೊಂದಿಗೆ ಚರ್ಚಿಸಲಿ. ನಾವು ಅವರ ಎಲ್ಲಾ ಟೀಕೆಗಳನ್ನು ಕೇಳಲು ಮತ್ತು ನಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ಬಯಸುತ್ತೇವೆ. ಇದು ಪ್ರಜಾಪ್ರಭುತ್ವ ಆದ್ದರಿಂದ ನಾವು ಒಪ್ಪಬಹುದು ಅಥವಾ ಒಪ್ಪದೆಯೂ ಇರಬಹುದು. ನಮ್ಮ ಭಿನ್ನಾಭಿಪ್ರಾಯವನ್ನು ನಾವು ಚರ್ಚಿಸಬಹುದು. ಇದು ನನ್ನ ವಿನಂತಿ’ ಎಂದು ವಿಪುಲ್ ಅಮೃತ್ಲಾಲ್ ಶಾ ಹೇಳಿದ್ದಾರೆ.
#WATCH | “With folded hands, I would like to tell Mamata Didi to watch this film with us and discuss with us if she finds anything as such. We would like to listen to all her valid criticisms and present our point of view…,” says #TheKeralaStory producer Vipul Shah https://t.co/6QlsCHISfW pic.twitter.com/rSVmWo0dQa
— ANI (@ANI) May 18, 2023
‘ಸೆನ್ಸಾರ್ ಮಂಡಳಿಯ ಅನುಮೋದನೆಯ ನಂತರ ಯಾವುದೇ ರಾಜ್ಯವು ಸಿನಿಮಾವನ್ನು ನಿಷೇಧಿಸಲು ಸಾಧ್ಯವಿಲ್ಲ. ಈ ನಿಷೇಧ ಕಾನೂನುಬಾಹಿರವಾಗಿತ್ತು. ಚಿತ್ರ ವೀಕ್ಷಿಸುವ ಹಕ್ಕು ಎಲ್ಲರಿಗೂ ಇದೆ. ನಿಮಗೆ ಇಷ್ಟವಾಗಬಹುದು ಅಥವಾ ಇಷ್ಟಪಡದೇ ಇರಬಹುದು. ಆದರೆ ಯಾರನ್ನೂ ಬಲವಂತವಾಗಿ ತಡೆಯಲು ಸಾಧ್ಯವಿಲ್ಲ ಅಂತ ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸಾಬೀತುಪಡಿಸಿದೆ. ನಾವು ಯಾವಾಗಲೂ ಸರ್ವೋಚ್ಚ ನ್ಯಾಯಾಲಯವನ್ನು ನಂಬುತ್ತೇವೆ’ ಎಂದು ನಿರ್ದೇಶಕ ಸುದೀಪ್ತೋ ಸೇನ್ ಹೇಳಿದ್ದಾರೆ.
‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆಯಾಗಿ 14 ದಿನ ಕಳೆದಿದೆ. ಎರಡನೇ ವಾರ ಕೂಡ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ಪ್ರತಿ ದಿನ ಬಹುಕೋಟಿ ರೂಪಾಯಿ ಆದಾಯ ಹರಿದು ಬರುತ್ತಿದೆ. ಈಗ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಕೂಡ ಪ್ರದರ್ಶನ ಆರಂಭವಾದರೆ ಸಹಜವಾಗಿಯೇ ಕಲೆಕ್ಷನ್ ಹೆಚ್ಚಾಗಲಿದೆ. ಅದಾ ಶರ್ಮಾ ಅವರು ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:38 am, Fri, 19 May 23