ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ‘ದಿ ಸಾಬರಮತಿ ರಿಪೋರ್ಟ್’ ಗಳಿಸಿದ್ದೆಷ್ಟು?

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 2022ರಲ್ಲಿ ಬಿಡುಗಡೆ ಆಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 3.5 ಕೋಟಿ ರೂಪಾಯಿ. ಆದರೆ, ಈ ಚಿತ್ರ ಒಟ್ಟಾರೆ ಗಳಿಕೆ ಮಾಡಿದ್ದು ಬರೋಬ್ಬರಿ 250+ ಕೋಟಿ ರೂಪಾಯಿ. ಈಗ ‘ದಿ ಸಾಬರಮತಿ ರಿಪೋರ್ಟ್’ ಕೂಡ ದಿನ ಕಳೆದಂತೆ ಹೆಚ್ಚಿನ ಕಲೆಕ್ಷನ್ ಮಾಡೋ ನಿರೀಕ್ಷೆ ಇದೆ.

ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ‘ದಿ ಸಾಬರಮತಿ ರಿಪೋರ್ಟ್’ ಗಳಿಸಿದ್ದೆಷ್ಟು?
ಸಾಬರಮತಿ ರಿಪೋರ್ಟ್
Follow us
ರಾಜೇಶ್ ದುಗ್ಗುಮನೆ
|

Updated on: Nov 19, 2024 | 1:02 PM

ವಿಕ್ರಾಂತ್ ಮಾಸ್ಸಿ ನಟನೆಯ ‘ದಿ ಸಾಬರಮತಿ ರಿಪೋರ್ಟ್’ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ನವೆಂಬರ್ 15ರಂದು ಬಿಡುಗಡೆ ಕಂಡಿದೆ. ಈ ಚಿತ್ರದಲ್ಲಿ ರಾಶಿ ಖನ್ನಾ, ರಿದ್ಧಿ ಡೋಗ್ರಾ ಮೊದಲಾದವರು ನಟಿಸಿದ್ದಾರೆ. ಧೀರಜ್ ಶರ್ಮಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏಕ್ತಾ ಕಪೂರ್​ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಈ ಸಿನಿಮಾ ನಾಲ್ಕು ದಿನಗಳಲ್ಲಿ 7 ಕೋಟಿ ರೂಪಾಯಿ ಬಾಚಿಕೊಂಡಿದೆ. ಇದು ‘ದಿ ಕಾಶ್ಮೀರ್ ಫೈಲ್ಸ್’ ರೀತಿಯ ಗಳಿಕೆ ಮಾಡುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 2022ರಲ್ಲಿ ಬಿಡುಗಡೆ ಆಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 3.5 ಕೋಟಿ ರೂಪಾಯಿ. ಆದರೆ, ಈ ಚಿತ್ರ ಒಟ್ಟಾರೆ ಗಳಿಕೆ ಮಾಡಿದ್ದು ಬರೋಬ್ಬರಿ 250+ ಕೋಟಿ ರೂಪಾಯಿ. ಈಗ ‘ದಿ ಸಾಬರಮತಿ ರಿಪೋರ್ಟ್’ ಕೂಡ ದಿನ ಕಳೆದಂತೆ ಹೆಚ್ಚಿನ ಕಲೆಕ್ಷನ್ ಮಾಡೋ ನಿರೀಕ್ಷೆ ಇದೆ.

‘ದಿ ಸಾಬರಮತಿ ರಿಪೋರ್ಟ್’ ಗಳಿಕೆ ಬಗ್ಗೆ Sacnilk ವರದಿ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿ 7.45 ಕೋಟಿ ರೂಪಾಯಿ ಆಗಿದೆ. ಶುಕ್ರವಾರ (ನವೆಂಬರ್ 15) 1.25 ಕೋಟಿ ರೂಪಾಯಿ, ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 2.1 ಕೋಟಿ ರೂಪಾಯಿ ಹಾಗೂ 3 ಕೋಟಿ ರೂಪಾಯಿ ಗಳಿಸಿದೆ. ವಾರದ ದಿನವಾದ ಸೋಮವಾರ ಈ ಚಿತ್ರ 1.15 ಕೋಟಿ ರೂಪಾಯಿ ಹರಿದು ಬಂದಿದೆ.

ಬುಕ್ ಮೈ ಶೋನಲ್ಲಿ ‘ದಿ ಸಾಬರ್ಮತಿ ರಿಪೋರ್ಟ್’ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. 12 ಸಾವಿರಕ್ಕೂ ಅಧಿಕ ಮಂದಿ ವೋಟ್ ಮಾಡಿದ್ದು, 8.3 ರೇಟಿಂಗ್ ಸಿಕ್ಕಿದೆ. ಈ ಚಿತ್ರ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಗೋಧ್ರಾ ದುರಂತದ ಸತ್ಯ ಹೊರಬರ್ತಿದೆ: ‘ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಮೋದಿ ಟ್ವೀಟ್

ಮೋದಿ ಟ್ವೀಟ್

‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲಕ್ಕೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಅವರು  ಟ್ವೀಟ್ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್ ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್
ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್ ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್
ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್
ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್
ಕೇವಲ ಒಂದು ಆರೋಪದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ಸಿಕ್ಕಿದೆ: ಪರಮೇಶ್ವರ್
ಕೇವಲ ಒಂದು ಆರೋಪದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ಸಿಕ್ಕಿದೆ: ಪರಮೇಶ್ವರ್
ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ
ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ
ಸಚಿವ ಸ್ಥಾನಕ್ಕೆ ಬೇಡಿಕೆಯಲ್ಲ, ನನ್ನ ಹಕ್ಕು ಎಂದ ಶಾಸಕ ನರೇಂದ್ರಸ್ವಾಮಿ
ಸಚಿವ ಸ್ಥಾನಕ್ಕೆ ಬೇಡಿಕೆಯಲ್ಲ, ನನ್ನ ಹಕ್ಕು ಎಂದ ಶಾಸಕ ನರೇಂದ್ರಸ್ವಾಮಿ
‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್
‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್
ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ ಬಳಿ ಫುಲ್ ಟ್ರಾಫಿಕ್ ಜಾಮ್
ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ ಬಳಿ ಫುಲ್ ಟ್ರಾಫಿಕ್ ಜಾಮ್