AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಗರ್ ಶ್ರಾಫ್​ಗೆ ಗಾಯವೇ ಆಗಿಲ್ಲ ಎಂದು ಟೀಕಿಸಿದವರಿಗೆ ಪ್ರೂಫ್ ಕೊಟ್ಟ ತಂಡ

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಹೊಸ ವಿಡಿಯೋ ರಿಲೀಸ್ ಆಗಿದೆ. ಕೈಯ ಮೇಲಿನ ಗಾಯದ ಗುರುತುಗಳನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಅನುಮಾನಗಳಿಗೆ ಈಗ ಅವರ ತಂಡದವರು ಸ್ಪಷ್ಟನೆ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಟೈಗರ್ ಶ್ರಾಫ್​ಗೆ ಗಾಯವೇ ಆಗಿಲ್ಲ ಎಂದು ಟೀಕಿಸಿದವರಿಗೆ ಪ್ರೂಫ್ ಕೊಟ್ಟ ತಂಡ
ಟೈಗರ್
ರಾಜೇಶ್ ದುಗ್ಗುಮನೆ
|

Updated on: Oct 23, 2026 | 7:03 AM

Share

ಮುಖ್ಯಾಂಶಗಳು

  • ಅನುಮಾನಗಳಿಗೆ ತೆರೆ ಎಳೆದ ಟೈಗರ್ ತಂಡ
  • ವೈರಲ್ ಆದ ಗಾಯದ ವಿಡಿಯೋ ವೈರಲ್
  • ತೀವ್ರಗೊಂಡ ಪೊಲೀಸ್ ತನಿಖೆ 

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಕೆಲವರು ಇದನ್ನು ಫೇಕ್ ದಾಳಿ ಎಂದು ಕರೆದರೆ, ಇನ್ನೂ ಕೆಲವರು ಇದು ರಿಯಲ್ ಎಂದಿದ್ದಾರೆ. ಈಗ ಟೈಗರ್ ಶ್ರಾಫ್ ತಂಡ ನಟನ ಕೈಯ ಮೇಲಾಗಿರುವ ಗಾಯದ ಗುರುತುಗಳನ್ನು ವಿಡಿಯೋ ಹಂಚಿಕೊಂಡಿದೆ. ದೇವರ ಕೃಪೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದೇವೆ ಎಂದು ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ದಾಳಿಯ ನಂತರ ಟೈಗರ್ ಕೈಗೆ ದೊಡ್ಡ ಬ್ಯಾಂಡೇಜ್ ಹಾಕಲಾಗಿತ್ತು. ಆದರೆ, ಕೆಲವೇ ದಿನಗಳಲ್ಲಿ ಯಾವುದೇ ಗಾಯಗಳಿಲ್ಲದೆ ಅವರು ಕಾಣಿಸಿಕೊಂಡಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದು ನಕಲಿ ದಾಳಿ ಎಂದು ಕೆಲವರು ಟೀಕಿಸಿದ್ದರು. ಈಗ ಗಾಯದ ಗುರುತುಗಳಿರುವ ವಿಡಿಯೋ ಹಂಚಿಕೊಳ್ಳುವ ಮೂಲಕ ಈ ಎಲ್ಲಾ ಚರ್ಚೆಗಳಿಗೆ ಸ್ಪಷ್ಟನೆ ನೀಡಲಾಗಿದೆ.

ಮುಂಬೈನ ಜುಹು ಪ್ರದೇಶದಲ್ಲಿ ಅಕ್ಟೋಬರ್ 18ರಂದು ಈ ಘಟನೆ ನಡೆದಿತ್ತು. ಫುಟ್‌ಬಾಲ್ ಆಟ ಮುಗಿಸಿ ವಾಪಸ್ ಬರುವಾಗ ನಟನ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಕಾರಿನ ಮೇಲೆ ಐದು ಗುಂಡುಗಳು ಬಿದ್ದಿದ್ದವು. ಅದೃಷ್ಟವಶಾತ್ ಟೈಗರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಡ್ರೈವರ್ ಹಾಗೂ ಮತ್ತೊಬ್ಬರಿಗೆ ಗಾಯಗಳಾಗಿವೆ.

ಇದನ್ನೂ ಓದಿ: ಟೈಗರ್ ಶ್ರಾಫ್ ದಾಳಿಕೋರರಿಂದ ರಣ್​​ಬೀರ್ ಕಪೂರ್ ಮೇಲೂ ದಾಳಿಗೆ ಸಂಚು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಒಟ್ಟು 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ರಾಜಸ್ಥಾನದ ಕೋಟಾದಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಸ್ತ್ರಾಸ್ತ್ರಗಳನ್ನು ಪೂರೈಸಿದ ಜಾಲದ ಬಗ್ಗೆಯೂ ಭರ್ಜರಿ ತನಿಖೆ ನಡೆಯುತ್ತಿದೆ.

ಬಾಲಿವುಡ್ ಸೆಲೆಬ್ರಿಟಿಗಳ ಮೇಲೆ ಇಂತಹ ದಾಳಿಗಳು ನಡೆಯುತ್ತಿರುವುದು ಆತಂಕ ಮೂಡಿಸಿದೆ. ಈ ಹಿಂದೆ ಸಲ್ಮಾನ್ ಖಾನ್ ಮತ್ತು ರೋಹಿತ್ ಶೆಟ್ಟಿ ಮನೆಗಳ ಮೇಲೂ ಗುಂಡಿನ ದಾಳಿ ನಡೆದಿತ್ತು. ಈಗ ಟೈಗರ್ ಶ್ರಾಫ್ ಮೇಲೆ ನಡೆದ ದಾಳಿಯು ಚಿತ್ರರಂಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ