
ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆ ಕ್ಷಣದ ಭೀಕರ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಘಟನೆಯಲ್ಲಿ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಜುಹುವಿನ ಪುಷ್ಪಾ ಪಾರ್ಕ್ ಗ್ರೌಂಡ್‌ನಲ್ಲಿ ಟೈಗರ್ ಶ್ರಾಫ್ ಫುಟ್‌ಬಾಲ್ ಆಡಲು ಹೋಗಿದ್ದರು. ಆಟ ಮುಗಿಸಿ ಕಾರಿನಲ್ಲಿ ವಾಪಸ್ ಹೊರಡುವಾಗ ಈ ದಾಳಿ ನಡೆದಿದೆ. ಈ ವೇಳೆ ಸತತ ಐದು ಬಾರಿ ಗುಂಡು ಹಾರಿಸಿದ ಭೀಕರ ಶಬ್ದ ಕೇಳಿಸಿದೆ. ರೆಡ್ಡಿಟ್‌ನಲ್ಲಿ ಈ ವಿಡಿಯೋ ಪ್ರತ್ಯಕ್ಷವಾಗಿದ್ದು, ಭಾರಿ ಸದ್ದು ಮಾಡುತ್ತಿದೆ.
ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು ಏಕಾಏಕಿ ಕಾರಿನತ್ತ ಫೈರಿಂಗ್ ಮಾಡಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿದ್ದ ಜನ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಆದರೆ ಈ ವಿಡಿಯೋದ ಸತ್ಯಾಸತ್ಯತೆಯನ್ನು ಪೊಲೀಸರು ಇನ್ನು ಅಧಿಕೃತವಾಗಿ ಖಚಿತಪಡಿಸಿಲ್ಲ. ಈ ಬಗ್ಗೆ ಜುಹು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Inframe: Tiger Shroff Shot at near Juhu
by
u/Geostorm009 in
InstaCelebsGossip
ಮತ್ತೊಂದೆಡೆ ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಹಿಸಿಕೊಂಡಿದೆ ಎನ್ನಲಾಗಿದೆ. ಗ್ಯಾಂಗ್‌ಸ್ಟರ್ ಅನಿಲ್ ಪಂಡಿತ್ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾನೆ. ಈ ಪೋಸ್ಟ್ ನಿಜವೋ ಅಥವಾ ಸುಳ್ಳೋ ಎಂಬುದನ್ನು ಮುಂಬೈ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ
ಅಷ್ಟಕ್ಕೂ ಈ ಭೀಕರ ದಾಳಿಯಲ್ಲಿ ಟೈಗರ್ ಶ್ರಾಫ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ನಟ ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ. ಆದರೆ ಅವರ ಕಾರು ಚಾಲಕ ಹಾಗೂ ಪಕ್ಕದಲ್ಲಿದ್ದ ಆಟೋ ಚಾಲಕನಿಗೆ ಗಾಯಗಳಾಗಿವೆ. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.