AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ತಡೆ: ಹೈಕೋರ್ಟ್ ನೀಡಿದ ಕಾರಣವೇನು?

‘ದಿ ಕೇರಳ ಸ್ಟೋರಿ 2’ ಸಿನಿಮಾದ ವಿವಾದ ಜಾಸ್ತಿ ಆಗಿದೆ. ರಿಲೀಸ್ ದಿನಾಂಕ ಮುಂದೂಡಲಾಗಿದೆ. ಟೀಸರ್​ನಲ್ಲಿ ವಿವಾದಾತ್ಮಕ ಅಂಶಗಳು ಇರುವ ಕಾರಣ ಈ ಚಿತ್ರದ ವಿರುದ್ಧ ಅನೇಕರು ತಕರಾರು ತೆಗೆದಿದ್ದಾರೆ. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಸೆನ್ಸಾರ್ ಮಂಡಳಿ ಅನುಸರಿಸಿದ ಕ್ರಮದ ಬಗ್ಗೆ ವಿರೋಧ ವ್ಯಕ್ತವಾಗಿದೆ.

‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ತಡೆ: ಹೈಕೋರ್ಟ್ ನೀಡಿದ ಕಾರಣವೇನು?
The Kerala Story 2
ಮದನ್​ ಕುಮಾರ್​
|

Updated on: Feb 26, 2026 | 5:05 PM

Share

ಲವ್ ಜಿಹಾದ್ ಕುರಿತ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈ ವಾರ ಬಿಡುಗಡೆ ಆಗುತ್ತಿಲ್ಲ. ಫೆಬ್ರವರಿ 27ರಂದು ರಿಲೀಸ್ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಈ ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಚಿತ್ರತಂಡಕ್ಕೆ ಆಘಾತ ಆಗಿದೆ. ಚಿತ್ರದ ಟೀಸರ್ ಬಿಡುಗಡೆ ಆದ ಬಳಿಕ ಅನೇಕರಿಂದ ವಿರೋಧ ವ್ಯಕ್ತವಾಗಿತ್ತು. ಕೆಲವರು ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿರುವ ಕೇರಳ ಹೈಕೋರ್ಟ್ (Kerala High Court) ಈ ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಈ ತೀರ್ಪಿಗೆ ಕಾರಣ ಇಲ್ಲಿದೆ.

ಜಸ್ಟೀಸ್ ಬೇಚು ಕುರಿಯನ್ ಥಾಮಸ್ ಅವರು ಈ ತೀರ್ಪು ನೀಡಿದ್ದಾರೆ. ಸೆನ್ಸಾರ್ ಮಂಡಳಿಯು ನಿಯಮಗಳನ್ನು ಕಡೆಗಣಿಸಿದಂತಿದೆ. ಆದ್ದರಿಂದ ಪ್ರಮಾಣಪತ್ರ ನೀಡಿರುವ ನಿರ್ಧಾರವನ್ನು ಪರಿಪರಿಶೀಲಿಸಬೇಕು ಎಂದು ಅವರು ಹೇಳಿದ್ದಾರೆ. ಸಿನಿಮಾದ ಟೀಸರ್​ನಲ್ಲಿ ಇರುವ ಅಂಶಗಳ ಬಗ್ಗೆ ಕೇರಳ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

‘ಸಿನಿಮಾದ ಭಾಗವಾಗಿರುವ ಈ ಟೀಸರ್​​ನಲ್ಲಿ ಜನರ ನಂಬಿಕೆಯನ್ನು ತಿರುಚುವಂತಹ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಅಂಶಗಳು ಇವೆ’ ಎಂಬ ಕಾರಣವನ್ನು ನೀಡಿ ಕೇರಳ ಹೈಕೋರ್ಟ್ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಈ ಸಿನಿಮಾದಲ್ಲಿ ಕೇರಳವನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

2023ರಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಅದರ ಸೀಕ್ವೆಲ್ ಆಗಿ ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಸಿನಿಮಾ ಸಿದ್ಧವಾಗಿದೆ. ಟೀಸರ್ ಬಿಡುಗಡೆ ಆದ ಬಳಿಕ ವಿವಾದ ಸೃಷ್ಟಿ ಆಯಿತು. ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಊಜಾ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಲವ್ ಜಿಹಾದ್ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದು ಟೀಸರ್ ಮೂಲಕ ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್