‘ಒಎಂಜಿ 2’ ಚಿತ್ರಕ್ಕೆ ಸಂಭಾವನೆಯನ್ನೇ ಪಡೆಯಲಿಲ್ಲ ಅಕ್ಷಯ್ ಕುಮಾರ್; ಇಂಥ ನಿರ್ಧಾರ ಯಾಕೆ?

ಅಕ್ಷಯ್ ಸಂಭಾವನೆ ಪಡೆದಿಲ್ಲ ಎಂಬುದನ್ನು ಕೆಲವರು ಬೇರೆ ರೀತಿಯಲ್ಲಿ ಬಣ್ಣಿಸಿದ್ದಾರೆ. ‘ಅಕ್ಷಯ್ ಕುಮಾರ್ ಅವರು ಬಂದ ಲಾಭದಲ್ಲಿ ಪಾಲು ಕೇಳಿರಬಹುದು. ಈ ಕಾರಣಕ್ಕೆ ಅವರು ಸಂಭಾವನೆ ಪಡೆದಿಲ್ಲ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಪದ್ದತಿಯನ್ನು ಅನೇಕ ಸ್ಟಾರ್​ ಹೀರೋಗಳು ಪಾಲಿಸಿದ್ದುಂಟು. ಈ ಬಗ್ಗೆ ಅಕ್ಷಯ್ ಕುಮಾರ್ ಸ್ಪಷ್ಟನೆ ನೀಡಬೇಕಿದೆ.

‘ಒಎಂಜಿ 2’ ಚಿತ್ರಕ್ಕೆ ಸಂಭಾವನೆಯನ್ನೇ ಪಡೆಯಲಿಲ್ಲ ಅಕ್ಷಯ್ ಕುಮಾರ್; ಇಂಥ ನಿರ್ಧಾರ ಯಾಕೆ?
ಅಕ್ಷಯ್​ ಕುಮಾರ್​
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Aug 18, 2023 | 4:17 PM

ಬಾಲಿವುಡ್​ ನಟ ಅಕ್ಷಯ್ ಕುಮಾರ್ (Akshay Kumar) ಅವರು ಪ್ರತಿ ಚಿತ್ರಕ್ಕೆ 100 ಕೋಟಿ ರೂಪಾಯಿವರೆಗೆ ಸಂಭಾವನೆ ಪಡೆದುಕೊಳ್ಳುತ್ತಾರೆ. ಆದರೆ, ಸಾಲು ಸಾಲು ಸಿನಿಮಾಗಳು ಸೋಲು ಕಾಣುತ್ತಿರುವುದರಿಂದ ಅವರ ಮೇಲೆ ಬಂಡವಾಳ ಹೂಡಿದ ನಿರ್ಮಾಪಕರಿಗೂ ಭಯ ಕಾಡುತ್ತಿದೆ. ಈಗ ಅವರ ನಟನೆಯ ಒಎಂಜಿ 2’ ಸಿನಿಮಾ (OMG 2 Movie) 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮಧ್ಯೆ ಅವರು ಈ ಚಿತ್ರಕ್ಕೆ ಸಂಭಾವನೆಯನ್ನೇ (Akshay Kumar Remuneration) ಪಡೆದಿಲ್ಲ ಎನ್ನುವ ಸುದ್ದಿ ಹೊರಬಿದ್ದಿದೆ. ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ಅಕ್ಷಯ್ ಯಾಕೀ ನಿರ್ಧಾರ ತೆಗೆದುಕೊಂಡರು ಅನ್ನೋ ಬಗ್ಗೆ ಇಲ್ಲಿದೆ ಮಾಹಿತಿ.

ಅಕ್ಷಯ್ ಕುಮಾರ್ ಅವರು ‘ಒಎಂಜಿ 2’ ಚಿತ್ರದಲ್ಲಿ ಶಿವನ ಪಾತ್ರ ಮಾಡಿದ್ದಾರೆ. ಹಾಗಂತ ಚಿತ್ರದುದ್ದಕ್ಕೂ ಅವರೇ ಇಲ್ಲ. ಪಂಕಜ್ ತ್ರಿಪಾಠಿ ಈ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾದಲ್ಲಿ ಹೇಳಲಾಗಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರದ್ದು ವಿಸ್ತ್ರತ ಅತಿಥಿ ಪಾತ್ರ. ಇದಕ್ಕೆ ಅವರು ಯಾವುದೇ ಸಂಭಾವನೆ ಪಡೆಯಲಿಲ್ಲವಂತೆ.

ಇದನ್ನೂ ಓದಿ: ‘ಒಎಂಜಿ 2’ ಚಿತ್ರ ಹೇಗಿದೆ? ಸಿನಿಮಾ ನೋಡಿದ ಟ್ವಿಟರ್ ಮಂದಿ ಹೇಳಿದ್ದು ಹೀಗೆ

‘ಅಕ್ಷಯ್ ಕುಮಾರ್ ಈ ಚಿತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ. ಈ ಕಾರಣದಿಂದಲೇ ಸಿನಿಮಾದ ಬಜೆಟ್ 150 ಕೋಟಿ ರೂಪಾಯಿ ದಾಟಿದೆ’ ಎಂಬ ಸುದ್ದಿ ಹರಿದಾಡಿತ್ತು. ‘ವಯಾಕಾಮ್ 18’ ಸಂಸ್ಥೆಯ ಸಹ ನಿರ್ಮಾಪಕ ಅಜಿತ್ ಅವರು ಅಕ್ಷಯ್ ಕುಮಾರ್ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ.

‘ಸಿನಿಮಾ ಬಜೆಟ್ ವಿಚಾರವನ್ನು ಕೆಲವರು ಉತ್ಪ್ರೇಕ್ಷಿಸಿದ್ದಾರೆ. ಅಕ್ಷಯ್ ಕುಮಾರ್ ಅವರು ಈ ಚಿತ್ರಕ್ಕೆ ಯಾವುದೇ ಸಂಭಾವನೆ ಪಡೆದಿಲ್ಲ’ ಎಂದಿದ್ದಾರೆ ಅಜಿತ್. ಅಕ್ಷಯ್ ಕುಮಾರ್ ನಟನೆಯ ‘ಒಎಂಜಿ’, ‘ಸ್ಪೆಷಲ್ 26’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಚಿತ್ರ ‘ವಯಾಕಾಮ್ 18’ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿದೆ. ಹೀಗಾಗಿ ಈ ನಿರ್ಮಾಣ ಸಂಸ್ಥೆ ಮತ್ತು ಅಕ್ಷಯ್ ಕುಮಾರ್ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ಸ್ಕ್ರಿಪ್ಟ್​​ಗಳಿದ್ದರೆ ಅಕ್ಷಯ್ ಅದಕ್ಕೆ ಬೆಂಬಲ ನೀಡುತ್ತಾರೆ ಎಂಬುದು ಅಜಿತ್ ಮಾತು.

ಇದನ್ನೂ ಓದಿ: ಅಕ್ಷಯ್ ಕುಮಾರ್ ಈಗ ಭಾರತೀಯ ಪ್ರಜೆ; ಕೆನಡಾ ಪೌರತ್ವ ಬಿಟ್ಟು ಭಾರತದ ನಾಗರೀಕನಾದ ನಟ

ಅಕ್ಷಯ್ ಸಂಭಾವನೆ ಪಡೆದಿಲ್ಲ ಎಂಬುದನ್ನು ಕೆಲವರು ಬೇರೆ ರೀತಿಯಲ್ಲಿ ಬಣ್ಣಿಸಿದ್ದಾರೆ. ‘ಅಕ್ಷಯ್ ಕುಮಾರ್ ಅವರು ಬಂದ ಲಾಭದಲ್ಲಿ ಪಾಲು ಕೇಳಿರಬಹುದು. ಈ ಕಾರಣಕ್ಕೆ ಅವರು ಸಂಭಾವನೆ ಪಡೆದಿಲ್ಲ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಪದ್ದತಿಯನ್ನು ಅನೇಕ ಸ್ಟಾರ್​ ಹೀರೋಗಳು ಪಾಲಿಸಿದ್ದುಂಟು. ಈ ಬಗ್ಗೆ ಅಕ್ಷಯ್ ಕುಮಾರ್ ಸ್ಪಷ್ಟನೆ ನೀಡಬೇಕಿದೆ. ‘ಒಎಂಜಿ 2’ ಚಿತ್ರಕ್ಕೆ ಮೆಚ್ಚುಗೆ ಸಿಕ್ಕ ಬಗ್ಗೆ ಅಕ್ಷಯ್ ಕುಮಾರ್ ಅವರು ಟ್ವೀಟ್ ಮಾಡಿದ್ದರು. ಅವರು ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು. ಅಕ್ಷಯ್ ಕೈಯಲ್ಲಿ ಹಲವು ಚಿತ್ರಗಳಿವೆ. ‘ಒಎಂಜಿ 2’ ಗೆಲುವು ಅಕ್ಷಯ್ ವೃತ್ತಿಬದುಕಿನ ಮೈಲೇಜ್ ಹೆಚ್ಚಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು