ಮೂರು ದಿನದಲ್ಲಿ 150 ಕೋಟಿ ರೂಪಾಯಿ ಸನಿಹಕ್ಕೆ ಬಂದ ‘ಟೈಗರ್​ 3’ ಸಿನಿಮಾ ಬಾಕ್ಸ್​ ಆಫೀಸ್​ ಕಲೆಕ್ಷನ್​

ಸಲ್ಮಾನ್​ ಖಾನ್​ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಹಾಗಾಗಿ ಮೊದಲ ದಿನ ‘ಟೈಗರ್​ 3’ ಚಿತ್ರಕ್ಕೆ ದೊಡ್ಡ ಓಪನಿಂಗ್​ ಸಿಕ್ಕಿತು. ಎರಡನೇ ದಿನ ಚಿತ್ರದ ಕಲೆಕ್ಷನ್​ ಇನ್ನಷ್ಟು ಹೆಚ್ಚಾಯಿತು. ಗಲ್ಲಾ ಪೆಟ್ಟಿಗೆಯಲ್ಲಿ ಮೂರನೇ ದಿನ ಕೂಡ ಈ ಸಿನಿಮಾದ ನಾಗಾಲೋಟ ಮುಂದುವರಿದಿದೆ. ಮೂರು ದಿನಗಳ ಕಲೆಕ್ಷನ್​ ರಿಪೋರ್ಟ್​ ಇಲ್ಲಿದೆ..

ಮೂರು ದಿನದಲ್ಲಿ 150 ಕೋಟಿ ರೂಪಾಯಿ ಸನಿಹಕ್ಕೆ ಬಂದ ‘ಟೈಗರ್​ 3’ ಸಿನಿಮಾ ಬಾಕ್ಸ್​ ಆಫೀಸ್​ ಕಲೆಕ್ಷನ್​
ಸಲ್ಮಾನ್​ ಖಾನ್​, ಕತ್ರಿನಾ ಕೈಫ್​
Follow us
ಮದನ್​ ಕುಮಾರ್​
|

Updated on: Nov 15, 2023 | 11:19 AM

ನಟ ಸಲ್ಮಾನ್​ ಖಾನ್​ (Salman Khan) ಅವರು ಖುಷಿಯ ಅಲೆಯಲ್ಲಿ ತೇಲುತ್ತಿದ್ದಾರೆ. ಆ ಖುಷಿಗೆ ಕಾರಣ ಆಗಿರುವುದು ‘ಟೈಗರ್​ 3’ (Tiger 3) ಸಿನಿಮಾದ ಗೆಲುವು. ನವೆಂಬರ್​ 12ರಂದು ಬಿಡುಗಡೆ ಆದ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಸಲ್ಮಾನ್​ ಖಾನ್​ ಅವರ ಅಭಿಮಾನಿಗಳು ಈ ಸಿನಿಮಾವನ್ನು ಸಖತ್​ ಇಷ್ಟಪಟ್ಟಿದ್ದಾರೆ. ಅದರ ಪರಿಣಾಮವಾಗಿ ಅನೇಕ ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಮೊದಲ ಮೂರು ದಿನಗಳ ಕಾಲ ಉತ್ತಮವಾಗಿ ಪ್ರದರ್ಶನ ಕಂಡ ‘ಟೈಗರ್​ 3’ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್ (Tiger 3 Box Office Collection)​ 150 ಕೋಟಿ ರೂಪಾಯಿಯ ಸನಿಹದಲ್ಲಿದೆ. ಮುಂದಿನ ದಿನಗಳಲ್ಲೂ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಸಲ್ಮಾನ್​ ಖಾನ್​ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಹಾಗಾಗಿ ಮೊದಲ ದಿನ ‘ಟೈಗರ್​ 3’ ಚಿತ್ರಕ್ಕೆ ದೊಡ್ಡ ಓಪನಿಂಗ್​ ಸಿಕ್ಕಿತು. ನ.12ರಂದು ಈ ಸಿನಿಮಾ ಮಾಡಿದ್ದು ಬರೋಬ್ಬರಿ 44.50 ಕೋಟಿ ರೂಪಾಯಿ. ನಂತರ ಎರಡನೇ ದಿನ 59 ಕೋಟಿ ರೂಪಾಯಿ ಆದಾಯ ಹರಿದುಬಂತು. ಮೂರನೇ ದಿನ 42.50 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿಗೆ ಈ ಸಿನಿಮಾದ ಒಟ್ಟು ಕಲೆಕ್ಷನ್​ ಮೂರೇ ದಿನದಲ್ಲಿ 145 ಕೋಟಿ ರೂಪಾಯಿ ಮೀರಿದೆ. 150 ಕೋಟಿ ರೂಪಾಯಿ ಗಡಿಮುಟ್ಟಲು ‘ಟೈಗರ್​ 3’ ಚಿತ್ರ ಸಜ್ಜಾಗಿದೆ.

ಇದನ್ನೂ ಓದಿ: Salman Khan: ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿದವರಿಗೆ ಸಲ್ಮಾನ್​ ಖಾನ್​ ಹೇಳಿದ ಬುದ್ಧಿಮಾತು ಏನು?

ಸಲ್ಮಾನ್​ ಖಾನ್​, ಕತ್ರಿನಾ ಕೈಫ್​, ಶಾರುಖ್​ ಖಾನ್​, ಇಮ್ರಾನ್​ ಹಷ್ಮಿ, ಹೃತಿಕ್​ ರೋಷನ್​ ಮುಂತಾದವರು ‘ಟೈಗರ್​ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಮನೀಶ್​ ಶರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆ ಮೂಲಕ ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ. ಬೇರೆ ಬೇರೆ ದೇಶಗಳ ಹಲವು ಲೊಕೇಷನ್​ಗಳಲ್ಲಿ ಆ್ಯಕ್ಷನ್​ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ರಿಚ್​ ಆಗಿರುವ ಮೇಕಿಂಗ್​ ಕಂಡು ಫ್ಯಾನ್ಸ್​ ವಾವ್​ ಎನ್ನುತ್ತಿದ್ದಾರೆ. ಈ ಸಿನಿಮಾದಿಂದ ಸಲ್ಮಾನ್​ ಖಾನ್​ ಅವರ ಜನಪ್ರಿಯತೆ ಹೆಚ್ಚಾಗಿದೆ.

ಇದನ್ನೂ ಓದಿ: Tiger 3: ಸಲ್ಮಾನ್ ಖಾನ್ ಮೇಲಿನ ಭಯಕ್ಕೆ ಕದ್ದುಮುಚ್ಚಿ ‘ಟೈಗರ್ 3’ ನೋಡಿದ ಅರ್ಜುನ್ ಕಪೂರ್?

‘ಟೈಗರ್​ 3’ ಸಿನಿಮಾವನ್ನು ಅಭಿಮಾನಿಗಳು ಗ್ರ್ಯಾಂಡ್​ ಆಗಿ ಸ್ವಾಗತಿಸಿದ್ದಾರೆ. ಮೊದಲ ದಿನ ಚಿತ್ರಮಂದಿರದಲ್ಲಿ ಪಟಾಕಿ ಹೊಡೆದ ಘಟನೆ ಕೂಡ ನಡೆದಿತ್ತು. ಅದನ್ನು ಸಲ್ಮಾನ್​ ಖಾನ್​ ಅವರು ಖಂಡಿಸಿದ್ದರು. 2023ರಲ್ಲಿ ಬಾಲಿವುಡ್​ ಹೀರೋಗಳು ಬಾಕ್ಸ್​ ಆಫೀಸ್​ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ‘ಜವಾನ್​’, ‘ಪಠಾಣ್​’ ಚಿತ್ರಗಳು ವಿಶ್ವ ಬಾಕ್ಸ್​ ಆಫೀಸ್​ನಲ್ಲಿ 1000 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿವೆ. ‘ಟೈಗರ್​ 3’ ಕೂಡ ಅದೇ ರೀತಿ ಮೈಲಿಗಲ್ಲು ಸಾಧಿಸಲಿ ಎಂದು ಸಲ್ಮಾನ್​ ಖಾನ್​ ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ