AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿನ ದಾಳಿ ಘಟನೆ ಬಳಿಕ ಮುಂಬೈನ ಫ್ಲಾಟ್‌ ಮಾರಾಟ ಮಾಡಿದ ನಟ ಟೈಗರ್ ಶ್ರಾಫ್

ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಇತ್ತೀಚೆಗೆ ಗುಂಡಿನ ದಾಳಿ ಮಾಡಲಾಗಿತ್ತು. ಆ ಘಟನೆಯಿಂದ ಸೆಲೆಬ್ರಿಟಿಗಳಿಗೆ, ಕುಟುಂಬದವರಿಗೆ, ಅಭಿಮಾನಿಗಳಿಗೆ ತೀವ್ರ ಆತಂಕ ಆಗಿತ್ತು. ಈ ನಡುವೆ ಟೈಗರ್ ಶ್ರಾಫ್ ಬಗ್ಗೆ ಇನ್ನೊಂದು ಸುದ್ದಿ ಕೇಳಿಬಂದಿದೆ. ಮುಂಬೈನಲ್ಲಿರುವ ತಮ್ಮ ಅಪಾರ್ಟ್‌ಮೆಂಟ್ ಅನ್ನು ಅವರು ಮಾರಾಟ ಮಾಡಿದ್ದಾರೆ.

ಗುಂಡಿನ ದಾಳಿ ಘಟನೆ ಬಳಿಕ ಮುಂಬೈನ ಫ್ಲಾಟ್‌ ಮಾರಾಟ ಮಾಡಿದ ನಟ ಟೈಗರ್ ಶ್ರಾಫ್
Tiger ShroffImage Credit source: Instagram/tigerjackieshroff
ಮದನ್​ ಕುಮಾರ್​
|

Updated on: Oct 25, 2026 | 8:05 AM

Share

ಬಾಲಿವುಡ್‌ನ ಜನಪ್ರಿಯ ನಟ ಟೈಗರ್ ಶ್ರಾಫ್ ಅವರು ಮುಂಬೈನ ಖಾರ್ ವೆಸ್ಟ್‌ನಲ್ಲಿರುವ ತಮ್ಮ ಐಷಾರಾಮಿ ಅಪಾರ್ಟ್‌ಮೆಂಟ್ ಅನ್ನು 9 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಡೇಟಾ ವಿಶ್ಲೇಷಣಾ ಸಂಸ್ಥೆ ‘ಸಿಆರ್‌ಇ ಮ್ಯಾಟ್ರಿಕ್ಸ್’ ಹಂಚಿಕೊಂಡಿರುವ ಆಸ್ತಿ ನೋಂದಣಿ ದಾಖಲೆಗಳಿಂದ ಈ ಮಾಹಿತಿ ಸಿಕ್ಕಿದೆ. ಇತ್ತೀಚೆಗಷ್ಟೇ, ಅಂದರೆ ಅಕ್ಟೋಬರ್ 18ರಂದು ಮುಂಬೈನ ಜುಹು ಪ್ರದೇಶದಲ್ಲಿ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿತ್ತು. ಈ ಭೀಕರ ಘಟನೆಯ ಬೆನ್ನಲ್ಲೇ ಆಸ್ತಿ ಮಾರಾಟದ ಸುದ್ದಿ ಹೊರಬಿದ್ದಿದೆ.

ದಾಖಲೆಗಳ ಪ್ರಕಾರ, ಈ ಅಪಾರ್ಟ್‌ಮೆಂಟ್ ಖಾರ್ ವೆಸ್ಟ್‌ನ ‘ರುಸ್ತುಮ್‌ಜಿ ಪ್ಯಾರಾಮೌಂಟ್ ಡಿ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿ’ಯ 9ನೇ ಮಹಡಿಯಲ್ಲಿದೆ. ಇದರಲ್ಲಿ 1,291.14 ಚದರ ಅಡಿ ಕಾರ್ಪೆಟ್ ಏರಿಯಾ ಇದೆ. 95.80 ಚದರ ಅಡಿ ವಿಶೇಷ ಜಾಗವಿದೆ. ಪ್ರತಿ ಚದರ ಅಡಿಗೆ ಸುಮಾರು 64,891 ರೂಪಾಯಿ ಬೆಲೆ ಇದೆ. 54 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಲಾಗಿದೆ. 2 ಕವರ್ಡ್ ಕಾರ್ ಪಾರ್ಕಿಂಗ್ ಜಾಗಗಳನ್ನು ಒಳಗೊಂಡಿದೆ.

ಈ ವ್ಯವಹಾರವು ಅಕ್ಟೋಬರ್ 22ರಂದು ಅಧಿಕೃತವಾಗಿ ನೋಂದಣಿಯಾಗಿದೆ. ಟೈಗರ್ ಶ್ರಾಫ್ ಅವರು 2018ರ ಜುಲೈ 17ರಂದು ‘ಕೀಸ್ಟೋನ್ ರಿಯಾಲ್ಟರ್ಸ್ ಪ್ರೈವೇಟ್ ಲಿಮಿಟೆಡ್’ ಡೆವಲಪರ್‌ಗಳಿಂದ 7.61 ಕೋಟಿ ರೂಪಾಯಿಗೆ ಈ ಫ್ಲಾಟ್ ಖರೀದಿಸಿದ್ದರು.

ಟೈಗರ್ ಶ್ರಾಫ್ ಇದೇ ಕಟ್ಟಡದಲ್ಲಿ ಆಸ್ತಿ ಮಾರಾಟ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಅವರು ಇದೇ ಯೋಜನೆಯ 22ನೇ ಮಹಡಿಯಲ್ಲಿದ್ದ ಮತ್ತೊಂದು ಅಪಾರ್ಟ್‌ಮೆಂಟ್ ಅನ್ನು 15.6 ಕೋಟಿ ರೂಪಾಯಿಗೆ ಮಾರಾಟ ಮಾಡಿ ಸುಮಾರು ಶೇಕಡ 31ರಷ್ಟು ಲಾಭಗಳಿಸಿದ್ದರು. ಆ ಫ್ಲಾಟ್ 1,989.72 ಚದರ ಅಡಿ ಕಾರ್ಪೆಟ್ ಏರಿಯಾ ಹಾಗೂ 2,189 ಚದರ ಅಡಿ ಬಿಲ್ಟ್-ಅಪ್ ಏರಿಯಾ ಹೊಂದಿತ್ತು. ಅದನ್ನು 2018ರಲ್ಲಿ 11.62 ಕೋಟಿ ರೂಪಾಯಿಗೆ ಖರೀದಿಸಲಾಗಿತ್ತು.

ಇದನ್ನೂ ಓದಿ: ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಎಐ ವಿಡಿಯೋ, ಸುಳ್ಳು ಮಾಹಿತಿ ವಿರುದ್ಧ ಎಚ್ಚರಿಕೆ

ಗುಂಡಿನ ದಾಳಿಯ ಆತಂಕದ ನಡುವೆ ನಿರ್ಧಾರ: ಅಕ್ಟೋಬರ್ 18ರ ಸಾಯಂಕಾಲ ಜುಹು ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಈ ಘಟನೆಯಲ್ಲಿ ಟೈಗರ್ ಶ್ರಾಫ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದರೂ, ಅವರ ಚಾಲಕ ಮತ್ತು ಹತ್ತಿರದಲ್ಲಿದ್ದ ಸಾರ್ವಜನಿಕರೊಬ್ಬರು ಗಾಯಗೊಂಡಿದ್ದರು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಫ್ಲಾಟ್ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ