ಮಧ್ಯರಾತ್ರಿ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ ಶಾರುಖ್ ಖಾನ್; ನಟನ ನಂಬಿಕೆಗೆ ಕಾರಣವೇನು?

ಶಾರುಖ್ ಖಾನ್ ಅವರು ಮುಸ್ಲಿಂ ಧರ್ಮಕ್ಕೆ ಸೇರಿದವರು. ಆದಾಗ್ಯೂ ಅವರ ಮನೆಯಲ್ಲಿ ಗಣೇಶ ಚತುರ್ಥಿ ಸೇರಿ ಹಲವು ಹಿಂದೂ ಹಬ್ಬಗಳನ್ನು ಆಚರಿಸಲಾಗುತ್ತದೆ. ಅವರಿಗೆ ಹಿಂದೂ ದೇವರ ಬಗ್ಗೆಯೂ ಅಪಾರ ಭಕ್ತಿ ಇದೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಹಿಂದೂಗಳ ಪ್ರಮುಖ ದೇವಾಲಯವಾದ ವೈಷ್ಣೋ ದೇವಿಗೆ ಶಾರುಖ್ ಖಾನ್ ಅವರು ಆಗಸ್ಟ್ 29ರಂದು ಭೇಟಿ ನೀಡಿದ್ದಾರೆ.

ಮಧ್ಯರಾತ್ರಿ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ ಶಾರುಖ್ ಖಾನ್; ನಟನ ನಂಬಿಕೆಗೆ ಕಾರಣವೇನು?
ಶಾರುಖ್​ ಖಾನ್​, ವೈಷ್ಣೋ ದೇವಿ
Follow us
ಮದನ್​ ಕುಮಾರ್​
|

Updated on: Aug 30, 2023 | 5:24 PM

ಬಾಲಿವುಡಗ್ ನಟ ಶಾರುಖ್ ಖಾನ್ (Shah Rukh Khan) ಅಭಿನಯದ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಪಠಾಣ್’ ಚಿತ್ರಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ. ‘ಜವಾನ್’ (Jawan Movie) ಬಿಡುಗಡೆ​ಗೆ ಒಂದು ವಾರ ಬಾಕಿ ಇರುವಾಗ ಶಾರುಖ್ ಖಾನ್ ಅವರು ಜಮ್ಮ ಕಾಶ್ಮೀರದಲ್ಲಿರುವ ವೈಷ್ಣೋ ದೇವಿ (Vaishno Devi) ದೇವಸ್ಥಾನಗೆ ಭೇಟಿ ನೀಡಿದ್ದಾರೆ. ಅದೂ ಮಧ್ಯರಾತ್ರಿ ಸಂದರ್ಭದಲ್ಲಿ ಅನ್ನೋದು ವಿಶೇಷ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಶಾರುಖ್​ ಹೀಗೆ ಭೇಟಿ ನೀಡಿದ್ದಕ್ಕೆ ಕಾರಣ ಇದೆ.

ಶಾರುಖ್ ಖಾನ್ ಅವರು ಮುಸ್ಲಿಂ ಧರ್ಮಕ್ಕೆ ಸೇರಿದವರು. ಆದಾಗ್ಯೂ ಅವರ ಮನೆಯಲ್ಲಿ ಗಣೇಶ ಚತುರ್ಥಿ ಸೇರಿ ಹಲವು ಹಿಂದೂ ಹಬ್ಬಗಳನ್ನು ಆಚರಿಸಲಾಗುತ್ತದೆ. ಅವರಿಗೆ ಹಿಂದೂ ದೇವರ ಬಗ್ಗೆಯೂ ಅಪಾರ ಭಕ್ತಿ ಇದೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಹಿಂದೂಗಳ ಪ್ರಮುಖ ದೇವಾಲಯವಾದ ವೈಷ್ಣೋ ದೇವಿಗೆ ಶಾರುಖ್ ಖಾನ್ ಅವರು ಮಗಳವಾರ (ಆಗಸ್ಟ್ 29) ರಾತ್ರಿ 11:40ರ ಸಮಯದಲ್ಲಿ ಭೇಟಿ ನೀಡಿದ್ದಾರೆ. ತಮ್ಮ ಗುರುತು ಯಾರಿಗೂ ಸಿಗಬಾರದು ಎನ್ನುವ ಕಾರಣಕ್ಕೆ ಅವರು ಮುಖ ಮುಚ್ಚಿಕೊಂಡಿದ್ದರು. ಅವರನ್ನು ಭದ್ರತಾ ಸಿಬ್ಬಂದಿಗಳು ಸುತ್ತುವರಿದಿದ್ದರು.

ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​ ವಿಡಿಯೋ:

ಶಾರುಖ್ ಖಾನ್ ಅವರು ವೈಷ್ಣೋ ದೇವಿ ಟೆಂಪಲ್​ಗೆ ಭೇಟಿ ನೀಡುತ್ತಿರುವುದು ಇದೇ ಮೊದಲೇನೂ ಅಲ್ಲ. ‘ಪಠಾಣ್’ ಸಿನಿಮಾ ರಿಲೀಗೂ ಮೊದಲು ಅವರು ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಕೆ ಮಾಡಿದ್ದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಕಾರಣಕ್ಕೆ ಅವರು ‘ಜವಾನ್’ ರಿಲೀಸ್​ಗೂ ಮೊದಲು ಇಲ್ಲಿಗೆ ಆಗಮಿಸಿದ್ದಾರೆ. ಶಾರುಖ್ ಖಾನ್ ಅವರು ಹಿಂದೂ ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವುದನ್ನು ಅನೇಕರು ಶ್ಲಾಘಿಸಿದ್ದಾರೆ. ಶಾರುಖ್ ಖಾನ್ ಭಕ್ತಿ ನಿಜಕ್ಕೂ ಮೆಚ್ಚುವಂಥದ್ದು ಎಂದಿದ್ದಾರೆ. ಇನ್ನೂ ಕೆಲವರು ಎಂದಿನಂತೆ ಶಾರುಖ್ ಖಾನ್ ಅವರನ್ನು ಟೀಕಿಸಿದ್ದಾರೆ. ಅವರು ಹಿಂದೂ ದೇವರ ಮೊರೆ ಹೋಗಿದ್ದೇಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ಗೇ’ ಅಂತ ಕರೆಸಿಕೊಂಡ ಬಗ್ಗೆ ಮುಕ್ತವಾಗಿ ಮಾತಾಡಿದ ಕರಣ್​ ಜೋಹರ್​; ಶಾರುಖ್​ ಖಾನ್​ ಕುರಿತು ಹೇಳಿದ್ದೇನು?

ಭರ್ಜರಿಯಾಗಿ ಟ್ರೇಲರ್ ಲಾಂಚ್ ಮಾಡಲು ಸಿದ್ಧತೆ:

‘ಪಠಾಣ್’ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿತ್ತು. ಅದೇ ರೀತಿ ‘ಜವಾನ್’ ಚಿತ್ರಕ್ಕೂ ಶಾರುಖ್ ಸಖತ್ ಪ್ರಚಾರ ನೀಡುತ್ತಿದ್ದಾರೆ. ಅವರಿಗೆ ಕೇವಲ ಭಾರತ ಮಾತ್ರವಲ್ಲ ವಿದೇಶದಲ್ಲೂ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ಶಾರುಖ್ ಖಾನ್ ಅವರು ಆಗಸ್ಟ್ 31ರಂದು ದುಬೈಗೆ ತೆರಳುತ್ತಿದ್ದಾರೆ. ಜಗತ್ತಿನ ಅತ್ಯಂತ ಉದ್ದನೆಯ ಕಟ್ಟಡ ಭುರ್ಜ್ ಖಲೀಫಾ ಮೇಲೆ ಟ್ರೇಲರ್ ಲಾಂಚ್ ನಡೆಯಲಿದೆ. ಈ ಮೂಲಕ ವಿದೇಶದಲ್ಲಿರುವ ಅಭಿಮಾನಿಗಳನ್ನು ಅವರು ಖುಷಿಪಡಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಪ್ರಿವ್ಯೂ ವಿಡಿಯೋ ಗಮನ ಸೆಳೆದಿತ್ತು. ಅಭಿಮಾನಿಗಳು ಟ್ರೇಲರ್ ನೋಡಲು ಕಾದಿದ್ದಾರೆ.

ಇದನ್ನೂ ಓದಿ: ‘ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸೋಕೆ ಆಗ್ತಿಲ್ಲ’: ಶಾರುಖ್​ ಖಾನ್​ ಹೀಗೆ ಹೇಳಿದ್ದೇಕೆ?

‘ಜವಾನ್’  ಸಿನಿಮಾ ಬಗ್ಗೆ:

‘ಜವಾನ್’ ಚಿತ್ರಕ್ಕೆ ಅಟ್ಲಿ ಅವರು ನಿರ್ದೇಶನ ಮಾಡಿದ್ದಾರೆ. ತಮಿಳಿನಲ್ಲಿ ಸಾಲು ಸಾಲು ಹಿಟ್ ಸಿನಿಮಾ ನೀಡಿದ ಅವರು ಇದೇ ಮೊದಲ ಬಾರಿಗೆ ಹಿಂದಿಯಲ್ಲಿ ಸಿನಿಮಾ ಮಾಡಿದ್ದಾರೆ. ಶಾರುಖ್ ಖಾನ್​ಗೆ ಜೊತೆಯಾಗಿ ತಮಿಳು ನಟಿ ನಯನತಾರಾ ಕಾಣಿಸಿಕೊಂಡಿದ್ದಾರೆ. ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ. ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ