ಕೊರೊನಾ ವಿರುದ್ಧ ಭಾರತದ ವಿಜ್ಞಾನಿಗಳು ಹೋರಾಡಿದ ಕಥೆ; ಗಮನ ಸೆಳೆದ ‘ದಿ ವ್ಯಾಕ್ಸಿನ್ ವಾರ್’ ಟ್ರೇಲರ್

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದವರು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಕುರಿತು ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಜೋಶ್​ನಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಕೊರೊನಾ ವಿರುದ್ಧ ಭಾರತದ ವಿಜ್ಞಾನಿಗಳು ಹೋರಾಡಿದ ಕಥೆ; ಗಮನ ಸೆಳೆದ ‘ದಿ ವ್ಯಾಕ್ಸಿನ್ ವಾರ್’ ಟ್ರೇಲರ್
ನಾನಾ ಪಾಟೇಕರ್-ಸಪ್ತಮಿ ಗೌಡ
Follow us
|

Updated on: Sep 13, 2023 | 7:05 AM

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ಹೆಚ್ಚಿಸುವ ರೀತಿಯಲ್ಲಿದೆ ಚಿತ್ರದ ಟ್ರೇಲರ್. ಸಪ್ತಮಿ ಗೌಡ (Sapthami Gowda) , ನಾನಾ ಪಾಟೇಕರ್ ಮೊದಲಾದವರು ಮಾಡಿರುವ ಪಾತ್ರ ಟ್ರೇಲರ್​ನಲ್ಲಿ ಗಮನ ಸೆಳೆದಿದ್ದಾರೆ. ಕೊರೊನಾ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳು ಹಾಕಿದ ಶ್ರಮ ಎದ್ದು ಕಾಣಿಸಿದೆ. ಸಿನಿಮಾ ನೋಡಲು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಸೆಪ್ಟೆಂಬರ್ 28ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾ ಯಾವ ರೀತಿಯಲ್ಲಿ ಸದ್ದು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದವರು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಕುರಿತು ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಜೋಶ್​ನಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅವರ ಪತ್ನಿ ಪಲ್ಲವಿ ಜೋಶಿ ಬಂಡವಾಳ ಹೂಡಿದ್ದಾರೆ.

2020ರ ಆರಂಭದಲ್ಲಿ ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿತು. ಈ ವೈರಸ್ ಇಡೀ ವಿಶ್ವವನ್ನೇ ತತ್ತರಗೊಳಿಸಿತ್ತು. ಎಲ್ಲ ಕಡೆಗಳಲ್ಲಿ ಲಾಕ್​ಡೌನ್ ಘೋಷಿಸಲಾಯಿತು. ಈ ಸಂದರ್ಭದಲ್ಲಿ ದೇಶಕ್ಕೆ ಕೊರೊನಾ ಲಸಿಕೆಯ ಅವಶ್ಯಕತೆ ಇತ್ತು. ಆಗ ಭಾರತದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದರು. ಈ ಲಸಿಕೆ ಸಾಕಷ್ಟು ಜನರ ಜೀವ ಉಳಿಸಿದೆ. ದೇಶವೇ ಹೆಮ್ಮೆ ಪಡುವ ಈ ಘಟನೆಯನ್ನು ಸಿನಿಮಾ ರೂಪದಲ್ಲಿ ತರಲಾಗುತ್ತಿದೆ.

ಇದನ್ನೂ ಓದಿ: ರಾತ್ರಿ ಪೂರ್ತಿ ಕುಡಿದು, ಬೆಳೆಗೆದ್ದು ನಾನು ದೇವರು ಎಂದರೆ ಯಾರೂ ಒಪ್ಪಲ್ಲ: ಪ್ರಭಾಸ್​ಗೆ ವಿವೇಕ್ ಅಗ್ನಿಹೋತ್ರಿ ಟಾಂಗ್

‘ದಿ ವ್ಯಾಕ್ಸಿನ್ ವಾರ್’ ಕೇವಲ ಒಂದು ಸಿನಿಮಾ ಅಲ್ಲ. ಲಸಿಕೆ ಕಂಡು ಹಿಡಿಯಬೇಕು ಎಂಬ ವಿಜ್ಞಾನಿಗಳ ಛಲ, ಆ ಬಳಿಕ ಎದುರಾಗುವ ಅಡೆತಡೆ, ನಿರಾಸೆ, ಯಶಸ್ಸು ಹೀಗೆ ಹಲವು ವಿಚಾರಗಳನ್ನು ಕಟ್ಟಿಕೊಡಲಾಗಿದೆ. ಈ ಟ್ರೇಲರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ರೈಮಾ ಸೇನ್, ಸಪ್ತಮಿ ಗೌಡ, ಪಲ್ಲವಿ ಜೋಶಿ, ಮೋಹನ್ ಕಪೂರ್ ಮೊದಲಾದವರು ನಟಿಸಿದ್ದಾರೆ. ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ