AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ
ಸಪ್ತಮಿ, ಪ್ರಭಾಸ್, ವಿವೇಕ್
ರಾಜೇಶ್ ದುಗ್ಗುಮನೆ
|

Updated on: Aug 15, 2023 | 11:22 AM

Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ದೊಡ್ಡ ಸಿನಿಮಾ ರಿಲೀಸ್ ಆಗುವಾಗ ಸ್ಪರ್ಧೆಗೆ ಇಳಿಯೋಕೆ ಅನೇಕರು ಹಿಂದೇಟು ಹಾಕುತ್ತಾರೆ. ಆದರೆ, ವಿವೇಕ್​ ಅಗ್ನಿಹೋತ್ರಿಗೆ ಈ ಭಯ ಇಲ್ಲ. ಅವರು ಈಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಅವರು ಘೋಷಣೆ ಮಾಡಿದ್ದಾರೆ. ‘ಸಲಾರ್’ ಎದುರು ತಮ್ಮ ಚಿತ್ರವನ್ನು ರಿಲೀಸ್ ಮಾಡುವುದಾಗಿ ವಿವೇಕ್ ತಿಳಿಸಿದ್ದಾರೆ.

ಇಂದು (ಆಗಸ್ಟ್ 15) ಸ್ವಾತಂತ್ರ್ಯ ದಿನಾಚರಣೆ. ಈ ವಿಶೇಷ ದಿನದಂದು ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 28ರಂದು ವಿಶ್ವಾದ್ಯಂತ ತಮ್ಮ ಸಿನಿಮಾ ರಿಲೀಸ್ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಹೀಗಾಗಿ, ‘ಸಲಾರ್’ ಹಾಗೂ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮಧ್ಯೆ ಯಾವ ಚಿತ್ರ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ಅವರು ಈ ಕಥೆಯನ್ನು ಯಾವ ರೀತಿಯಲ್ಲಿ ಕಟ್ಟಿಕೊಡುತ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್

ಇದನ್ನೂ ಓದಿ: ‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ 11ರಂದು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ಕೆಲಸ ಪೂರ್ಣಗೊಳ್ಳದ ಕಾರಣ ಅವರು ರಿಲೀಸ್ ದಿನಾಂಕ ಮುಂದೂಡಿದರು. ‘ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಎದುರು ನಮ್ಮ ಚಿತ್ರ (ದಿ ಕಾಶ್ಮೀರ್ ಫೈಲ್ಸ್) ರಿಲೀಸ್ ಆಗಿ ಗೆದ್ದಿತ್ತು. ಈಗ ಮತ್ತೊಮ್ಮೆ ಪ್ರಭಾಸ್ ಎದುರು ನಮ್ಮ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ’ ಎಂದು ವಿವೇಕ್ ಹೇಳಿರುವುದಾಗಿ ಈ ಮೊದಲು ವರದಿ ಆಗಿತ್ತು. ಆದರೆ, ವಿವೇಕ್ ಅಗ್ನಿಹೋತ್ರಿ ಇದನ್ನು ಅಲ್ಲಗಳೆದಿದ್ದರು. ‘ನಮ್ಮದು ಸಣ್ಣ ಬಜೆಟ್ ಸಿನಿಮಾ. ದೊಡ್ಡ ಸ್ಟಾರ್​​ಗಳ ಎದುರು ನಾವು ಸಿನಿಮಾ ರಿಲೀಸ್ ಮಾಡಲ್ಲ. ಪ್ರಭಾಸ್ ದೊಡ್ಡ ಸ್ಟಾರ್’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದರು. ಆದರೆ, ಈಗ ಅವರು ಸೆಪ್ಟೆಂಬರ್ 28 ಅನ್ನು ಫೈನಲ್ ಮಾಡಿರೋದು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್