ಶಾರುಖ್​, ಸಲ್ಮಾನ್​, ಆಮಿರ್​ ಜೊತೆ ಯಾಕೆ ನಟಿಸಿಲ್ಲ? ಅಸಲಿ ಕಾರಣ ತಿಳಿಸಿದ ಶ್ರದ್ಧಾ ಕಪೂರ್​

ಶ್ರದ್ಧಾ ಕಪೂರ್​ ಅವರಿಗೆ ‘ಸ್ತ್ರೀ 2’ ಸಿನಿಮಾದಿಂದ ಸಿಕ್ಕಿರುವ ಗೆಲುವು ಸಖತ್​ ದೊಡ್ಡದು. 6 ದಿನಕ್ಕೆ ವಿಶ್ವಾದ್ಯಂತ 373 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ ಎಂಬುದು ಗಮನಾರ್ಹ ವಿಷಯ. ಚಿತ್ರರಂಗಕ್ಕೆ ಬಂದು ಹಲವು ವರ್ಷ ಕಳೆದಿದ್ದರೂ ಕೂಡ ಶ್ರದ್ಧಾ ಕಪೂರ್​ ಅವರು ಆಮಿರ್​ ಖಾನ್​, ಸಲ್ಮಾನ್​ ಖಾನ್​ ಹಾಗೂ ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಿಲ್ಲ.

ಶಾರುಖ್​, ಸಲ್ಮಾನ್​, ಆಮಿರ್​ ಜೊತೆ ಯಾಕೆ ನಟಿಸಿಲ್ಲ? ಅಸಲಿ ಕಾರಣ ತಿಳಿಸಿದ ಶ್ರದ್ಧಾ ಕಪೂರ್​
ಶ್ರದ್ಧಾ ಕಪೂರ್​, ಸಲ್ಮಾನ್​ ಖಾನ್​, ಶಾರುಖ್​ ಖಾನ್​, ಆಮಿರ್​ ಖಾನ್​
Follow us
|

Updated on: Aug 21, 2024 | 7:30 PM

ಬಾಲಿವುಡ್​ನಲ್ಲಿ ಆಮಿರ್​ ಖಾನ್​, ಸಲ್ಮಾನ್​ ಖಾನ್​, ಶಾರುಖ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ಯಾವ ನಟಿಯೂ ನೋ ಎನ್ನುವುದಿಲ್ಲ. ಈ ಸೂಪರ್​ ಸ್ಟಾರ್​ಗಳ ಜೊತೆ ನಟಿಸಬೇಕು ಎಂಬುದು ಎಲ್ಲರ ಆಸೆ ಆಗಿರುತ್ತದೆ. ಬಾಲಿವುಡ್​ನ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ಶ್ರದ್ಧಾ ಕಪೂರ್​ ಅವರು ಈವರೆಗೂ ಖಾನ್​ಗಳ ಸಿನಿಮಾದಲ್ಲಿ ನಟಿಸಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ತಿಳಿಸಿದ್ದಾರೆ. ಶ್ರದ್ಧಾ ಕಪೂರ್​ ಅವರಿಗೆ ‘ಸ್ತ್ರೀ 2’ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿದೆ.

ಶ್ರದ್ಧಾ ಕಪೂರ್​ ಅವರು ಬಾಲಿವುಡ್​ಗೆ ಕಾಲಿಟ್ಟು ಹಲವು ವರ್ಷ ಕಳೆದಿವೆ. ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಸ್ತ್ರೀ 2’ ಸಿನಿಮಾ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ, ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಈ ಖುಷಿಯಲ್ಲಿ ಇರುವ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಸ್ಟಾರ್​ ಹೀರೋಗಳ ಸಿನಿಮಾ ಎಂಬುದಕ್ಕಿಂತಲೂ ಹೆಚ್ಚಾಗಿ ತಮ್ಮ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆ ಎಂಬುದು ಶ್ರದ್ಧಾ ಕಪೂರ್​ ಅವರಿಗೆ ಮುಖ್ಯವಾಗುತ್ತದೆ. ಈ ಹಿಂದೆ ಆಫರ್​ಗಳು ಬಂದಾಗ ತಮ್ಮ ಪಾತ್ರಕ್ಕೆ ಪ್ರಮುಖ್ಯತೆ ಇಲ್ಲ ಎಂಬುದನ್ನು ತಿಳಿದು ಅವರು ರಿಜೆಕ್ಟ್​ ಮಾಡಿದ್ದರು. ಶಾರುಖ್​ ಖಾನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಜೊತೆ ಯಾಕೆ ಸಿನಿಮಾ ಮಾಡಿಲ್ಲ ಎಂಬುದಕ್ಕೆ ಇದೇ ಉತ್ತರ.

ಇದನ್ನೂ ಓದಿ: ರಾಹುಲ್​ ಮೋದಿ ಜೊತೆ ಶ್ರದ್ಧಾ ಕಪೂರ್​ ಬ್ರೇಕಪ್​? ನಟಿಯ ಲವ್​ ಸ್ಟೋರಿಗೆ ಪೂರ್ಣವಿರಾಮ

‘ಹಲವು ಬಾರಿ ಆಫರ್​ ಬರುತ್ತದೆ. ಆದರೆ ಆ ಪಾತ್ರ ಎಗ್ಸೈಟಿಂಗ್ ಮಾಡದಿದ್ದರೆ ಅಥವಾ ನಮ್ಮೊಳಗಿನ ಕಲಾವಿದೆಗೆ ಅದು ಚಾಲೆಂಜಿಂಗ್​ ಎನಿಸದೇ ಇದ್ದರೆ ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ. ನಾನು ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ತುಂಬ ಕಾಳಜಿ ವಹಿಸುತ್ತೇನೆ’ ಎಂದು ಶ್ರದ್ಧಾ ಕಪೂರ್​ ಅವರು ಹೇಳಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಫಾಲೋ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಶ್ರದ್ಧಾ ಕಪೂರ್​ ಅವರಿಗೆ 9.14 ಕೋಟಿ ಫಾಲೋವರ್ಸ್​ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?