AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾ ಅಂದ್ರೆ ಇದು’; ‘ಕಾಂತಾರ’ ನೋಡಿ ಹ್ಯಾಂಗೋವರ್​ಗೆ ಹೋದ ನಟಿ ಕಂಗನಾ ರಣಾವತ್  

ಕಂಗನಾ ಯಾವ ಚಿತ್ರವನ್ನೂ ಹಾಗೆ ಹೊಗಳುವವರಲ್ಲ. ಆದರೆ, ‘ಕಾಂತಾರ’ವನ್ನು ಮೆಚ್ಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರವನ್ನು ಕುಟುಂಬ ಸಮೇತ ನೋಡಿ ಬಂದಿದ್ದಾರೆ ಕಂಗನಾ. ಸಿನಿಮಾ ಯಾವ ರೀತಿಯ ಅನುಭವ ನೀಡಿತು ಎಂಬ ಬಗ್ಗೆ ವಿಡಿಯೋ ಮಾಡಿದ್ದಾರೆ.

‘ಸಿನಿಮಾ ಅಂದ್ರೆ ಇದು’; ‘ಕಾಂತಾರ’ ನೋಡಿ ಹ್ಯಾಂಗೋವರ್​ಗೆ ಹೋದ ನಟಿ ಕಂಗನಾ ರಣಾವತ್  
ರಿಷಬ್-ಕಂಗನಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 21, 2022 | 10:23 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಯಾವುದೇ ವಿಚಾರವಾಗಲಿ ಹೊಗಳಿದ್ದಕಿಂತ ತೆಗಳಿದ್ದೇ ಹೆಚ್ಚು. ಯಾವುದಾದರೂ ಸಿನಿಮಾ ರಿಲೀಸ್ ಆದರೆ ಅದನ್ನು ನೋಡಿ ಟೀಕೆ ಮಾಡಿದ್ದಿದೆ. ವಿವಾದಗಳನ್ನು ಅವರು ಸದಾ ಮೈಮೇಲೆ ಎಳೆದುಕೊಳ್ಳುತ್ತಲೇ ಇರುತ್ತಾರೆ. ಆದರೆ, ಈಗ ಅವರು ‘ಕಾಂತಾರ’ ಸಿನಿಮಾ ನೋಡಿ ಬಂದು ಅದನ್ನು ಮನಸಾರೆ ಹೊಗಳಿದ್ದಾರೆ. ನಿರ್ದೇಶಕ ರಿಷಬ್ ಶೆಟ್ಟಿ ಅವರ ಕೆಲಸವನ್ನು ಬಾಯ್ತುಂಬ ಮೆಚ್ಚಿಕೊಂಡಿದ್ದಾರೆ. ಬಾಲಿವುಡ್​ ನಟಿಯ ಬಾಯಿಂದ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿದ್ದು ರಿಷಬ್ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

ಕಂಗನಾ ಯಾವ ಚಿತ್ರವನ್ನೂ ಹಾಗೆ ಹೊಗಳುವವರಲ್ಲ. ಆದರೆ, ‘ಕಾಂತಾರ’ವನ್ನು ಮೆಚ್ಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರವನ್ನು ಕುಟುಂಬ ಸಮೇತ ನೋಡಿ ಬಂದಿದ್ದಾರೆ ಕಂಗನಾ. ಸಿನಿಮಾ ಯಾವ ರೀತಿಯ ಅನುಭವ ನೀಡಿತು ಎಂಬ ಬಗ್ಗೆ ವಿಡಿಯೋ ಮಾಡಿದ್ದಾರೆ. ‘ನಾನು ಕುಟುಂಬದವರ ಜತೆ ಕಾಂತಾರ ನೋಡಿ ಬಂದೆ. ಈಗಲೂ ನಾನು ಶೇಕ್ ಆಗುತ್ತಿದ್ದೇನೆ. ಎಂತಹ ಸ್ಫೋಟಕ ಅನುಭವ. ರಿಷಬ್ ಶೆಟ್ಟಿ ಅವರೇ ನಿಮಗೆ ಹ್ಯಾಟ್ಸ್ ಆಫ್​. ಬರವಣಿಗೆ, ನಿರ್ದೇಶನ, ನಟನೆ, ಆ್ಯಕ್ಷನ್ ಎಲ್ಲವೂ ಬ್ರಿಲಿಯಂಟ್. ನಂಬೋಕೆ ಸಾಧ್ಯವಾಗುತ್ತಿಲ್ಲ’ ಎಂದು ವಿಡಿಯೋದಲ್ಲಿ ಕಂಗನಾ ಹೇಳಿದ್ದಾರೆ.

ಇದನ್ನೂ ಓದಿ
Image
Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ
Image
Sapthami Gowda: ಜನರ ಮಧ್ಯೆ ‘ಕಾಂತಾರ’ ನಾಯಕಿ ಸಪ್ತಮಿ ಗೌಡ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

‘ಸಂಪ್ರದಾಯ, ಜಾನಪದ ವಿಚಾರ, ಸ್ಥಳೀಯ ಸಮಸ್ಯೆಗಳನ್ನು ಸಿನಿಮಾದಲ್ಲಿ ಹದವಾಗಿ ಬೆರೆಸಲಾಗಿದೆ. ಎಂಥ ಸುಂದರ ಛಾಯಾಗ್ರಹಣ, ಸಿನಿಮಾ ಎಂದರೆ ಇದು. ಒಂದು ವಾರಗಳ ಕಾಲ ಈ ಹ್ಯಾಂಗೋವರ್​ನಿಂದ ಹೊರಬರಲು ಸಾಧ್ಯವಿಲ್ಲ’ ಎಂದು ಕಂಗನಾ ಘೋಷಿಸಿದ್ದಾರೆ.

‘ಕಾಂತಾರ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸುಮಾರು 170 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿ ಆಗಿದೆ. ಈ ಮೂಲಕ ಕನ್ನಡದ ಹಲವು ಸಿನಿಮಾಗಳು ಮಾಡಿದ್ದ ದಾಖಲೆಗಳನ್ನು ಈ ಚಿತ್ರ ಉಡೀಸ್ ಮಾಡಿದೆ. ಈ ಮೂಲಕ ಈ ವರ್ಷ ತೆರೆಗೆ ಬಂದ ಕನ್ನಡದ ಚಿತ್ರಗಳ ಪೈಕಿ ಅತಿ ಹೆಚ್ಚು ಗಳಿಕೆ ಮಾಡಿದ ಎರಡನೇ ಚಿತ್ರ ಇದಾಗಿದೆ. ಮೊದಲ ಸ್ಥಾನದಲ್ಲಿ ‘ಕೆಜಿಎಫ್ 2’ ಇದೆ.

ಇದನ್ನೂ ಓದಿ: ‘ಪ್ರಧಾನಿ ನರೇಂದ್ರ ಮೋದಿ ಕಾಂತಾರ ನೋಡ್ತಾರೆ ಅನ್ನೋದು ಸುಳ್ಳು ಸುದ್ದಿ’; ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​

‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಅವರು ವಿಶ್ವ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಪರ ರಾಜ್ಯಗಳಿಗೂ ತೆರಳಿ ಅವರು ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡುತ್ತಿದ್ದಾರೆ.

Published On - 6:58 am, Fri, 21 October 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!