AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿನ ದಾಳಿ ವೇಳೆ ಟೈಗರ್ ಶ್ರಾಫ್ ಕೈಗೆ ಗಾಯ? ವಿಡಿಯೋ ವೈರಲ್

ಮುಂಬೈನ ಜುಹೂ ಪ್ರದೇಶದಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಟನ ಚಾಲಕ ಹಾಗೂ ಆಟೋ ಚಾಲಕ ಗಾಯಗೊಂಡಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೃತ್ಯದ ಹೊಣೆ ಹೊತ್ತಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಗುಂಡಿನ ದಾಳಿ ವೇಳೆ ಟೈಗರ್ ಶ್ರಾಫ್ ಕೈಗೆ ಗಾಯ? ವಿಡಿಯೋ ವೈರಲ್
ಟೈಗರ್
ರಾಜೇಶ್ ದುಗ್ಗುಮನೆ
|

Updated on:Oct 19, 2026 | 7:05 AM

Share

ಮುಖ್ಯಾಂಶಗಳು

  • ಮುಂಬೈ ಜುಹೂವಿನಲ್ಲಿ ಸಂಭವಿಸಿದ ಬೆಚ್ಚ ಬೀಳಿಸುವ ಘಟನೆ
  • ಕೈಗೆ ಬ್ಯಾಂಡೇಜ್, ಮುಖ ಮುಚ್ಚಿಕೊಂಡ ಟೈಗರ್ ಶ್ರಾಫ್
  • ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡದ ಶಂಕೆ

ಮುಂಬೈನ ಜುಹೂ ಪ್ರದೇಶದಲ್ಲಿ ನಡೆದ ಫೈರಿಂಗ್ ಘಟನೆಯ ಬಳಿಕ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೊದಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫುಟ್‌ಬಾಲ್ ಆಡಿ ಮರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಕಾರಿನ ಮೇಲೆ ಗುಂಡು ಹಾರಿಸಿದ್ದರು. ಈ ಭಯಾನಕ ಘಟನೆಯ ನಂತರ ನಟ ಮುಂಬೈ ಪೊಲೀಸರ ವಾಹನದಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ವಿಡಿಯೋದಲ್ಲಿ ಟೈಗರ್ ಶ್ರಾಫ್ ಹಸಿರು ಬಣ್ಣದ ಟಿ-ಶರ್ಟ್ ಧರಿಸಿದ್ದಾರೆ. ಅವರ ಬಲಗೈಗೆ ಬ್ಯಾಂಡೇಜ್ ಹಾಕಲಾಗಿದೆ. ಮುಖವನ್ನು ಕ್ಯಾಮೆರಾಗಳ ಕಣ್ಣಿಗೆ ಸಿಗದಂತೆ ಮರೆಮಾಚಲು ಅವರು ಪ್ರಯತ್ನಿಸಿದ್ದಾರೆ. ಪೋಲಿಸರ ಭದ್ರತೆಯಲ್ಲಿರುವ ಅವರು, ಫೋನ್‌ನಲ್ಲಿ ಮಾತನಾಡುತ್ತಾ ತಮ್ಮ ಮುಖವನ್ನು ಮರೆಮಾಡಿಕೊಂಡಿದ್ದಾರೆ. ಅವರ ಕೈಗೆ ಗುಂಡೇಟು ತಗುಲಿರಬಹುದು ಎಂದು ಊಹಿಸಲಾಗಿದೆ.

ಈ ಭೀಕರ ದಾಳಿಯಲ್ಲಿ ನಟನ ಚಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಈ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ.

ಈ ಘಟನೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ. ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುವವರ ಮೇಲೆ ದಾಳಿ ನಡೆಸಲಾಗುತ್ತಿದೆ ಎನ್ನಲಾಗಿದೆ. ಬಾಲಿವುಡ್ ಸೆಲೆಬ್ರಿಟಿಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳ ಬಗ್ಗೆ ಆಲ್ ಇಂಡಿಯನ್ ಸಿನಿ ವರ್ಕರ್ಸ್ ಅಸೋಸಿಯೇಷನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಅಪರಾಧಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ನಟ ಸುರಕ್ಷಿತವಾಗಿದ್ದು, ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಏಕ್​ನಾಥ್ ಶಿಂಧೆ ಹೇಳಿಕೆ

ಬಾಲಿವುಡ್ ನಟ ಟೈಗರ್ ಶ್ರಾಫ್ ನಿವಾಸಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಭೇಟಿ ನೀಡಿ, ನಡೆದ ಘಟನೆಯ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ‘ನಟನ ಕಾರಿನ ಮೇಲೆ ಐದು ಸುತ್ತು ಗುಂಡು ಹಾರಿಸಲಾಗಿದ್ದು, ಅದೃಷ್ಟವಶಾತ್ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಈ ಘಟನೆಯಲ್ಲಿ ಬುಲೆಟ್ ಹಾಗೂ ಗಾಜಿನ ತುಣುಕುಗಳು ತಗುಲಿ ಅವರ ಕಾರು ಚಾಲಕರ ಎಡಗೈಗೆ ಗಾಯವಾಗಿದೆ. ಈ ಭೀಕರ ಘಟನೆಯ ಬಳಿಕ ನಟ ಟೈಗರ್ ಶ್ರಾಫ್ ಹಾಗೂ ಅವರ ತಾಯಿ ತೀವ್ರ ಆಘಾತಕ್ಕೊಳಗಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಫೈರಿಂಗ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

‘ಇಂತಹ ಕೃತ್ಯಗಳು ಅತ್ಯಂತ ಖಂಡನೀಯವಾಗಿದ್ದು, ಸಾರ್ವಜನಿಕರನ್ನು ಬೆದರಿಸುವ ಯಾವುದೇ ರೀತಿಯ ಬೆದರಿಕೆಗಳನ್ನು ಅಥವಾ ಗೂಂಡಾಗಿರಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ. ರಾಜ್ಯದಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ’ ಡಿಸಿಎಂ ಏಕನಾಥ್ ಶಿಂಧೆ ದೃಢವಾದ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Mon, 19 October 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ