AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger 3 Collection: ಎರಡೇ ದಿನಕ್ಕೆ 102 ಕೋಟಿ ರೂ. ಗಳಿಸಿದ ‘ಟೈಗರ್​ 3’; ಸಲ್ಮಾನ್​ ಖಾನ್​ ದೀಪಾವಳಿ ಧಮಾಕಾ

Salman Khan: ಮೊದಲ ದಿನವಾದ ಭಾನುವಾರ (ನವೆಂಬರ್​ 12) ‘ಟೈಗರ್​ 3’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 44.5 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಇದು ಸಲ್ಮಾನ್​ ಖಾನ್​ ಅವರ ವೃತ್ತಿ ಜೀವನದಲ್ಲೇ ಅತಿ ದೊಡ್ಡ ಓಪನಿಂಗ್​. ಎರಡನೇ ದಿನ ಈ ಸಿನಿಮಾ ಸಂಗ್ರಹಿಸಿದ್ದು ಬರೋಬ್ಬರಿ 57.52 ಕೋಟಿ ರೂಪಾಯಿ.

Tiger 3 Collection: ಎರಡೇ ದಿನಕ್ಕೆ 102 ಕೋಟಿ ರೂ. ಗಳಿಸಿದ ‘ಟೈಗರ್​ 3’; ಸಲ್ಮಾನ್​ ಖಾನ್​ ದೀಪಾವಳಿ ಧಮಾಕಾ
‘ಟೈಗರ್​ 3’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Nov 14, 2023 | 11:40 AM

Share

ಬಾಕ್ಸ್​ ಆಫೀಸ್​ನಲ್ಲಿ ‘ಟೈಗರ್​ 3’ ಸಿನಿಮಾ (Tiger 3 Movie) ಅಬ್ಬರಿಸುತ್ತಿದೆ. ಸಲ್ಮಾನ್​ ಖಾನ್ (Salman Khan) ಅವರು ಇಂಥ ಒಂದು ದೊಡ್ಡ ಗೆಲುವಿಗಾಗಿ ಕಾದಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ಈ ಸಿನಿಮಾ ನವೆಂಬರ್​ 12ರಂದು ಅದ್ದೂರಿಯಾಗಿ ತೆರೆಕಂಡಿತು. ಅಂದುಕೊಂಡ ರೀತಿಯೇ ಈ ಚಿತ್ರಕ್ಕೆ ಸಲ್ಮಾನ್​ ಖಾನ್​ ಅವರ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನ ಭರ್ಜರಿ ಓಪನಿಂಗ್​ ಪಡೆದುಕೊಂಡ ‘ಟೈಗರ್​ 3’ ಸಿನಿಮಾ ಎರಡನೇ ದಿನ ಅದಕ್ಕಿಂತಲೂ ಹೆಚ್ಚು ಕಮಾಯಿ ಮಾಡಿದೆ. ಎರಡು ದಿನಗಳಲ್ಲಿ ಈ ಸಿನಿಮಾ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ (Tiger 3 Box Office Collection) ಮಾಡಿದೆ ಎಂಬುದು ವಿಶೇಷ.

ಮೊದಲ ದಿನವಾದ ಭಾನುವಾರ (ನವೆಂಬರ್​ 12) ‘ಟೈಗರ್​ 3’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 44.5 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಇದು ಸಲ್ಮಾನ್​ ಖಾನ್​ ಅವರ ವೃತ್ತಿ ಜೀವನದಲ್ಲೇ ಅತಿ ದೊಡ್ಡ ಓಪನಿಂಗ್​. ಎರಡನೇ ದಿನ ಈ ಸಿನಿಮಾ ಸಂಗ್ರಹಿಸಿದ್ದು ಬರೋಬ್ಬರಿ 57.52 ಕೋಟಿ ರೂಪಾಯಿ! ಚಿತ್ರದ ಗಳಿಕೆಯಲ್ಲಿ ಈ ಪರಿ ಏರಿಕೆ ಕಂಡಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ಎರಡು ದಿನದ ಕಲೆಕ್ಷನ್​ ಸೇರಿಸಿದರೆ 102 ಕೋಟಿ ರೂಪಾಯಿ ಆಗಲಿದೆ. 3ನೇ ದಿನ ಕೂಡ ‘ಟೈಗರ್​’ ಸಿನಿಮಾದ ಹವಾ ಜೋರಾಗಿದೆ.

ಇದನ್ನೂ ಓದಿ: Salman Khan: ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿದವರಿಗೆ ಸಲ್ಮಾನ್​ ಖಾನ್​ ಹೇಳಿದ ಬುದ್ಧಿಮಾತು ಏನು?

ವೀಕೆಂಡ್​ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಇದೆ. ಅದನ್ನು ಎನ್​ಕ್ಯಾಶ್​ ಮಾಡಿಕೊಳ್ಳುವ ಸಲುವಾಗಿಯೇ ‘ಟೈಗರ್​ 3’ ಸಿನಿಮಾ ಈ ಸಮಯದಲ್ಲಿ ಬಿಡುಗಡೆ ಆಗಿದೆ. ಸಲ್ಮಾನ್​ ಖಾನ್​ ಅವರಿಗೆ ಪೈಪೋಟಿ ನೀಡಲು ಯಾವುದೇ ಬಿಗ್​ ಸಿನಿಮಾಗಳು ಬಿಡುಗಡೆ ಆಗಿಲ್ಲ. ಚಿತ್ರದ ಕಲೆಕ್ಷನ್​ ಹೆಚ್ಚಾಗಲು ಅದು ಕೂಡ ಸಹಕಾರಿ ಆಗಿದೆ. ಮೂರನೇ ದಿನವಾದ ಮಂಗಳವಾರ (ನವೆಂಬರ್​ 14) ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಆ ಮೂಲಕ ಚಿತ್ರದ ಬಾಕ್ಸ್​ ಆಫೀಸ್​ ಬೇಟೆ ಮುಂದುವರಿದಿದೆ.

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​ ಜತೆ ಕ್ಲ್ಯಾಶ್​ ಮಾಡಿಕೊಳ್ಳಲು ಯಾರೂ ಸಿದ್ಧರಿಲ್ಲ; ‘ಟೈಗರ್​ 3’ ಚಿತ್ರದ ಹವಾ ಇದು

‘ಟೈಗರ್​ 3’ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಜೊತೆ ನಟಿಸಿರುವ ಕತ್ರಿನಾ ಕೈಫ್​ ಕೂಡ ಆ್ಯಕ್ಷನ್​ ಮೆರೆದಿದ್ದಾರೆ. ಶಾರುಖ್​ ಖಾನ್​ ಮತ್ತು ಹೃತಿಕ್​ ರೋಷನ್​ ಅವರ ಗೆಸ್ಟ್​ ಅಪಿಯರೆನ್ಸ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಇಮ್ರಾನ್​ ಹಷ್ಮಿ ಅವರು ಈ ಸಿನಿಮಾದಲ್ಲಿ ವಿಲನ್​ ಆಗಿ ಆರ್ಭಟಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅಭಿಮಾನಿಗಳಿಗೆ ‘ಟೈಗರ್​ 3’ ಚಿತ್ರ ಸಖತ್​ ಇಷ್ಟ ಆಗಿದೆ. ‘ಜವಾನ್​’, ‘ಪಠಾಣ್​’ ಸಿನಿಮಾಗಳ ರೀತಿ ‘ಟೈಗರ್​ 3’ ಕೂಡ ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಾ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?