AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಬರಲಿದೆ ‘ಟೈಗರ್ 3’: ಕನ್ನಡ ಪ್ರೇಕ್ಷಕರನ್ನು ನಿರಾಸೆಗೊಳಿಸಿದ ಸಲ್ಮಾನ್ ಖಾನ್

Tiger 3: ಸಲ್ಮಾನ್ ಖಾನ್ ಸಿನಿಮಾಗಳು ಸತತ ಸೋಲು ಕಾಣುತ್ತಿವೆ. ಬಿಗ್ ಹಿಟ್ ಮೂಲಕ ಕಮ್ ಬ್ಯಾಕ್ ಮಾಡುವ ಅನಿವಾರ್ಯತೆ ಸಲ್ಮಾನ್ಗೆ ಇದೆ. ಹಲವು ನಿರೀಕ್ಷೆಗಳನ್ನು ಹುಟ್ಟಿಸಿದ್ದ ‘ಟೈಗರ್ 3’ ಸಿನಿಮಾದ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗುತ್ತಿಲ್ಲ ಎನ್ನುವ ವಿಚಾರ ಕೇಳಿ ಕನ್ನಡಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ದೀಪಾವಳಿಗೆ ಬರಲಿದೆ ‘ಟೈಗರ್ 3’: ಕನ್ನಡ ಪ್ರೇಕ್ಷಕರನ್ನು ನಿರಾಸೆಗೊಳಿಸಿದ ಸಲ್ಮಾನ್ ಖಾನ್
ಟೈಗರ್ 3
TV9 Web
| Updated By: ಮಂಜುನಾಥ ಸಿ.|

Updated on: Sep 02, 2023 | 4:17 PM

Share

ಸಲ್ಮಾನ್ ಖಾನ್ (Salman Khan) ಸಾಲು ಸಾಲು ಸಿನಿಮಾಗಳು ಸೋಲು ಕಾಣುತ್ತಿವೆ. ಬಿಗ್ ಬಜೆಟ್ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ನೆಲಕಚ್ಚುತ್ತಿವೆ. ಇತ್ತೀಚೆಗೆ ರಿಲೀಸ್ ಆದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಯಶಸ್ಸು ಕಾಣಲಿಲ್ಲ. ಸತತ ಸೋಲು ಕಾಣುತ್ತಿರುವ ಸಲ್ಮಾನ್ಗೆ ಒಂದು ಗೆಲುವು ಬೇಕಿದೆ. ‘ಟೈಗರ್ 3’  (Tiger 3) ಚಿತ್ರದ ಮೂಲಕ ಅವರು ಗೆಲುವಿನ ಟ್ರ್ಯಾಕ್ಗೆ ಮರಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಸಿನಿಮಾದ ರಿಲೀಸ್ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದರು. ಈಗ ಅದಕ್ಕೆ ಉತ್ತರ ಸಿಕ್ಕಿದೆ.

‘ಟೈಗರ್ 3’ ಚಿತ್ರದಲ್ಲಿ ಸಲ್ಮಾನ್ಗೆ ಜೋಡಿಯಾಗಿ ಕತ್ರಿನಾ ಕೈಫ್ ನಟಿಸಿದ್ದಾರೆ. ಚಿತ್ರದ ಹೊಸ ಪೋಸ್ಟರ್ ಇಂದು (ಸೆಪ್ಟೆಂಬರ್ 2) ಬಿಡುಗಡೆಯಾಗಿದೆ. ಪೋಸ್ಟರ್ನಲ್ಲಿ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗಿದೆ. ಹಬ್ಬದ ದಿನದಂದು ಸಿನಿಮಾ ರಿಲೀಸ್ ಮಾಡಲು ಸಲ್ಮಾನ್ ಖಾನ್ ಹೆಚ್ಚು ಆಸಕ್ತಿ ತೋರಿಸುತ್ತಾರೆ. ಈದ್, ದೀಪಾವಳಿ ಹಬ್ಬವನ್ನು ಅವರು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಬಾರಿಯೂ ಅವರು ಸಂಪ್ರದಾಯ ಮುಂದುವರಿಸಿಕೊಂಡು ಹೋಗಿದ್ದಾರೆ. ಈ ದೀಪಾವಳಿಗೆ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ:ಕೋಟ್ಯಂತರ ರೂಪಾಯಿ ಸಂಭಾವನೆ ಪಡೆವ ಸಲ್ಮಾನ್ ಖಾನ್ ಮೊದಲ ಸಂಬಳ ಎಷ್ಟು ಗೊತ್ತೆ?

ಶಾರುಖ್ ಖಾನ್ ಅಭಿನಯದ ‘ಪಠಾಣ್’ ಸಿನಿಮಾದಲ್ಲಿ ಸಲ್ಮಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅದೇ ರೀತಿ ಶಾರುಖ್ ‘ಟೈಗರ್ 3’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸತತ ಹಿನ್ನಡೆ ಅನುಭವಿಸಿರುವ ಸಲ್ಮಾನ್ಗೆ ಈ ಸಿನಿಮಾದ ಯಶಸ್ಸು ಅತ್ಯಂತ ಅವಶ್ಯವಾಗಿದೆ. ಶಾರುಖ್ ಚಿತ್ರದಲ್ಲಿ ನಟಿಸುತ್ತಿರುವುದರಿಂದ ಸಿನಿಮಾಗೆ ಹೆಚ್ಚು ಮೈಲೇಜ್ ಸಿಗುವ ನಿರೀಕ್ಷೆ ಇದೆ.

ಸಿನಿಮಾ ಯಾವ ಭಾಷೆಗಳಲ್ಲಿ ಮೂಡಿಬರಲಿದೆ ಎಂಬುದನ್ನು ಪೋಸ್ಟರ್ನಲ್ಲಿ ಮಾಹಿತಿ ನೀಡಲಾಗಿದೆ. ಈ ಸಿನಿಮಾ ಹಿಂದಿ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಡಬ್ ಆಗಿ ಸಿನಿಮಾ ರಿಲೀಸ್ ಆಗುತ್ತಿಲ್ಲ. ಇದಕ್ಕೆ ಕನ್ನಡ ಪ್ರೇಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ. ‘ಟೈಗರ್ 3’ ಚಿತ್ರಕ್ಕೆ ಮನೀಶ್ ಶರ್ಮಾ ನಿರ್ದೇಶನ ಇದೆ. ಯಶ್ ರಾಜ್ ಫಿಲ್ಮ್ಸ್ ಮೂಲಕ ಆದಿತ್ಯಾ ಚೊಪ್ರಾ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಜವಾನ್’ ಸಿನಿಮಾದ ಜೊತೆ ‘ಟೈಗರ್ 3’ ಚಿತ್ರದ ಟೀಸರ್ ಅಟ್ಯಾಚ್ ಆಗಿ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ