AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದುರು-ಬದಲಾಗಲಿದ್ದಾರೆ ಶಾರುಖ್-ಸಲ್ಮಾನ್, ಗೆಲುವು ಯಾರಿಗೆ?

Shah Rukh Khan: ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಭಾರತದ ಬಲು ದೊಡ್ಡ ಸ್ಟಾರ್ ನಟರು. ಈ ಇಬ್ಬರನ್ನು ಒಂದೇ ಸಿನಿಮಾನಲ್ಲಿ ನಟಿಸುವಂತೆ ಮಾಡುವುದು ಸುಲಭದ ಕೆಲಸವಲ್ಲ. ಭಾರಿ ದೊಡ್ಡ ಬಜೆಟ್ ಅದಕ್ಕೆ ಬೇಕಾಗುತ್ತದೆ. ಇದೀಗ ಯಶ್ ರಾಜ್ ಫಿಲಮ್ಸ್ ಇಂಥಹದ್ದೊಂದು ಸಾಹಸಕ್ಕೆ ಕೈ ಹಾಕಿದೆ. ‘ಪಠಾಣ್ vs ಟೈಗರ್’ ಸಿನಿಮಾ ಯೋಜನೆ ಚಾಲ್ತಿಯಲ್ಲಿದೆ.

ಎದುರು-ಬದಲಾಗಲಿದ್ದಾರೆ ಶಾರುಖ್-ಸಲ್ಮಾನ್, ಗೆಲುವು ಯಾರಿಗೆ?
Salman Khan Srk
ಮಂಜುನಾಥ ಸಿ.
|

Updated on: Jun 13, 2025 | 6:05 PM

Share

ಖಾನ್​ ತ್ರಯರು ಒಬ್ಬರ ಸಿನಿಮಾನಲ್ಲಿ ಮತ್ತೊಬ್ಬರು ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಸಾಮಾನ್ಯ. ಆಮಿರ್ ಖಾನ್ ಇತರರ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಸಲ್ಮಾನ್ ಮತ್ತು ಶಾರುಖ್ ಖಾನ್, ಪರಸ್ಪರರ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಲೇ ಬರುತ್ತಿದ್ದಾರೆ. ದಶಕಗಳಿಂದಲೂ ಇಬ್ಬರ ನಡುವೆ ಬಾಂಧವ್ಯ ಚೆನ್ನಾಗಿದ್ದು, ದಶಕಗಳಿಂದಲೂ ಪರಸ್ಪರರ ಸಿನಿಮಾಗಳಲ್ಲಿ ಕ್ಯಾಮಿಯೋ ಮಾಡುತ್ತಲೇ ಬರುತ್ತಿದ್ದಾರೆ.

ಆದರೆ ಇದೀಗ ಸಲ್ಮಾನ್ ಮತ್ತು ಶಾರುಖ್ ಖಾನ್ ಸಿನಿಮಾನಲ್ಲಿ ಪರಸ್ಪರ ಮುಖಾ-ಮುಖಿ ಆಗಲಿದ್ದಾರೆ. ಸಲ್ಮಾನ್ ಖಾನ್ ಟೈಗರ್ ಸಿನಿಮಾ ಮೂಲಕ ಸ್ಪೈ ಆಕ್ಷನ್ ಸಿನಿಮಾಗಳನ್ನು ಹಲವಾರು ವರ್ಷಗಳಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಶಾರುಖ್ ಖಾನ್ ಸಹ ‘ಪಠಾಣ್’ ಹೆಸರಿನಲ್ಲಿ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಮಾಡಿದ್ದಾರೆ. ಎರಡೂ ಸಿನಿಮಾಗಳನ್ನು ನಿರ್ಮಾಣ ಮಾಡಿರುವುದು ಯಶ್ ರಾಜ್ ಫಿಲಮ್ಸ್.

ಇದೀಗ ಯಶ್ ರಾಜ್ ಫಿಲಮ್ಸ್ ಭಾರಿ ಯೋಜನೆಯೊಂದನ್ನು ಹಾಕಿಕೊಂಡಿದ್ದು, ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ಅವರನ್ನು ಮುಖಾ-ಮುಖಿಗೊಳಿಸಲು ಅಣಿಯಾಗುತ್ತಿದೆ. ‘ಪಠಾಣ್ vs ಟೈಗರ್’ ಹೆಸರಿನ ಸಿನಿಮಾ ಮಾಡಲು ಯಶ್ ರಾಜ್ ಫಿಲಮ್ಸ್ ಮುಂದಾಗಿದೆ. ಈ ಹಿಂದಿನ ಸಿನಿಮಾಗಳಲ್ಲಿ ಟೈಗರ್ ಮತ್ತು ಪಠಾಣ್ ಪರಸ್ಪರ ಗೆಳೆಯರಂತೆ ತೋರಿಸಲಾಗಿದೆ. ‘ಪಠಾಣ್’ ಸಿನಿಮಾನಲ್ಲಿ ಶಾರುಖ್ ಖಾನ್ ಕಷ್ಟದಲ್ಲಿದ್ದಾಗ ಟೈಗರ್ ಸಹಾಯಕ್ಕೆ ಬಂದ ರೀತಿಯಲ್ಲಿ ತೋರಿಸಲಾಗಿತ್ತು. ಆದರೆ ಈಗ ಎರಡು ಪಾತ್ರಗಳನ್ನು ವಿರೋಧಿಗಳಾಗಿ ತೋರಿಸಲು ಯೋಜನೆ ಸಿದ್ಧವಾಗುತ್ತಿದೆ.

ಇದನ್ನೂ ಓದಿ:ಸಲ್ಮಾನ್ ಖಾನ್ ಈ ಬಾರಿಯ ಬಿಗ್ ಬಾಸ್​ಗೆ ಪಡೆಯೋ ಸಂಭಾವನೆ ಇಷ್ಟೊಂದಾ?

‘ಪಠಾಣ್ vs ಟೈಗರ್’ ಸಿನಿಮಾನಲ್ಲಿ ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಇಬ್ಬರೂ ಇರಲಿದ್ದು, ಹೃತಿಕ್ ರೋಷನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಮಾತ್ರವಲ್ಲದೆ ಈ ಸಿನಿಮಾನಲ್ಲಿ ಆಲಿಯಾ ಭಟ್, ಆಮಿರ್ ಖಾನ್ ಮತ್ತು ರಣ್ವೀರ್ ಸಿಂಗ್ ಸಹ ಇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿನಿಮಾದ ಚಿತ್ರಕತೆ ಚಾಲ್ತಿಯಲ್ಲಿದ್ದು, ಈ ಸಿನಿಮಾ ಭಾರತದ ದೊಡ್ಡ ಬಜೆಟ್​ನ ಸಿನಿಮಾ ಆಗುವ ಎಲ್ಲ ಲಕ್ಷಗಳೂ ಸಹ ಇವೆ.

ಶಾರುಖ್ ಖಾನ್ ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇನ್ನು ಸಲ್ಮಾನ್ ಖಾನ್ ‘ಕಿಕ್ 2’ ಮತ್ತು ‘ಸಿಂಘಂ-ದಬಂಗ್’ ಸಿನಿಮಾಗಳಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ