Vivek Agnihotri: ವಾಕಿಂಗ್​ ಹೊರಟ ಅಗ್ನಿಹೋತ್ರಿಗೆ Y ಕೆಟಗರಿ ಭದ್ರತೆ; ‘ಅಯ್ಯೋ ನಮ್ಮ ತೆರಿಗೆ ಹಣ’ ಅಂತ ನೆಟ್ಟಿಗರ ಬೊಬ್ಬೆ

Vivek Agnihotri Viral Video: ವಿವೇಕ್ ಅಗ್ನಿಹೋತ್ರಿ ಅವರಿಗೆ ಈ ಭದ್ರತೆ ನೀಡುವ ಅವಶ್ಯಕತೆ ಇದೆಯೇ ಎಂದು ಅನೇಕರು ಪ್ರಶ್ನಿಸಿದ್ದಾರೆ. ‘ಅಯ್ಯೋ ನಮ್ಮ ತೆರಿಗೆ ಹಣ ಹೀಗೆಲ್ಲ ವ್ಯಯವಾಗುತ್ತಿದೆ’ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

Vivek Agnihotri: ವಾಕಿಂಗ್​ ಹೊರಟ ಅಗ್ನಿಹೋತ್ರಿಗೆ Y ಕೆಟಗರಿ ಭದ್ರತೆ; ‘ಅಯ್ಯೋ ನಮ್ಮ ತೆರಿಗೆ ಹಣ’ ಅಂತ ನೆಟ್ಟಿಗರ ಬೊಬ್ಬೆ
ವಿವೇಕ್ ಅಗ್ನಿಹೋತ್ರಿ
Follow us
TV9 Web
| Updated By: ಮದನ್​ ಕುಮಾರ್​

Updated on:Dec 23, 2022 | 3:01 PM

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ವಿಷಯವನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಮಾಡಿದ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಜನಪ್ರಿಯತೆ ಹೆಚ್ಚಾಯಿತು. ಅಲ್ಲದೇ ಅವರನ್ನು ಅನೇಕ ವಿವಾದಗಳು ಕೂಡ ಬೆನ್ನೇರಿದವು. ಆ ಬಳಿಕ ಅವರಿಗೆ ಸರ್ಕಾರದ ವತಿಯಿಂದ ವೈ ಕೆಟಗರಿ ಭದ್ರತೆ (Y Category Security) ನೀಡಲಾಯಿತು. ಈಗ ಸೋಶಿಯಲ್​ ಮೀಡಿಯಾದಲ್ಲಿ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಒಂದು ಹೊಸ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಬೆಳಗ್ಗೆ​ ವಾಕಿಂಗ್​ ಹೊರಟ ಅವರನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದಾರೆ. ಗನ್​ ಹಿಡಿದು ಅವರ ಹಿಂದೆಯೇ ತೆರಳುತ್ತ ಭದ್ರತೆ ನೀಡುತ್ತಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಜನರು ಹಲವು ಬಗೆಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಅವರಿಗೆ ಈ ಭದ್ರತೆ ನೀಡುವ ಅವಶ್ಯಕತೆ ಇದೆಯೇ ಎಂದು ಅನೇಕರು ಪ್ರಶ್ನಿಸಿದ್ದಾರೆ. ‘ಅಯ್ಯೋ ನಮ್ಮ ತೆರಿಗೆ ಹಣ ಹೀಗೆಲ್ಲ ವ್ಯಯವಾಗುತ್ತಿದೆ’ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ದರ್ಪ ತೋರಿಸುವ ಸಲುವಾಗಿಯೇ ವಿವೇಕ್​ ಅಗ್ನಿಹೋತ್ರಿ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ.

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ಇದನ್ನೂ ಓದಿ: Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ

‘ಕಾಶ್ಮೀರದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡ ತೋರಿಸಿದ್ದಕ್ಕಾಗಿ ತೆರೆಬೇಕಾದ ಬೆಲೆ ಇದು. ಹಿಂದೂಗಳು ಬಹುಸಂಖ್ಯೆಯಲ್ಲಿ ಇರುವ ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ! ನನ್ನದೇ ದೇಶದಲ್ಲಿ ಬಂಧಿ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಈ ವಿಡಿಯೋಗೆ ಕ್ಯಾಪ್ಷನ್​ ನೀಡಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಿಡುಗಡೆ ಆದಾಗಿನಿಂದಲೂ ವಿವೇಕ್​ ಅಗ್ನಿಹೋತ್ರಿ ಅವರು ಒಂದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಿದ್ದಾರೆ.

ವಿವೇಕ್​ ಅಗ್ನಿಹೋತ್ರಿ ಮುಂದಿನ ಸಿನಿಮಾ ‘ದಿ ವ್ಯಾಕ್ಸಿನ್​ ವಾರ್​’:

‘ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾದ ಭಾರಿ ಯಶಸ್ಸಿನ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರು ಕೈಗೆತ್ತಿಕೊಂಡಿರುವ ಹೊಸ ಚಿತ್ರಕ್ಕೆ ‘ದಿ ವ್ಯಾಕ್ಸಿನ್​ ವಾರ್​’ ಎಂದು ಹೆಸರು ಇಡಲಾಗಿದೆ. 2020ರಲ್ಲಿ ಕೊರೊನಾ ವೈರಸ್​ ಹಾವಳಿ ಎದುರಾದಾಗ ಅದರ ವಿರುದ್ಧ ಭಾರತ ಹೇಗೆ ಹೋರಾಟ ನಡೆಸಿತು ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲು ವಿವೇಕ್​ ಅಗ್ನಿಹೋತ್ರಿ ನಿರ್ಧರಿಸಿದ್ದಾರೆ.

ಇದನ್ನೂ ಓದಿ: Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

ವ್ಯಾಕ್ಸಿನ್​ ಕುರಿತು ಮಾಡಲು ಹೊರಟಿರುವ ಈ ಚಿತ್ರವು ಮೋದಿ ಸರ್ಕಾರವನ್ನು ಹೊಗಳುವ ಪ್ರಚಾರದ ಸಿನಿಮಾ ಆಗಲಿದೆ ಎಂದು ಅನೇಕರು ಕಾಲೆಳೆಯುತ್ತಿದ್ದಾರೆ. 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಈ ಚಿತ್ರವನ್ನು ಮಾಡಲಾಗುತ್ತಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Fri, 23 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ